ಪಂಚಶೀಲ ಒಪ್ಪಂದದಡಿ ದುಡಿಯಲು ಮೋದಿ, ಜಿನ್‌ಪಿಂಗ್ ಪಣ
Team Udayavani, Sep 5, 2017, 11:55 AM IST
ಕ್ಸಿಯಾಮೆನ್, ಚೀನ : ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಿಡಲು ಪಂಚಶೀಲ ಒಪ್ಪಂದದ ಮಾರ್ಗದರ್ಶನ ಪ್ರಕಾರ ಜತೆಗೂಡಿ ಶ್ರಮಿಸಲು ಭಾರತ ಮತ್ತು ಚೀನ ಇಂದು ಪಣ ತೊಟ್ಟಿವೆ.
ಬ್ರಿಕ್ಸ್ ಶೃಂಗದ ಪಾರ್ಶ್ವದಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಉಭಯ ದೇಶಗಳು ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಿಡಲು ಪರಸ್ಪರ ಸಹಕಾರದೊಂದಿಗೆ ಶ್ರಮಿಸುವ ಸಂಕಲ್ಪವನ್ನು ತಳೆದವು.
ಡೋಕ್ಲಾಂ ಗಡಿ ಬಿಕ್ಕಟ್ಟಿನ ಬಳಿಕದಲ್ಲಿ ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿರುವುದು ಇದೇ ಮೊದಲ ಬಾರಿಯಾಗಿದೆ.
ಭಾರತ ಮತ್ತು ಚೀನ ಏಶ್ಯದ ಎರಡು ದಿಗ್ಗಜಗಳಾಗಿದ್ದು ಅತ್ಯಂತ ಬಲಿಷ್ಠ ನೆರೆಹೊರೆಯ ದೇಶಗಳಾಗಿವೆ. ಮಾತ್ರವಲ್ಲದೆ ಈ ಎರಡೂ ದೇಶಗಳು ವಿಶ್ವದ ಅತೀ ದೊಡ್ಡ ಮತ್ತು ನೂತನ ಪ್ರಬಲ ಆರ್ಥಿಕ ಶಕ್ತಿಗಳಾಗಿ ಮೂಡಿ ಬರುತ್ತಿರುವ ರಾಷ್ಟ್ರಗಳಾಗಿವೆ ಎಂದು ಚೀನ ಅಧ್ಯಕ್ಷ ಜಿನ್‌ಪಿಂಗ್ ಅವರು ಈ ಸಂದರ್ಭದಲ್ಲಿ ಹೇಳಿದರು.
ಐತಿಹಾಸಿಕ ಪಂಚಶೀಲದ ಐದು ತತ್ವಗಳಿಂದ ಮಾರ್ಗದರ್ಶನ ಪಡೆದು ಭಾರತದೊಂದಿಗೆ, ಏಶ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಹಾಗೂ ಉಭಯತರ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯಲು ಚೀನ ಸಿದ್ದವಿದೆ ಎಂದು ಜಿನ್‌ಪಿಂಗ್ ಅವರು ಪ್ರಧಾನಿ ಮೋದಿಗೆ ಹೇಳಿದರು.
ಚೀನೀ ನಿಯೋಗದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಮುಖ್ಯ ವಕ್ತಾರ ಲೂ ಕಾಂಗ್, ವಿದೇಶ ಸಚಿವ ವಾಂಗ್ ಯೀ ಮತ್ತು ಸ್ಟೇಟ್ ಕೌನ್ಸಿಲರ್ ಯಾಂಗ್ ಜೀಶೀ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.