ಲೈಂಗಿಕ ದೌರ್ಜನ್ಯ: ಅಪ್ರಾಪ್ತೆಯ ಗರ್ಭಪಾತಕ್ಕೆ ಹೈಕೋರ್ಟ್ ನಕಾರ
Team Udayavani, Sep 1, 2017, 10:21 AM IST
ಬೆಂಗಳೂರು: ತನ್ನ ಮೇಲಾದ ಲೈಂಗಿಕ ದೌರ್ಜನ್ಯದಿಂದಾಗಿ ಧರಿಸಿರುವ ಗರ್ಭವನ್ನು ತೆಗೆಯುವಂತೆ ವೈದ್ಯರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅಪ್ರಾಪ್ತ ಸಂತ್ರಸ್ತೆ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಗರ್ಭಪಾತ ಮಾಡಿಸಿದರೆ ತಾಯಿಯ ಜೀವಕ್ಕೆ ಅಪಾಯವಿದೆ
ಎಂಬ ವೈದ್ಯಕೀಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಮದುವೆ ಆಗುವುದಾಗಿ ಪುಸಲಾಯಿಸಿ ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಘಟನೆ ಬಳಿಕ ಮಕ್ಕಳ ಕಲ್ಯಾಣ ಸಮಿತಿ ಮೂಲಕ ಬಾಲಕಿಯರ ಪೋಷಣಾ ಮಂದಿರಕ್ಕೆ ಸೇರಿಸಲಾಗಿತ್ತು. ಕೆಲ ದಿನಗಳ ಬಳಿಕ ಗರ್ಭ ಧರಿಸಿರುವುದು ಗೊತ್ತಾಯಿತು. ಆಗ ಆಕೆಯನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿದ ಮಕ್ಕಳ ಕಲ್ಯಾಣ ಸಮಿತಿ, ಗರ್ಭಪಾತ ಮಾಡಿಸುವಂತೆ ವೈದ್ಯರಿಗೆ ಕೋರಿಕೆ ಸಲ್ಲಿಸಿತ್ತು. ಆದರೆ, ಈಗಾಗಲೇ ಗರ್ಭ ನಿಂತು 20 ವಾರ ಆಗಿದೆ. ಇಂತಹ ಸಂದರ್ಭದಲ್ಲಿ ಗರ್ಭಪಾತ ಮಾಡಿದರೆ ಜೀವಕ್ಕೆ ಅಪಾಯ. ಹಾಗಾಗಿ, ಗರ್ಭಪಾತ ಸಾಧ್ಯವಿಲ್ಲ ಎಂದು ವೈದ್ಯರು ಶಿಫಾರಸ್ಸು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೊರೆ ಹೋದ ಸಂತ್ರಸ್ತೆ, ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಳು. ಈ ಬಗ್ಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರಿಂದ ವೈದ್ಯಕೀಯ ಅಭಿಪ್ರಾಯ ಪಡೆದುಕೊಳ್ಳುವಂತೆ ಹೈಕೋರ್ಟ್ ಸರ್ಕಾರಿ ವಕೀಲರಿಗೆ ಸೂಚನೆ ನೀಡಿತ್ತು. ಈ ಮಧ್ಯೆ, ಸಂತ್ರಸ್ತೆಯ ಹೇಳಿಕೆ ಆಧರಿಸಿ ಗರ್ಭಪಾತ ಮಾಡಿಸಬಹುದು ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದರಾದರೂ, ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿದ್ದರು.
ಅಂತಿಮವಾಗಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಗರ್ಭಪಾತ ಮಾಡಿಸಿದರೆ ಯುವತಿಯ ಜೀವಕ್ಕೆ ಅಪಾಯವಿದೆ ಎಂಬ ವೈದ್ಯಕೀಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆಕೆಯ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವುದರಿಂದ ಗರ್ಭಪಾತ ಮಾಡಿ ಭ್ರೂಣವನ್ನು ಸಂರಕ್ಷಿಸಿಡಬೇಕು ಎಂದು ಸಂತ್ರಸ್ತೆ ಮಾಡಿದ್ದ ಮನವಿಗೆ “ಗರ್ಭಪಾತಕ್ಕೆ ಅವಕಾಶ ಇಲ್ಲದಿರುವಾಗ ಭ್ರೂಣವನ್ನು ಸಂರಕ್ಷಿಸಿಡುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ಹೇಳಿತು. ಆರೋಪಿ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 376 ಹಾಗೂ ಪೋಸ್ಕೋ ಕಾಯ್ದೆಯ ಸೆಕ್ಷನ್ 4ರಡಿ ಪ್ರಕರಣ ದಾಖಲಾಗಿದ್ದು, ಸದ್ಯ ಆತ ಜೈಲಿನಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.