![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Sep 6, 2017, 12:00 PM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಖ್ಯಂಮತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಗಂಗಾನಗರ ಹಾಗೂ ಬಿಇಎಲ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ್ದ ಪರಮೇಶ್ವರ್ ಸಾರ್ವಜನಿಕರೊಂದಿಗೆ ಉಪಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಹೀಗಾಗಿ ಈ ಯೋಜನೆಯನ್ನು ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಗೂ ವಿಸ್ತರಿಸಲು ಕಾಂಗ್ರೆಸ್ ಸರ್ಕಾರದ ಉದ್ದೇಶಿಸಿದೆ ಎಂದು ಹೇಳಿದರು.
ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಪ್ರತಿ ದಿನ 3 ಲಕ್ಷ ಜನರ ಹಸಿವು ನೀಗಿಸುವ ಈ ಯೋಜನೆಗೆ ಬಿಜೆಪಿಯವರು ಅನಗತ್ಯವಾಗಿ ವಿರೋಧ ಮಾಡುತ್ತಿದ್ದಾರೆ. ಬಿಜೆಪಿಯವರು ಹೊಟ್ಟೆ ತುಂಬಿದವರಾಗಿದ್ದಾರೆ. ಆದ್ದರಿಂದ ಅವರಿಗೆ ಬಡವರ ಪರವಾಗಿರುವ ಜನಪರ ಯೋಜನೆಗಳು ಬೇಕಿಲ್ಲ, ಬಿಜೆಪಿಯವರಿಗೆ ರಾಜ್ಯದ ಜನತೆಯೇ ಪಾಠ ಕಲಿಸಲಿದ್ದಾರೆ ಎಂದರು.
ಗಂಗಾನಗರ ಇಂದಿರಾ ಕ್ಯಾಂಟೀನ್‌ಗೆ ಬೆಳಗಿನ ಉಪಹಾರ ಕಡಿಮೆ ಬರುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪರಮೇಶ್ವರ್ ಬಿಬಿಎಂಪಿ ಆಯುಕ್ತರಿಗೆ ದೂರವಾಣಿ ಮೂಲಕ ಮಾತನಾಡಿ, ಉಪಹಾರ ಪ್ರಮಾಣ ಮತ್ತು ಗುಣಮಟ್ಟ ಹೆಚ್ಚಿಸುವಂತೆ ಸೂಚನೆ ನೀಡಿದರು.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.