ಟಿಎ-ಡಿಎ ಪ್ರಕರಣ: ಬೆಚ್ಚಿ ಬಿದ್ದ “ಕೈ’ಪರಿಷತ್‌ ಸದಸ್ಯರು


Team Udayavani, Sep 3, 2017, 6:00 AM IST

Congress-700.jpg

ಬೆಂಗಳೂರು: ಸುಳ್ಳು ದಾಖಲೆ ನೀಡಿ ಟಿಎ-ಡಿಎ ಪಡೆದ ಪ್ರಕರಣ ತೀವ್ರ ವಿವಾದಕ್ಕೊಳಗಾಗಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಐವರು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರು ಸಹವಾಸವೇ ಬೇಡ ಎಂದು ಬೆಂಗಳೂರು ಮತದಾರರ ಪಟ್ಟಿಯ ವಿಳಾಸದಿಂದಲೇ
“ಶಿಫ್ಟ್’ಆಗಿದ್ದಾರೆ.

ಟಿಎ-ಡಿಎ ಪ್ರಕರಣ ಚುನಾವಣಾ ಆಯೋಗ ತಲುಪಿದ್ದರಿಂದ ಬೆಚ್ಚಿ ಬಿದ್ದ ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರಾದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ನೂತನ ಸಚಿವ ಆರ್‌. ಬಿ.ತಿಮ್ಮಪುರ್‌, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಬೋಸರಾಜ್‌, ಎಂ.ಡಿ.ಲಕ್ಷ್ಮಿನಾರಾಯಣ ಅವರು  ಬೆಂಗಳೂರು ಮತದಾರರ ಪಟ್ಟಿಗೆ ಗುಡ್‌ಬೈ ಹೇಳಿ, ತಮ್ಮ ಸ್ವ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಂಡಿದ್ದಾರೆ.

2016, ಸೆಪ್ಟೆಂಬರ್‌ 28 ರಂದು ನಡೆದ ಬಿಬಿ ಎಂಪಿ-ಮೇಯರ್‌ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಗ್ಗೆ ವಿಳಾಸ ನೀಡಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದ ಈ ಐವರು ಸದ ಸ್ಯರ ಹೆಸರು ಪಾಲಿಕೆ ಆಯುಕ್ತರು ಸಿದ್ದಪಡಿಸಿರುವ ಈ ಬಾರಿಯ ಬಿಬಿಎಂಪಿ ಮೇಯರ್‌ -ಉಪ ಮೇಯರ್‌ ಚುನಾವಣೆಯಲ್ಲಿ ಮತದಾನ ಮಾಡುವವರ ಪಟ್ಟಿಯಲ್ಲೇ ಇಲ್ಲ.

ಕಳೆದ ಬಾರಿ ಮೇಯರ್‌-ಉಪ ಮೇಯರ್‌ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಟಿಎ-ಡಿಎ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ  ಮೊದಲಿಗೆ ಡಾ.ಜಿ.ಪರಮೇಶ್ವರ್‌ ತಮ್ಮ ಹೆಸರು ಬೆಂಗಳೂರು ಮತದಾರರ ಪಟ್ಟಿಯಿಂದ ತೆಗೆದು ಹಾಕಿಸಿದ್ದರು. ಅದಾದ ನಂತರ ಆರ್‌.ಬಿ.ತಿಮ್ಮಾಪುರ್‌ 17 ಜನ ವರಿ 2017 ರಂದು ತಮ್ಮ ಹೆಸರು ಮತ ದಾರರ ಪಟ್ಟಿಯಿಂದ ತೆಗೆದುಹಾಕಲು ನಮೂನೆ 7 ಸಲ್ಲಿಸಿದ್ದರು.

ಟಿಎ-ಡಿಎ ಪ್ರಕರಣ ಚುನಾವಣಾ ಆಯೋಗದ ಮೆಟ್ಟಿಲು ಹತ್ತಿದ ನಂತರ ಮಲ್ಲೇಶ್ವರಂ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿದ್ದ ಬೋಸ್‌ ರಾಜ್‌ ಅವರು  2017 ಜುಲೈ 7 ರಂದು, ಅಲ್ಲಂ ವೀರಭದ್ರಪ್ಪ ಅವರು ಫೆಬ್ರವರಿ 23 ಹಾಗೂ ಎಂ.ಡಿ. ಲಕ್ಷ್ಮಿನಾರಾಯಣ ಅವರು ಮೇ 20 ರಂದು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಬಾರಿ ಮತದಾನದ ನಂತರ ಸುಳ್ಳು ವಿಳಾಸ ನೀಡಿ ಟಿಎ-ಡಿಎ ಪಡೆದ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಸಂಬಂಧಿಸಿ ದಂತೆ ಏಳು ಕಾಂಗ್ರೆಸ್‌ ಹಾಗೂ ಓರ್ವ ಜೆಡಿಎಸ್‌ ಸದಸ್ಯರ ಸದ ಸ್ಯತ್ವವನ್ನೇ ಅನರ್ಹಗೊಳಿಸುವಂತೆ ಬಿಬಿಎಂಪಿ ಪ್ರತಿ ಪಕ್ಷ ನಾಯಕ ಪದ್ಮನಾಭ ರೆಡ್ಡಿ ಚುನಾವಣಾ ಆಯೋಗಕ್ಕೆ ದೂರು ನೀಡಿ ಅದು ಇದೀಗ ರಾಜ್ಯಪಾಲರ ಅಂಗಳ ತಲುಪಿದೆ. ಪ್ರಕರಣ ಮುಂದೆ ಯಾವ ಸ್ವರೂಪ ಪಡೆಯುವುದೋ ಕಾದು ನೋಡ ಬೇಕಿದೆ.

– ಎಸ್‌. ಲ ಕ್ಷ್ಮಿನಾರಾಯಣ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.