ರೈಲಿಗೆ ಅಂಬಿಗರ ಚೌಡಯ್ಯ ಹೆಸರಿಡಿ


Team Udayavani, Sep 4, 2017, 4:21 PM IST

YAD.jpg

ಯಾದಗಿರಿ: ಎಕ್ಸ್‌ಪ್ರೆಸ್‌ ರೈಲಿಗೆ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಹೆಸರಿಡಬೇಕೆಂದು ಆಗ್ರಹಿಸಿ ಟೋಕರಿ ಕೋಲಿ ಸಮಾಜದ ಬಾಂಧವರು ನಗರದಲ್ಲಿ ರವಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಸುಭಾಶ್ಚಚಂದ್ರ ಬೋಸ್‌ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನೆ ನಡೆಸಿದ ಸಮಾಜದ ಬಾಂಧವರು, ಕೂಡಲೇ ಒಂದು ಎಕ್ಸ್‌ಪ್ರೆಸ್‌ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮಾತನಾಡಿ, 12ನೇ ಶತಮಾನದಲ್ಲಿ
ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಪ್ರಮುಖರಾಗಿದ್ದಾರೆ. ಹರಿಗೋಲಿನಲ್ಲಿ ಹೊಳೆಯನ್ನು ದಾಟಿಸುವ ಕಾಯಕ ಮಾಡಿಕೊಂಡು ಜನರಿಗೆ ನದಿಯ
ಒಂದು ದಡದಿಂದ ಇನ್ನೊಂದು ದಡಕ್ಕೆ ಹೋಗಲು ಅನುವು ಮಾಡಿಕೊಡುತ್ತಾ ಅನೇಕ ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಮಹತ್ವದ ಕೊಡುಗೆ ನೀಡಿದ್ದಾರೆ. ಕಬ್ಬಲಿಗ ಸಮಾಜದಿಂದ ಬಂದು
ಮಹಾನ್‌ ವಚನಗಳನ್ನು ರಚಿಸುವ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದರು.

ಸಾಧನೆ ಮಾಡಿದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರು ಚಿರಸ್ಥಾಯಿಯಾಗಿ ಉಳಿವಂತಾಗಲು ಇವರ ಹೆಸರನ್ನು ಕರ್ನಾಟಕದಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲಿಗೆ ಹೆಸರು ಇಡಬೇಕೆಂದು ಒತ್ತಾಯಿಸಿದರು.

ಈಗಾಗಲೇ ರಾಜ್ಯ ಸರಕಾರ ಹಿಂದುಳಿದ ಕೋಲಿ ಕಬ್ಬಲಿಗ ಸಮಾಜಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರೀ ಚೌಡಯ್ಯನವರ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸುವ ನಿರ್ಧಾರ ಕೈಗೊಂಡಿದೆ. ಜೊತೆಗೆ ಕೇಂದ್ರ ಸರಕಾರವೂ ಈ ಕುರಿತು ಸಹಕರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕರ ಮುಖಾಂತರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಮೇಶ, ನಾಗಪ್ಪ, ಸಿದ್ದಪ್ಪ, ಅಶೋಕ, ಬಿ. ಮಹೇಶ, ವಿಜಯ ಹಣಮಂತ, ಮಲ್ಲಪ್ಪ, ಮಹಾದೇವ, ಎಸ್‌.ಪಿ. ಕಟ್ಟಿಮನಿ ಇದ್ದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.