ಅಪಾಯದಲ್ಲಿ ಬುಡಕಟ್ಟು ಸಂಸ್ಕೃತಿ: ಸೀತಾರಾಮ

Team Udayavani, Sep 2, 2017, 10:48 AM IST

GUL.jpg

ಕಲಬುರಗಿ: ವಿವಿಧ ರೀತಿಯ ಅಭಿವೃದ್ಧಿ ಹಾಗೂ ಅರಣ್ಯ ನಾಶದಿಂದ ಬುಡಕಟ್ಟು ಸಂಸ್ಕೃತಿ ಅಪಾಯಕ್ಕೆ ಸಿಲುಕಿದೆ ಎಂದು ಹೈದ್ರಾಬಾದನ ಡಾ| ಬಿ.ಆರ್‌.ಅಂಬೇಡ್ಕರ್‌ ವಿವಿ ಕುಲಪತಿ ಪ್ರೊ| ಕೆ.ಸೀತಾರಾಮ ಕಳವಳ ವ್ಯಕ್ತಪಡಿಸಿದರು.

ಗುವಿವಿಯಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ನಡೆಯುತ್ತಿದ್ದ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಆಯೋಜಿಸಿದ್ದ
ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ, ಗಣಿಗಾರಿಕೆ, ವಿವಿಧ ಯೋಜನೆಗಳನ್ನು ಮಾಡುವುದರಿಂದ ಬಡುಕಟ್ಟು ಜನರಿಗೆ ತೊಂದರೆಯಾಗುತ್ತಿದೆ. ಇದರಿಂದ ಅವರು ತಮ್ಮ ಸ್ಥಳ ಬದಲಾವಣೆ ಮಾಡುತ್ತಾ ವಲಸೆ ಹೋಗುತ್ತಿದ್ದಾರೆ. ಅವರಲ್ಲಿನ ಸಾಂಪ್ರದಾಯಿಕ ಜೀವನ ಶೈಲಿಗೆ ಧಕ್ಕೆಯಾಗುತ್ತಿದೆ. ಅಲ್ಲದೆ,
ಮಾರ್ಪಾಟುಗಳು ಆಗುತ್ತಿವೆ. ಮೂಲ ಬುಡಕಟ್ಟು ಸಂಸ್ಕೃತಿ ಮಾಯವಾಗುವ ಹಂತಕ್ಕೆ ತಲುಪಿದೆ. ಭಾರತ ಸರಕಾರ ಹಾಗೂ ಆಯಾ ರಾಜ್ಯ ಸರಕಾರಗಳು ಸಂಶೋಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಹಣದ ನೆರವು ನೀಡಬೇಕು. ಈ ಕುರಿತು ವಿಷಯ ತಜ್ಞರು, ಸಂಸ್ಕೃತಿ ಸಂಶೋಧಕರು ಕೂಡ ಹೆಚ್ಚು ಆಸಕ್ತಿವಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಗುವಿವಿ ಕುಲಪತಿ ಪ್ರೊ| ಎಸ್‌.ಆರ್‌.ನಿರಂಜನ್‌ ಮಾತನಾಡಿ, ಎರಡು ದಿನಗಳಿಂದ ವಿವಿಯಲ್ಲಿ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಮತ್ತು ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಹಲವಾರು ತಜ್ಞರು ಮಾತನಾಡಿದ್ದಾರೆ. ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಈ ನಿಟ್ಟಿನಲ್ಲಿ ನಿರಂತರ ಸಂಶೋಧನೆ ಅಗತ್ಯವೆಂದು ಹಾಗೂ ಸಂಶೋಧಕರು ಹೆಚ್ಚು ಬುಡಕಟ್ಟು ಸಂಸ್ಕೃತಿಯನ್ನು ಇನ್ನಷ್ಟು ಸಂಶೋಧನೆ
ಒಳಪಡಿಸಬೇಕು ಎಂದರು.

ಗುವಿವಿ ಸಮಾಜ ವಿಜ್ಞಾನ ನಿಕಾಯದ ಡೀನ್‌ ಪ್ರೊ| ಎನ್‌. ಪಾರ್ವತಮ್ಮ, ಸಿಂಡಿಕೇಟ್‌ ಸದಸ್ಯ ಈಶ್ವರ ಇಂಗಿನ್‌, ಮೌಲ್ಯಮಾಪನ ಕುಲಸಚಿವ ಡಾ| ಸಿ.ಎಸ್‌. ಪಾಟೀಲ, ಹಣಕಾಸು ಅಧಿಕಾರಿ ಪ್ರೊ| ಲಕ್ಷ್ಮಣ ರಾಜನಾಳಕರ್‌ ವೇದಿಕೆಯಲ್ಲಿದ್ದರು.

ಕುಲಸಚಿವ ಡಾ| ದಯಾನಂದ ಅಗಸರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಬಿ.ಶೀರಾಮಲು ನಿರೂಪಿಸಿದರು. ರಾಜ್ಯ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಕೆ.ರೇವಣಪ್ಪ ವಂದಿಸಿದರು. ಗುವಿವಿ 
ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

3-editorial

Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.