ಕಾರ್ಕಳ: ರಸ್ತೆಯಲ್ಲಿ ರಿಕ್ಷಾ ಪಾರ್ಕ್-ತೆರವು
Team Udayavani, Sep 2, 2017, 6:15 AM IST
ಉಡುಪಿ: ಕಾರ್ಕಳ ನಗರದ ಮೂರು ಮಾರ್ಗದ ಪೆಟ್ರೋಲ್ ಬಂಕ್ ಸಮೀಪದ ರಸ್ತೆಯಲ್ಲಿ ಆಟೋರಿಕ್ಷಾದವರು ಪಾರ್ಕಿಂಗ್ ಮಾಡುತ್ತಾರೆ ಎಂದು ಶನಿವಾರ ಬೆಳಗ್ಗೆ ಪೊಲೀಸ್ ಫೋನ್-ಇನ್ ಕಾರ್ಯಕ್ರಮದಲ್ಲಿ ಕಾರ್ಕಳದ ನಾಗರಿಕರೊಬ್ಬರು ದೂರು ನೀಡಿದ್ದು, ಈ ಬಗ್ಗೆ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್ ಅವರು ತುರ್ತಾಗಿ ಕ್ರಮ ಕೈಗೊಂಡಿದ್ದಾರೆ.
ಕಾರ್ಯಕ್ರಮದ ಬಳಿಕ ಕಾರ್ಕಳ ವೃತ್ತ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ ಎಸ್‌ಪಿಯವರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಅಧಿಕಾರಿಗಳಿಗೆ ಸೂಚಿಸಿ ಕಾರ್ಕಳ ಮೂರು ಮಾರ್ಗದ ರಸ್ತೆಯಲ್ಲಿ ಪಾರ್ಕ್ ಮಾಡಲಾಗಿದ್ದ ರಿಕ್ಷಾಗಳನ್ನು ಸಿಪಿಐ ಜಾಯ್ ಅಂಥೊನಿಯವರು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಈ ಕ್ಷಿಪ್ರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.