ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ :ವಾಟಾಳ್ ಸೇರಿ ಹಲವರು ವಶಕ್ಕೆ
Team Udayavani, Sep 2, 2017, 1:44 PM IST
ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಸಾ.ರಾ.ಗೋವಿಂದ್ ಸೇರಿದಂತೆ ಕನ್ನಡ ಸಂಘಟನೆಗಳ ನೂರಾರು ಮಂದಿ ಭಾಗಿಯಾಗಿದ್ದರು. ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು.
ನಾಡದ್ರೋಹಿ ಕೃತ್ಯ ಎಸಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರನ್ನು ಮತ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಮ ಕೈಗೊಳ್ಳದೆ ಹೋದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.