ಇಂದಿನಿಂದ ಕೆಪಿಎಲ್ ಮೈಸೂರು ಚರಣ ಆರಂಭ
Team Udayavani, Sep 4, 2017, 9:30 AM IST
ಮೈಸೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟಿ20 ಕ್ರಿಕೆಟ್ ಮೈಸೂರು ಚರಣ ಸೋಮವಾರದಿಂದ ಆರಂಭವಾಗಲಿದೆ. ಶ್ರೀಕಂಠದತ್ತ ನರಸಿಂಹರಾಜ್ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳಿಗೆ ಮೈಸೂರು ರಾಜ ಮನೆತನದ ಮಹಾರಾಣಿ ಪ್ರಮೋದಾ ದೇವಿ ಚಾಲನೆ ನೀಡಲಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೈಸೂರು ವಾರಿಯರ್ಸ್ ತಂಡ ಬಿಜಾಪುರ ಬುಲ್ಸ್ ತಂಡವನ್ನು ಎದುರಿಸಲಿದೆ. ಈ ಕುರಿತಂತೆ ರವಿವಾರವೇ ಸಾಂಸ್ಕೃತಿಕ ನಗರಿಯಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ಕ್ರಿಕೆಟ್ ದಂತಕಥೆ ಜಿ.ಆರ್.ವಿಶ್ವನಾಥ್ ಕೂಟದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಇದೇ ವೇಳೆ ಕೆಪಿಎಲ್ 8 ತಂಡಗಳ ನಾಯಕರು ಹಾಜರಿದ್ದರು. ಈ ವೇಳೆ ಗರಿಷ್ಠ ರನ್ ಸಾಧಕನಿಗೆ ನೀಡುವ ಆರೆಂಜ್ ಕ್ಯಾಪ್. ಗರಿಷ್ಠ ವಿಕೆಟ್ ಪಡೆದ ಆಟಗಾರನಿಗೆ ನೀಡುವ ಪರ್ಪಲ್ ಕ್ಯಾಪ್ ಅನ್ನು ವಿಶ್ವನಾಥ್ ಅನಾವರಣ ಮಾಡಿದರು.
ಕರ್ನಾಟಕ ಕ್ರಿಕೆಟ್ ಸಂಸ್ಥೆ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ ಮಾತನಾಡಿದರು. ಮೈಸೂರು ಕೆಪಿಎಲ್ ಕ್ರಿಕೆಟ್‌ಗೆ ಅಪಾರ ಅಭಿಮಾನಿ ಬಳಗವನ್ನು ಹೊಂದಿದೆ. ಹೀಗಾಗಿ ಇಲ್ಲಿ ಕೂಟವನ್ನು ಆಯೋಜಿಸುವುದಕ್ಕೆ ಮುಂದೆ ಬಂದೆವು. ಇಲ್ಲಿ ಮತ್ತಷ್ಟು ಹೆಚ್ಚಿನ ಜನಪ್ರಿಯತೆಯನ್ನು ನಾವುಗಳಿಸಿಕೊಳ್ಳಲಿದ್ದೇವೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್
Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.