ಎಲ್‌ಐಸಿಗೆ ದೇಶದಲ್ಲಿಯೇ ಅಗ್ರಸ್ಥಾನ: ಎಚ್‌.ಕೆ. ರವಿಕಿರಣ


Team Udayavani, Sep 2, 2017, 12:54 PM IST

hub3.jpg

ಧಾರವಾಡ: ಭಾರತೀಯ ಜೀವ ವಿಮಾ ನಿಗಮವು ವಿಮಾ ಕ್ಷೇತ್ರದಲ್ಲಿ ಶೇ.76.09 ರಷ್ಟು ಮತ್ತು ಪ್ರೀಮಿಯಂ ವಿಭಾಗದಲ್ಲಿ ಶೇ.71.07ರಷ್ಟು ಮಾರುಕಟ್ಟೆ ಪಾಲುಗಾರಿಕೆ ಹೊಂದುವುದರ ಮೂಲಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಎಲ್‌ಐಸಿ ಧಾರವಾಡ ವಿಭಾಗದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಎಚ್‌.ಕೆ. ರವಿಕಿರಣ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಧಾರವಾಡ ವಿಭಾಗದಿಂದ 2016-17ನೇ ಸಾಲಿನಲ್ಲಿ ಒಟ್ಟು 1,70,000 ಪಾಲಿಸಿ ಮಾರಾಟವಾಗಿ 260.97 ಕೋಟಿಯಷ್ಟು ಮೊದಲ ಪ್ರೀಮಿಯಂ ಸಂಗ್ರಹಣೆ ಆಗಿದೆ. 2017-18 ರಲ್ಲಿ ಒಟ್ಟು 261 ಕೋಟಿ ಪ್ರೀಮಿಯಂ ಹೊಂದಲು ಗುರಿ ಇರಿಸಿಕೊಳ್ಳಲಾಗಿದೆ. ಸಂಗ್ರಹಣೆಯಾದ ಒಟ್ಟು ಪ್ರೀಮಿಯಂ ಆದಾಯ 1422.21 ಕೋಟಿ ಹಾಗೂ ಸಂಗ್ರಹಣೆಯಾದ ಒಟ್ಟು ಆದಾಯ 1516.76 ಕೋಟಿಯಷ್ಟಾಗಿದೆ. ಡೆತ್‌ ಕ್ಲೇಮ್‌ ಪಾಲಿಸಿಗಳ ಸಂಖ್ಯೆ ಒಟ್ಟು 8228 ಆಗಿದ್ದು, 70.17 ಕೋಟಿ ಹಣ ಸಂದಾಯ ಮಾಡಲಾಗಿದೆ ಎಂದರು. 

ಹುಬ್ಬಳ್ಳಿಯಲ್ಲಿ ವಲಯ ಕಚೇರಿ: ಧಾರವಾಡ ಹಣಕಾಸು ಮತ್ತು ಲೆಕ್ಕಪತ್ರ ವಿಭಾಗದಿಂದ ಕಳೆದ ವರ್ಷದ ಆರ್ಥಿಕ ಲೆಕ್ಕ ಪತ್ರಗಳನ್ನು ಮೇಲಧಿಕಾರಿಗಳಿಗೆ ಸಮರ್ಪಿಸುವಲ್ಲಿ ಅಖೀಲ ಭಾರತ ಮಟ್ಟದಲ್ಲಿ ಮತ್ತು ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದೆ. ಧಾರವಾಡ ವಿಭಾಗದ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆ, ಗದಗ, ಹಾವೇರಿ ಮತ್ತು ಕಾರವಾರ ಜಿಲ್ಲೆ ಒಳಗೊಂಡಿದ್ದು, 15 ಶಾಖಾ ಕಚೇರಿಗಳು ಮತ್ತು 16 ಉಪಗೃಹ ಸಂಪರ್ಕ ಶಾಖೆಗಳಿವೆ.

12 ಮಿನಿ ಆಫೀಸ್‌, 1 ಪಿಂಚಣಿ ಮತ್ತು ಸಮೂಹ ವಿಮಾ ಶಾಖೆ ಕಾರ್ಯ ನಿರ್ವಹಿಸುತ್ತಿವೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಂದು ಪ್ರತ್ಯಕ್ಷ ಮಾರುಕಟ್ಟೆ ವಿಭಾಗವನ್ನು ಹಾಗೂ ಪ್ರತಿಷ್ಠಿತ ಗ್ರಾಹಕರ ಬೇಡಿಕೆ ಈಡೇರಿಸಲು ಗ್ರಾಹಕರ ವಲಯ ಕಚೇರಿಯನ್ನು ಹುಬ್ಬಳ್ಳಿಯಲ್ಲಿ ಪ್ರಾರಂಭ ಮಾಡಲಾಗಿದೆ ಎಂದರು. 

ಧಾರವಾಡ ವಿಭಾಗದಲ್ಲಿ 9168 ಎಲ್‌ಐಸಿ ಪ್ರತಿನಿಧಿಗಳು, 150 ಅಭಿವೃದ್ಧಿ ಅಧಿಕಾರಿಗಳು ಮತ್ತು 904 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಧಾರ ಕಾರ್ಡ್‌ ವಿವರಗಳನ್ನು ಪಾಲಿಸಿಗಳಲ್ಲಿ ದಾಖಲಿಸಲಾಗುತ್ತಿದೆ. ನಾಗರಿಕರಿಗೆ ಟರ್ಮ್ ಇನ್ಸುರೆನ್ಸ್‌ ಹಾಗೂ ಪೆನ್ಶನ್‌ ಪಾಲಿಸಿಗಳ ಮಾರಾಟದ ಕುರಿತು ತಿಳಿವಳಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಸೆ.1 ರಿಂದ ವಿಮಾ ಸಪ್ತಾಹ: ಭಾರತೀಯ ಜೀವ ವಿಮಾ ನಿಗಮವು 61ನೇ ವರ್ಷಕ್ಕೆ ಕಾಲಿಟ್ಟಿದ್ದು, ಸೆ.1 ರಿಂದ 7ರ ವರೆಗೆ ದೇಶದ ಎಲ್ಲ ಶಾಖೆಗಳಲ್ಲಿ ವಿಮಾ ಸಪ್ತಾಹ ಆಚರಿಸಲಾಗುತ್ತಿದೆ. ಸಪ್ತಾಹದ ಅಂಗವಾಗಿ ಪರಿಸರ ಸಂರಕ್ಷಣೆ ಹಾಗೂ ಜಾಗೃತಿ ಕಾರ್ಯಕ್ರಮ ಸೇರಿದಂತೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದರು. ಎಲ್‌ ಐಸಿ ಸಿಆರ್‌ಎಂ. ವಿಭಾಗದ ಪ್ರಬಂಧಕ ಎನ್‌. ನಾಗರಾಜ, ಮಾರುಕಟ್ಟೆ ಪ್ರಬಂಧಕ ಪ್ರಕಾಶ ಕೆ. ಬಂಟ, ಎಸ್‌.ಎಂ. ಮಮದಾಪುರ, ಸಂತೋಷ ಬಂಟ ಇತರರಿದ್ದರು. 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.