ಕಾಲೇಜು ಕಟ್ಟಡ ನಿರ್ಮಾಣಕ್ಕೆ ಗಿಡಗಳು ಬಲಿ!
Team Udayavani, Sep 2, 2017, 2:51 PM IST
ಮೊಳಕಾಲ್ಮೂರು: ಮಳೆ ಕಡಿಮೆಯಾಗಿ ಬರ ಆವರಿಸಿರುವ ಈ ಸಂದರ್ಭದಲ್ಲಿ ಪರಿಸರ ರಕ್ಷಣೆ ಮಾಡಬೇಕಾಗಿದೆ. ಹೆಚ್ಚು ಗಿಡ ನೆಟ್ಟು ಪೋಷಿಸಬೇಕು ಎಂದು ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಮಾತ್ರ ಇದಕ್ಕೆ ಅಪವಾದ. ಕಾಲೇಜು ಆವರಣದಲ್ಲಿ ಬೆಳೆದಿದ್ದ ಗಿಡಗಳನ್ನು ಕಡೊದು ಹಾಕಿ ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದೆ. ಇದರಿಂದ ಕಾಲೇಜಿನ ಆವರಣದ ಅಂದವೇ ಹಾಳಾಗುವಂತಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಟ್ಟಣದಲ್ಲಿ ವಿಶಾಲ ಶಾಲಾ ಆವರಣ ಇರುವುದು ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮಾತ್ರ. ಇಲ್ಲಿ ನಾಮಕಾವಸ್ತೆಗೆ ನೆಟ್ಟಿದ್ದ ವಿವಿಧ ತಳಿಯ ಸಸಿಗಳು ಒಣಗಲಾರಂಭಿಸಿದ್ದವು. ಇದನ್ನು ಗಮನಿಸಿದ ಸಾರ್ವಜನಿಕರು ಅಂತಹ ಗಿಡಗಳಿಗೆ ಕಳೆದ 5 ವರ್ಷಗಳಿಂದ ಟ್ಯಾಂಕರ್ ನೀರುಣಿಸಿ ಪರಿಸರ ಸಂರಕ್ಷಣೆ ಮಾಡಿದ್ದರು. ಈ ಗಿಡಗಳು ಸಮೃದ್ಧವಾಗಿ ಬೆಳೆಯುತ್ತಿದ್ದಂತೆ ಅವುಗಳನ್ನು ಕಡಿದು ಹಾಕುತ್ತಿರುವ ಕಾಲೇಜಿನ ಆಡಳಿತ ಮಂಡಳಿ ಕಟ್ಟಡ ನಿರ್ಮಾಣ ಮಾಡುತ್ತಿದೆ. ಈ ಸ್ಥಳದಲ್ಲಿ 5 ವರ್ಷಗಳಿಂದ ಬೆಳೆದಿದ್ದ ಗಿಡಗಳ ಮಾರಣಹೋಮದಿಂದ ಪರಿಸರ ಹಾನಿ ಉಂಟಾಗುತ್ತಿದೆ. ಯಾವುದೇ ಗಿಡಗಳನ್ನು ಕಡಿಯಬೇಕಾದರೆ ಅರಣ್ಯ ಇಲಾಖೆಯ ಅನುಮತಿ ಅಗತ್ಯ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಗಿಡಗಳನ್ನು ಕಡಿಯಲು ಅನುಮತಿ ನೀಡದ್ದಾರೆ. ಹಾಗಾಗಿ ಪರಿಸರ ನಾಶದಲ್ಲಿ ಅವರ ಪಾತ್ರವೂ ಇದೆ ಎನ್ನಲಾಗುತ್ತಿದೆ. ಪರಿಸರವನ್ನು ಉಳಿಸಿ ಬೆಳೆಸಿ ಸಂರಕ್ಷಿಸಬೇಕೆಂದು ಪ್ರಚಾರ ಮಾಡುವ ಶಿಕ್ಷಣ ಇಲಾಖೆ, ಇಲ್ಲಿ ಮಾತ್ರ ಅದನ್ನು ಮರೆತಂತಿದೆ. ಸಾರ್ವಜನಿಕರು ಜತನದಿಂದ ಕಾಪಾಡಿಕೊಂಡು ಬಂದಿದ್ದ ಗಿಡಗಳನ್ನು ಕಡಿದು ಹಾಕಲು ಅನುಮತಿ ನೀಡಿ ಜನರ ಹಾಗೂ ಶಾಲಾ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಕಾಲೇಜು ಆವರಣದಲ್ಲಿ ಬೆಳೆದಿರುವ ಗಿಡಗಳನ್ನು ಹಾಳು ಮಾಡಬಾರದು. ಕಾಲೇಜಿನ ಆವರಣದಲ್ಲಿ ಸಾಕಷ್ಟು ಖಾಲಿ ಜಾಗ ಇದ್ದು, ಅಲ್ಲಿ ಕಟ್ಟಡ ನಿರ್ಮಿಸಿಕೊಳ್ಳಲು ಅವಕಾಶವಿದೆ. ಆದರೆ ಮಧ್ಯಭಾಗದಲ್ಲಿ ಕಟ್ಟಡ ನಿರ್ಮಿಸುತ್ತಿರುವುದು ಅವೈಜ್ಞಾನಿಕವಾಗಿದ್ದು, ಈಗಿರುವ ಕಾಲೇಜು ಕಟ್ಟಡದಿಂದ ಬೇರ್ಪಡಿಸಿದರೆ ಅನೈತಿಕ ಚಟುವಟಿಕೆಗೆ ಅವಕಾಶ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬ ಮಾತುಗಳೂ ಕೇಳಿಬಂದಿವೆ. ಆದ್ದರಿಂದ ಕೂಡಲೇ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಿ ಬೇರೆ ಕಡೆ ನಿರ್ಮಿಸಬೇಕು. ಈ ಮೂಲಕ ಅಳಿದುಳಿದಿರುವ ಅಲ್ಪಸ್ಪಲ್ಪ ಜಾಗದಲ್ಲಿರುವ ಗಿಡಗಳನ್ನು ರಕ್ಷಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.