ಬಿಜೆಪಿ ನಾಯಕರ ಬಂಧನ; ಬಿಡುಗಡೆ


Team Udayavani, Sep 6, 2017, 12:00 PM IST

bjp-protest-arrest.jpg

ಬೆಂಗಳೂರು: ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಪೊಲೀಸರು ಮತ್ತು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆದು ಸಂಘರ್ಷದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು ನೂರಾರು ಮಂದಿಯನ್ನು ಬಂಧಿಸಿದರು. 

ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬಹಿರಂಗ ಸಭೆ ನಡೆದ ಬಿಜೆಪಿ ಮುಖಂಡರು ಬಳಿಕ ಮಂಗಳೂರಿಗೆ ಬೈಕ್‌ ರ್ಯಾಲಿ ಹೊರಡಬೇಕಿತ್ತು. ನಿಷೇದಾಜ್ಞೆ ನಡುವೆಯೂ ಪೊಲೀಸರು ಬಹಿರಂಗ ಸಭೆಗೆ ಅನುಮತಿ ನೀಡಿದ್ದರಾದರೂ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಅನುಮತಿ ನಿರಾಕರಿಸಿದ್ದರು. 

ಆದರೆ, ಪೊಲೀಸರ ಪ್ರತಿರೋಧದ ನಡುವೆಯೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೈಕ್‌ ರ್ಯಾಲಿಗೆ ಮುಂದಾಗಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರು ಬಿಜೆಪಿ ಮುಖಂಡರಾದ ಆರ್‌. ಅಶೋಕ್‌, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಕಟ್ಟಾ ಸುಬ್ರಮಣ್ಯ ನಾಯ್ಡು, ಪ್ರತಾಪ್‌ ಸಿಂಹ ಸೇರಿದಂತೆ 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಗಾಯಗಳಾಗಿವೆ. ಈ ಪೈಕಿ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅರವಿಂದ್‌ ರೆಡ್ಡಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಶಂಕರಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರವಿಂದ್‌ ರೆಡ್ಡಿ ಅವರ ದವಡೆಯ ಮೂಳೆ ಮುರಿದಿದೆ ಎಂದು ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ. 

ನಿಷೇದಾಜ್ಞೆ ನಡುವೆಯೂ ಹೋರಾಟ: ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೇ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಬೆಳಗ್ಗೆ 10.30ಕ್ಕೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಸಭೆ ನಡೆಸಿದ ಬಿಜೆಪಿ ಮುಖಂಡರು, ಅನುಮತಿ ನಿರಾಕರಣೆ ನಡುವೆಯೂ ಬೈಕ್‌ ರ್ಯಾಲಿ ಮೂಲಕ ಮಂಗಳೂರಿಗೆ ಹೊರಡಲು ಅಣಿಯಾದರು. 

ಕೆಲವರು ತಮ್ಮ ದ್ವಿಚಕ್ರ ವಾಹನಗಳಲ್ಲಿ ಫ್ರೀಡಂ ಪಾರ್ಕ್ಗೆ ಬಂದು ಸೇರಿದರೆ, ಇನ್ನು ಕೆಲವರನ್ನು ಮಾರ್ಗಮಧ್ಯೆಯೇ ಪೊಲೀಸರು ತಡೆದು ವಾಪಸ್‌ ಕಳುಹಿಸಿದ್ದರು. ಇದರ ನಡುವೆಯೇ ಶಾಸಕರಾದ ಆರ್‌.ಅಶೋಕ್‌, ವೈ.ಎ.ನಾರಾಯಣಸ್ವಾಮಿ, ರವಿಸುಬ್ರಹ್ಮಣ್ಯ, ಸತೀಶ್‌ ರೆಡ್ಡಿ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯನಾಯ್ಡು , ವಿ.ಸೋಮಣ್ಣ , ವಿಧಾನಪರಿಷತ್‌ ಸದಸ್ಯ ಪುಟ್ಟಸ್ವಾಮಿ ಮತ್ತಿತರರು ತಮ್ಮ ಕ್ಷೇತ್ರವ್ಯಾಪ್ತಿಯ ಕಾರ್ಯಕರ್ತರೊಂದಿಗೆ ಫ್ರೀಡಂ ಪಾರ್ಕ್ನತ್ತ ಬರಲಾರಂಭಿಸಿದರು.

ಆದರೆ, ಬಸವನಗುಡಿ ಕ್ಷೇತ್ರದಿಂದ ರವಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಆಗಮಿಸುತ್ತಿದ್ದ 60 ಮಂದಿ ಕಾರ್ಯಕರ್ತರನ್ನು ಟೌನ್‌ಹಾಲ್ ಬಳಿ ಪೊಲೀಸರು ವಶಕ್ಕೆ ಪಡೆದರೆ, ಹೆಬ್ಟಾಳ , ಮಲ್ಲೇಶ್ವರ ಕಡೆಯಿಂದ ಬರುತ್ತಿದ್ದ ಶೋಭಾ ಕರಂದ್ಲಾಜೆ, ಆರ್‌. ಅಶೋಕ್‌ ಅವರನ್ನು ಮೌರ್ಯ ಹೋಟೆಲ್ ಬಳಿ ತಡೆಯಲಾಯಿತು. ಸತೀಶ್‌ ರೆಡ್ಡಿ , ಸೋಮಣ್ಣ , ಬಿಬಿಎಂಪಿ ಮಾಜಿ ಮೇಯರ್‌ ಕಟ್ಟೆ ಸತ್ಯನಾರಾಯಣ ಸೇರಿದಂತೆ ಹಲವರನ್ನೂ ಇದೇ ರೀತಿ ಮಾರ್ಗಮಧ್ಯೆ ತಡೆಯಲಾಯಿತು.

ಅದರ ನಡುವೆಯೂ ನಾಯಕರು ಫ್ರೀಡಂ ಪಾರ್ಕ್‌ ಸೇರಿದರು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬಹಿರಂಗಸಭೆಯಲ್ಲಿ ಮುಖಂಡರು ಮಾತು ಮುಗಿಸುತ್ತಿದ್ದಂತೆ ವಿವಿಧೆಡೆಯಿಂದ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ನೂರಾರು ಕಾರ್ಯಕರ್ತರು ಬೈಕ್‌ ರ್ಯಾಲಿ ಮುಂದುವರಿಸಲು ನಿರ್ಧರಿಸಿದರು. ಆದರೆ, ಅವರಿಗೆ ಬೈಕ್‌ ತೆಗೆಯಲು ಪೊಲೀಸರು ಅವಕಾಶ ನೀಡದೆ ರ್ಯಾಲಿ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪೊಲೀಸರು ಮತ್ತು  ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ಏರ್ಪಟ್ಟಿತು. ಕಾರ್ಯಕರ್ತರ ದಾಂಧಲೆ ಹೆಚ್ಚಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. ಬೈಕ್‌ ರ್ಯಾಲಿ ನಡೆಸುವ ಬಗ್ಗೆ 15 ದಿನಗಳ ಮುನ್ನವೇ ಸಂಬಂಧಿಸಿದ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

ಆದರೆ, ಸರ್ಕಾರದ ನಿರ್ದೇಶನವಿದೆ ಎಂಬ ಸಬೂಬು ನೀಡಿ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ ಕಾರ್ಯಕರ್ತರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ರ್ಯಾಲಿ ನಡೆಸದಂತೆ ಕಾರ್ಯಕರ್ತರ ಮನವೊಲಿಸಲು ಪೊಲೀಸರು ಸಾಕಷ್ಟು ಪ್ರಯತ್ನಿಸಿದರಾದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಯಕರ್ತರು ರ್ಯಾಲಿ ನಡೆಸಲು ಮುಂದಾದಾಗ ಪೊಲೀಸರು ತಡೆದು ಶೋಭಾ ಕರಂದ್ಲಾಜೆ ಸೇರಿದಂತೆ ನೂರಾರು ಮಂದಿಯನ್ನು ಬಂಧಿಸಿ ಬಸ್‌ಗಳಲ್ಲಿ ಕರೆದೊಯ್ದರು.  

ರಸ್ತೆ ಮಧ್ಯೆ ಧರಣಿ: ಪೊಲೀಸರು ಕಾರ್ಯಕರ್ತರನ್ನು ಬಂಧಿಸಲಾರಂಭಿಸುತ್ತಿದ್ದಂತೆ ಅವರ ಮಧ್ಯೆ ಇದ್ದ ಮಾಜಿ ಡಿಸಿಎಂ ಆರ್‌.ಅಶೋಕ್‌, ಮಾಜಿ ಸಚಿವರಾದ ವಿ.ಸೋಮಣ್ಣ, ಕಟ್ಟಾ ಸುಬ್ರಮಣ್ಯ ನಾಯ್ಡು, ಸಂಸದ ಪ್ರತಾಪ್‌ ಸಿಂಹ ಅವರು ಪೊಲೀಸರನ್ನು ತಳ್ಳಿ ರಸ್ತೆ ಮಧ್ಯೆ ಬಂದು ಧರಣಿ ಕುಳಿತರು. 

ಧರಣಿ ಹಿಂಪಡೆಯುವಂತೆ ಮುಖಂಡರನ್ನು ಮನವೊಲಿಸಲು ಪೊಲೀಸರು ಪ್ರಯತ್ನಿಸಿದರಾದರೂ ಮಣಿಯದ ಮುಖಂಡರು ಅಲ್ಲೇ ಕುಳಿತು ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಅವರನ್ನು ಬಂಧಿಸಲು ಪೊಲೀಸರು ಮುಂದಾದರೂ ಕುಳಿತಲ್ಲಿಂದ ಏಳಲು ಒಪ್ಪಲಿಲ್ಲ. ಹೀಗಾಗಿ ಅವರನ್ನು ಎಳೆದುಕೊಂಡು ಬಸ್‌ಗೆ ಹತ್ತಿಸಿ ಮೈಸೂರು ರಸ್ತೆಯ ಕೆಎಸ್‌ಆರ್‌ಪಿ ಮೈದಾನಕ್ಕೆ ಕರೆತಂದು ನಂತರ ಬಿಡುಗಡೆ ಮಾಡಲಾಯಿತು. 

ಇನ್ನು ಕೇವಲ 8 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌  ಸರ್ಕಾರ ಪತನವಾಗಿ ಬಿ. ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ. ಇದರಿಂದ ಆತಂಕಗೊಂಡಿರುವ ಮುಖ್ಯಮಂತ್ರಿಗಳು ಪೊಲೀಸರನ್ನು ಬಳಸಿಕೊಂಡು ನಮ್ಮ ಶಾಂತಿಯುತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮಂಗಳೂರು ಚಲೋ ವಿಫ‌ಲವಾಗುವುದಿಲ್ಲ. ನಾವು ಮಂಗಳೂರಿನಲ್ಲಿ ಪ್ರತಿಭಟನೆ ಮಾಡಿಯೇ ತೀರುತ್ತೇವೆ. 
-ಪ್ರತಾಪ್‌ ಸಿಂಹ, ಯುವ ಮೋರ್ಚ ಅಧ್ಯಕ್ಷ 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ  ಬೆಂಗಳೂರಿಗೆ ಬಂದು ಹೋದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಹೋಗುತ್ತದೆ ಎಂದು ಹೆದರಿ ನಡುಗಲಾರಂಭಿಸಿದ್ದಾರೆ. ಅವರ ಮಾತು ಕೇಳಿ ನೀವು (ಪೊಲೀಸರು) ನಮ್ಮ ಕಾರ್ಯಕರ್ತರನ್ನು ವಿನಾ ಕಾರಣ ಬಂಧಿಸುತ್ತಿದ್ದೀರಿ. ಇನ್ನು ಕೆಲವೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರುತ್ತದೆ. ಆಗ ನೀವು (ಪೊಲೀಸರು) ಹೇಗೆ ವರ್ತಿಸುತ್ತೀರಿ ಎಂದು ನೋಡುತ್ತೇವೆ. 
-ಆರ್‌.ಅಶೋಕ್‌, ವಿಧಾನಸಭೆ ಪ್ರತಿಪಕ್ಷ ಉಪನಾಯಕ

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.