ಹೆದ್ದಾರಿ ಬದಿ, ಸೂಕ್ಷ್ಮವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ
Team Udayavani, Sep 5, 2017, 3:17 PM IST
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಬದಿ ಹಾಗೂ ಸೂಕ್ಷ್ಮವಲಯದ ಕಾಡಂಚಿನಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಡೆಯುವ ಕಾರ್ಯಕ್ಕೆ ಮುಂದಾಗಿಲ್ಲ.
ಪುತ್ತನಪುರ ಗ್ರಾಪಂಗೆ ಸೇರಿದ ಹೆದ್ದಾರಿ ಬದಿಯಲ್ಲಿ ನೂತನ ಬಡಾವಣೆ, ಹಂಗಳ ಗ್ರಾಪಂಗೆ ಮತ್ತು ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೆ ಸೇರಿದ ಮಗು ವಿನಹಳ್ಳಿ ಗೇಟ್ ಬಳಿಯಲ್ಲಿ ಬೃಹತ್ ಕಾಮಗಾರಿ ನಡೆಸಲಾಗುತ್ತಿದೆ.
ಹಂಗಳ ಗ್ರಾಪಂನಿಂದ ಯಾವುದೇ ಅನುಮತಿಯನ್ನೂ ಪಡೆದುಕೊಳ್ಳದೆಯೇ ಬಂಡೀಪುರ ಪ್ಲಾಜಾ ಹೆಸರಿನ ರೆಸಾರ್ಟ್‌ನ ಖಾಲಿ ನಿವೇಶನದಲ್ಲಿ ಉದ್ಯಾನ, ಕಟ್ಟಡ ಹಾಗೂ ಬೃಹತ್ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಹೊಂದಿ ಕೊಂಡಂತೆಯೇ ಸರ್ಕಾರಿ ಸ್ವಾಮ್ಯದ ಜಂಗಲ್ ರೆಸಾರ್ಟ್ಸ್ ತನ್ನ ಸಿಬ್ಬಂದಿಗೆ ವಸತಿಗೃಹಗಳನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕಾಗಿ ಭಾರೀ ಪ್ರಮಾಣದ ಕಚ್ಚಾ ವಸ್ತು ಸಂಗ್ರಹಿಸಿ ಯಂತ್ರೋಪಕರಣ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಕೆಲವು ತಿಂಗಳ ಹಿಂದೆ ಇಲ್ಲಿಗೆ ಕೆಲವೇ ಅಡಿ ಅಂತರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತಮ್ಮ ಜಮೀನಿನಲ್ಲಿ ಅಪ್ನಾ ಸಪ್ನಾ ಹೆಸರಿನಲ್ಲಿ ಹೋಂ ಸ್ಟೇ ನಡೆಸಲು ಕಟ್ಟಡ ನಿರ್ಮಾಣ ಮಾಡುತ್ತಿದ್ದಾಗ ಅರಣ್ಯಾಧಿಕಾರಿಗಳು ತಡೆಹಿಡಿದ್ದರು. ಆದರೆ, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಯಾವುದೇ ಅನುಮತಿ ಇಲ್ಲದೆಯೇ ಬೃಹತ್ ಕಟ್ಟಡ ಕಾಮಗಾರಿ ನಡೆಸುತ್ತಿದ್ದರೂ ಸುಮ್ಮನಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಡಂಚಿನ ಗ್ರಾಮಗಳ ಜನರು ತಮ್ಮ ಮುರುಕು ಮನೆಗಳ ದುರಸ್ತಿ ಮಾಡಿಕೊಳ್ಳಲೂ ಅನುಮತಿ ನಿರಾಕರಿಸುವ ಅರಣ್ಯ ಇಲಾಖೆಯವರು ಹೆದ್ದಾರಿ ಬದಿಗಳಲ್ಲಿ ಬೃಹತ್ ಕಾಮಗಾರಿಗಳು ನಡೆಯುತ್ತಿದ್ದರೂ ಜಾಣ ಕುರುಡು ಪ್ರದರ್ಶಿಸಿ ಬಡವರಿಗೊಂದು ಶ್ರೀಮಂತರಿಗೊಂದು ಕಾನೂನು ಅನುಸರಿಸುತ್ತಾ ಸುಮ್ಮನಿರುವುದು ಸರಿಯೇ ಎಂದು ಪರಿಸರ ಪ್ರೇಮಿ ವಿದ್ಯಾಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.