ಭಕ್ತರ ಜೈಕಾರ ನಡುವೆ ವಿನಾಯಕನ ವಿಸರ್ಜನೆ
Team Udayavani, Sep 3, 2017, 12:13 PM IST
ರಾಮನಗರ: ತಾಲೂಕಿನ ಚನ್ನಮಾನಹಳ್ಳಿ ಗ್ರಾಮದಲ್ಲಿ ಸ್ಥಾಪಿಸಿದ್ದ ಶ್ರೀ ವಿದ್ಯಾಗಣಪತಿ ಮೂರ್ತಿಯನ್ನು ಗ್ರಾಮಸ್ಥರು ಭಕ್ತಿ, ಶ್ರದ್ಧೆಯಿಂದ ಶುಕ್ರವಾರ ವಿಸರ್ಜಿಸಿದರು.
ಗ್ರಾಮದ ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಕ್ತರ ನೆರವಿನಲ್ಲಿ ಸತತ 34 ವರ್ಷಗಳಿಂದ ಗಣೇಶ ಮಹೋತ್ಸವವನ್ನು ಆಚರಿಸುತ್ತಿದ್ದಾರೆ. ಮಹೋತ್ಸವದ ಅಂಗವಾಗಿ ಗ್ರಾಮದ ದೇವಾಲಯಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ದಿನನಿತ್ಯ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಕಾರ್ಯಕ್ರಮ ಮತ್ತು ಗ್ರಾಮದ ಮಕ್ಕಳು ಸಾಂಸ್ಕೃತಿಕರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು.
ವಿಸರ್ಜನಾ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಮುತ್ತಿನ ಪಲ್ಲಕ್ಕಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಇದರೊಟ್ಟಿಗೆ ಗ್ರಾಮ ದೇವತೆಗಳಾದ ಶ್ರೀ ಮಾರಮ್ಮ, ಶ್ರೀ ಮುತ್ಯಾಲಮ್ಮ, ಶ್ರೀ
ಆಂಜನೇಸ್ವಾಮಿ, ಹಲಗೆ ದೇವರು, ಹುಲಿವಾಹನ ದೇವರ ಉತ್ಸವ ಮೂರ್ತಿಗಳು ಇದ್ದವು. ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ನಂತರ ಗಣಪತಿ ಮೂರ್ತಿಯನ್ನು ದೊಡ್ಡಕೆರೆಯಲ್ಲಿ ವಿಸರ್ಜಿಸಲಾಯಿತು.
ವಿಸರ್ಜನೆಯ ಅಂಗವಾಗಿ ಭಕ್ತರಿಗೆ ಹೆಸರುಬೇಳೆ, ಪಾನಕ, ಮಜ್ಜಿಗೆ, ಅನ್ನಪ್ರಸಾದ ವಿತರಣೆ ನೆರೆವೇರಿತು. ಮೆರವಣಿಗೆಯಲ್ಲಿ ಸಂಘದ ಪದಾಧಿಕಾರಿಗಳಾದ ಭಾಸ್ಕರ, ಯಜಮಾನ ಹೊನ್ನಪ್ಪ, ರೇವಣ್ಣ, ಗ್ರಾಮಪ ಪ್ರಮುಖರಾದ ಅರ್ಕೇಶ್, ನಾಗೇಶ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.