ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಮಂಗಲ ಆಯ್ಕೆ


Team Udayavani, Sep 3, 2017, 1:03 PM IST

cham-1.jpg

ಹನೂರು: ಮಂಗಲ ಗ್ರಾಮವು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು,
45 ಲಕ್ಷ ರೂ. ಅನುದಾನದಲ್ಲಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿ
ಸಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಾಪಂ ನೋಡೆಲ್‌
ಅಧಿಕಾರಿ ಹನುಮಶೆಟ್ಟಿ ತಿಳಿಸಿದರು.

ಹನೂರು ಸಮೀಪದ ಮಂಗಲ ಗ್ರಾಮ ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಆಯ್ಕೆ ಕುರಿತು ಆಯೋಜಿಸಿದ್ಧ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಅವರಿಗೆ ಭೌತಿಕ ಹಾಗೂ ಸಾಮಾಜಿಕ ಮೂಲ ಸೌಕರ್ಯವನ್ನು ಒದಗಿಸುವುದರ ಮೂಲಕ ಅವರ ಸಾಮಾಜಿಕ,
ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಾಗೂ ಪರಿಶಿಷ್ಟ ಹಾಗೂ ಇತರೆ ವರ್ಗದ ನಡುವೆ ಇರುವ ವ್ಯತ್ಯಾಸವನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಈ ದಿಸೆಯಲ್ಲಿ ರಾಜ್ಯದಲ್ಲಿ 200 ಗ್ರಾಮಗಳು ಆಯ್ಕೆಯಾಗಿದ್ದು, ಇದರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 45, ಮೈಸೂರು ಜಿಲ್ಲೆಯಲ್ಲಿ 45, ಕಲಬುರುಗಿ ಜಿಲ್ಲೆಯಲ್ಲಿ 45, ಕೋಲಾರ 35 ಹಾಗೂ ಚಾ.ನಗರ ಜಿಲ್ಲೆಯಲ್ಲಿ 30 ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿದ್ದು, ಅದರಲ್ಲಿ ಮಂಗಲ ಗ್ರಾಮವು ಸೇರಿದೆ ಎಂದು ತಿಳಿಸಿದರು. 45 ಲಕ್ಷ ರೂ.ಅನುದಾನ: ಈ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಿಗೆ ಕೇಂದ್ರ
ಸರ್ಕಾರದಿಂದ 25 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 20 ಲಕ್ಷ ರೂ. ಅನುದಾನ
ದೊರೆಯಲಿದೆ. ಈಗಾಗಲೇ ಕೇಂದ್ರ ಸರ್ಕಾರ ದಿಂದ 40 ಕೋಟಿ ರೂ. ಹಾಗೂ ರಾಜ್ಯ
ಸರ್ಕಾರದಿಂದ 40 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿವರಿಸಿದರು.

ಗ್ರಾಮಸ್ಥರ ಸಹಕಾರ ಪಡೆಯಿರಿ: ಈ ಅನುದಾನದಲ್ಲಿ ಎಸ್ಸಿ, ಎಸ್ಟಿ ವರ್ಗದ ಕಾಲೋನಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಆದ್ದರಿಂದ ಗ್ರಾಪಂ ಜನಪ್ರತಿನಿಧಿಗಳು, ಅಧಿಕಾರಿಗಳು ಗ್ರಾಮಸ್ಥರ ಸಹಕಾರ ಪಡೆದು ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. 

ಗ್ರಾಪಂ ಪಿಡಿಒ ಶಿವಪ್ರಸಾದ್‌ ಮಾತನಾಡಿ, ಆದರ್ಶ ಗ್ರಾಮ ಯೋಜನೆಯ ಅನುದಾನದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಅಂಗನವಾಡಿ ಹಾಗೂ ಶಾಲಾ ಕಟ್ಟಡ ನಿರ್ಮಾಣ, ದುರಸ್ತಿ ಸೇರಿದಂತೆ ಮೂಲ ಸೌಕರ್ಯಕ್ಕೆ ಸಂಬಧಿಸಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ವಿವರಿಸಿದರು.

ಕ್ರಿಯಾಯೋಜನೆ ಆಗಬೇಕು: ಈಗಾಗಲೇ ಈ ಯೋಜನೆಯಡಿ ಕೈಗೊಳ್ಳಬದಾದ ಕಾಮಗಾರಿಗಳ ಬಗ್ಗೆ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕ್ರಿಯಾಯೋಜನೆ ತಯಾರಿಸಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಈ ಯೋಜನೆಯಡಿ ಗ್ರಾಮದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆಯಲಾಯಿತು. ಈ ವೇಳೆ ತಾಪಂ ಸದಸ್ಯೆ ಮಾಣಿಕ್ಯ ಎಚ್‌.
ಪುಟ್ಟರಾಜು, ಗ್ರಾಪಂ ಅಧ್ಯಕ್ಷೆ ಪುಷ್ಪಾಮೂರ್ತಿ, ಉಪಾಧ್ಯಕ್ಷ ಉಮೇಶ್‌, ಗ್ರಾಪಂ ಸದಸ್ಯರಾದ
ಕೆ.ಚಿಕ್ಕಸ್ವಾಮಿ, ವಿಶ್ವೇಶ್ವರ್‌ಪ್ರಸಾದ್‌, ಕನಕರಾಜು, ಡಿ.ವೀರಭದ್ರಯ್ಯ, ಸರೋಜಾ, ಗ್ರಾಮಸ್ಥರು
ಹಾಗೂ ಶಾಲೆಯ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.