ಬೈಕ್ ರ್ಯಾಲಿಗೆ ಅನುಮತಿ ನಿರಾಕರಣೆ: ರಾಮಲಿಂಗಾ ರೆಡ್ಡಿ ಸಮರ್ಥನೆ
Team Udayavani, Sep 6, 2017, 9:30 AM IST
ಬೆಂಗಳೂರು: ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೇಳಿದ ಮಾಹಿತಿಯನ್ನು ಬಿಜೆಪಿ ಒದಗಿಸದ ಕಾರಣ ಅನುಮತಿ ನಿರಾಕರಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮಂಗಳೂರು ಚಲೋ ಬೈಕ್ ರ್ಯಾಲಿ ಶಾಂತಿ ಕದಡುವ ಉದ್ದೇಶ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಕಾರದ ಮೇಲಿದೆ. ಹೀಗಾಗಿಯೇ 800ಕ್ಕೂ ಹೆಚ್ಚು ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಮೂರು ಆಯುಕ್ತಾಲಯ ಹಾಗೂ ಮೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರು ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೇಳಿದ್ದ ಮಾಹಿತಿ ಕೊಟ್ಟಿಲ್ಲ. ಹೀಗಾಗಿ, ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದ 5 ಭಾಗಗಳಿಂದ ಬೈಕ್‌ಗಳಲ್ಲಿ ರ್ಯಾಲಿ ಹೊರಟರೆ ಎಷ್ಟು ಜನ, ಎಲ್ಲಿಂದ ಹೊರಡುತ್ತಾರೆ ಎಂಬಿತ್ಯಾದಿ ಮಾಹಿತಿ ಬೇಡವೇ? ಅದನ್ನು ಪೊಲೀಸರಿಗೆ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಇಷ್ಟೊಂದು ದೊಡ್ಡ ರ್ಯಾಲಿ 400 ಕಿ.ಮೀ. ವರೆಗೆ ಮಾಡಬೇಕಾದರೆ ಪೊಲೀಸ್ ಇಲಾಖೆ ಕೇಳಿದ ಮಾಹಿತಿ ಕೊಡಬೇಕಲ್ಲವೇ ಎಂದರು. ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಕಾಂಗ್ರೆಸ್ ರ್ಯಾಲಿಗೆ ಭದ್ರತೆ ಒದಗಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಗ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೆವು. ಎಲ್ಲೂ ಶಾಂತಿಗೆ ಭಂಗ ತರಲಿಲ್ಲ. ಆದರೆ, ಈಗ ಬಿಜೆಪಿಯವರ ಉದ್ದೇಶ ಸರಿಯಿಲ್ಲ ಎಂದರು.
ಶಾಂತಿ ಕದಡುವ ಯತ್ನ : ಹೆದ್ದಾರಿಗಳಲ್ಲಿ ರ್ಯಾಲಿ ಹೋದರೆ ಸಂಚಾರ ದಟ್ಟಣೆ ಸಹಿತ ಬೇರೆ ಬೇರೆ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲೆ ಶಾಂತವಾಗಿದ್ದು ಮತ್ತೆ ಅಲ್ಲಿ ಶಾಂತಿ ಕದಡುವ ಪ್ರಯತ್ನ ಬಿಜೆಪಿಯದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ದೂರಿದ್ದಾರೆ.
ರಾಮಲಿಂಗಾ ರೆಡ್ಡಿಗೆ ತಲೆ ಬಿಸಿ
ಬೆಂಗಳೂರು: ರಾಮಲಿಂಗಾ ರೆಡ್ಡಿ ಅವರು ಗೃಹ ಇಲಾಖೆ ಹೊಣೆಗಾರಿಕೆ ವಹಿಸಿಕೊಂಡ ಮರುದಿನವೇ ಬಿಜೆಪಿ ಮಂಗಳೂರು ಚಲೋ ಬೈಕ್ ರ್ಯಾಲಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ, ಸಚಿವ ವಿನಯ ಕುಲಕರ್ಣಿಗೆ ಬೆದರಿಕೆ ಪ್ರಕರಣಗಳು ಸವಾಲಾಗಿ ಪರಿಣಮಿಸಿವೆ. ಡಾ| ಜಿ. ಪರಮೇಶ್ವರ್ ರಾಜೀನಾಮೆ ಅನಂತರ ಕೆಲವು ದಿನ ಮುಖ್ಯಮಂತ್ರಿಯವರ ಬಳಿಯೇ ಇದ್ದ ಗೃಹ ಖಾತೆಯನ್ನು ಶುಕ್ರವಾರ ನಡೆದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಯವರಿಗೆ ಗೃಹ ಖಾತೆ ವಹಿಸಲಾಗಿತ್ತು.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಮಂಗಳೂರು ಚಲೋ ಬೈಕ್ ರ್ಯಾಲಿ ತಲೆಬಿಸಿ ಉಂಟುಮಾಡಿತ್ತು. ಅನಂತರ ಸಚಿವ ವಿನಯ ಕುಲಕರ್ಣಿಗೆ ಬೆದರಿಕೆ ಹಾಗೂ ಇದೀಗ ಗೌರಿ ಲಂಕೇಶ್ ಹತ್ಯೆ ಪ್ರಕರಣಗಳು ತಲೆನೋವಾಗಿ ಪರಿಣಮಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.