ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು
Team Udayavani, Sep 2, 2017, 12:08 PM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಶುಕ್ರ ವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಣಸಮಾರನಹಳ್ಳಿ ಬಳಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಮೂಲದ ಚಾಲಕ ಅಶ್ವತ್ಥಬಾಬು (40) ಹಾಗೂ ಮುನಿರಾಜು (64) ಸ್ಥಳದಲ್ಲೇ ಮೃತಪಟ್ಟರೆ, ಮುನಿರಾಜು ಅವರ ಪುತ್ರ ಪ್ರಶಾಂತ್ ಆಸ್ಪತ್ರೆಯಲ್ಲಿ ಮೃತರಾದರು. ಗಣಪತಿ (40), ನಾಗರಾಜು (45), ದರ್ಶನ್ (33) ಹಾಗೂ ಕೋರಿಯರ್ ವಾಹನ ಚಾಲಕ ಮಾಣಿಕ್ಯಂ (21), ಭರತ್ ಯಾದವ್ (22) ಮತ್ತು 407 ವಾಹನ ಚಾಲಕ ಫರಹೆಮ್(29) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಎಕ್ಸ್‌ಯುವಿ ವಾಹನ ಹುಣಸಮಾರನಹಳ್ಳಿ ಮೇಲ್ಸುತ್ತುವೆಯಲ್ಲಿ ಬರುವಾಗ ಟೈರ್ ಪಂಕ್ಚರ್ ಆಗಿ, ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿಯೊಡೆದಿದೆ. ಬಳಿಕ ಹುಣಮಾರನಹಳ್ಳಿ ಕಡೆ ಹೋಗುತ್ತಿದ್ದ ಬ್ಲೂಡಾರ್ಟ್ ಕೋರಿಯರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ 407 ವಾಹನ ಕೊರಿಯರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎಕ್ಸ್‌ಯುವಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತ ದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಗಾಯಾಳು ನೋಡಲು ಬರುತ್ತಿದ್ದರು
ಅಪಘಾತಕ್ಕೀಡಾದ ಎಕ್ಸ್‌ಯುವಿಯಲ್ಲಿದ್ದ 6 ಮಂದಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹಂಗಿನನಾಳ ಗ್ರಾಮದ ಒಂದೇ ಕುಟುಂಬದವರಾರಿದ್ದು, ಮಾಜಿ ಸಚಿವ ವಿ. ಮುನಿಯಪ್ಪ ಅವರ ಸಂಬಂಧಿಕರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಮುನಿರಾಜು ಅವರ ಸಂಬಂಧಿಕರು ರಸ್ತೆ ಅಪಘಾತದಲ್ಲಿ ಗಾಯಗೊಂಡು, ನಗರದ ಸ್ಪರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯರ ಜತೆ ಬರುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ ಎಂದು ಸಂಚಾರ ಪೊಲೀಸರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.