ಶಾಲೆ ಜೀರ್ಣೋದ್ಧಾರಕ್ಕೆ ಅನುದಾನ ಕೇಳಿ
Team Udayavani, Sep 6, 2017, 2:55 PM IST
ವಿಜಯಪುರ: ನಮ್ಮೂರ ಗುಡಿಗಳ ಜೀರ್ಣೋದ್ಧಾರಕ್ಕೆ ಅನುದಾನ ಕೇಳುವಂತೆ ಶಾಲೆಗಳ ಅಭಿವೃದ್ಧಿಗೂ ಅನುದಾನ ಕೇಳುವ ಮನೋಭಾವ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಕಿವಿಮಾತು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನೋತ್ಸವ ಸಮಾರಂಭ ಉದ್ಘಾಟಿಸಿ ಅವರುಮಾತನಾಡಿದರು. ಅನೇಕ ಗ್ರಾಮಗಳ ಶಾಲೆಗಳು ಈಗಲೂ ಸ್ಥಳೀಯರ ನಿರ್ಲಕ್ಷದಿಂದ ದುಸ್ಥಿತಿಯಲ್ಲಿವೆ. ಇದರಿಂದ ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಗ್ರಾಮದಲ್ಲಿರುವ ಜನತೆ ದೇವಾಲಯಗಳ ಜೊತೆಗೆ ಶಾಲೆಗಳ ಪುನರುಜ್ಜೀವನಕ್ಕೂ ಅನುದಾನ ಕೇಳುವಂತಾಗಬೇಕು, ಇದು ಸಹ ಅತ್ಯಂತ ಪವಿತ್ರವಾದ ಕಾರ್ಯ ಎಂದು ಅಭಿಪ್ರಾಯಪಟ್ಟರು.
ಶಿಕ್ಷಕರು ಸದಾ ವಿದ್ಯಾರ್ಥಿಯಾಗಿರಬೇಕು, ಸದಾ ಅಧ್ಯಯನಶೀಲರಾಗಿರಬೇಕು. ಸತತ ಅಧ್ಯಯನದಿಂದ ಮಾತ್ರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗುತ್ತದೆ. ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು ಮನೆ-ಮನೆಗೆ ತೆರಳಿ ಜೋಳಿ ಹಿಡಿದು ಹಣ ಸಂಗ್ರಹಿಸಿ ಶಿಕ್ಷಣ ಸಂಸ್ಥೆ ಕಟ್ಟಿ ಮನಗೆಲ್ಲ ಅಕ್ಷರ ಭಿಕ್ಷೆ ನೀಡಿದ್ದಾರೆ. ಮಹಾನ್ ತತ್ವಜ್ಞಾನಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್, ಡಾ| ಎಪಿಜೆ ಅಬ್ದುಲ್ ಕಲಾಂ ಶ್ರೇಷ್ಠ ಗುರುಗಳು ಹಾಗೂ ಮಾರ್ಗದರ್ಶಕರು ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದು ಅವರಲ್ಲಿದ್ದ ಜ್ಞಾನದ ಪ್ರತಿಭೆಯಿಂದ ಎಂದು ಬಣ್ಣಿಸಿದರು. ಅರಿವೇ ಗುರು ಎಂದ ಹನ್ನೆರಡನೆಯ ಶರಮಾನದ ಶರಣರು ಜ್ಞಾನದ ಮಹತ್ವ ಪ್ರಸಾರ ಮಾಡುವ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದರು. ಅನಕ್ಷರಸ್ಥರು ವಚನಗಳನ್ನು ರವಿಸುವ ಮಟ್ಟಕ್ಕೆ ಜ್ಞಾನ ಸಂಪನ್ನರಾಗಿದ್ದು, ಜಿಜ್ಞಾಸು ಪ್ರತಿಭಾವಂತರಾಗಿದ್ದರು ಎಂದು ವಿಶ್ಲೇಷಿಸಿದರು.
ಪ್ರಸಕ್ತ ಆಧುನಿಕ ತಂತ್ರಜ್ಞಾನದ ವೇಗದ ಯುಗದಲ್ಲಿ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ತಾಂತ್ರಿಕ ಜ್ಞಾನವನ್ನೂ ಪಡೆದಿರಬೇಕು. ಆಧುನಿಕ ಬೋಧನಾ ಉಪಕರಣಗಳು ಬಳಕೆಯಾಗಬೇಕು, ತಾಂತ್ರಿಕ ಯುಗಕ್ಕೆ ತಕ್ಕಂತೆ ಶಿಕ್ಷಣ ದೊರಕಬೇಕು. ಮೌಲ್ಯಯುತ, ಸಂಸ್ಕಾರಭರಿತ ಹಾಗೂ ಗುಣಮಟ್ಟದ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯವಾಗಿದೆ. ರಾಷ್ಟ್ರದ ಅಭಿವೃದ್ಧಿ ಹಾಗೂ ಹಿತರಕ್ಷಣೆಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ರಾಜ್ಯ ಸರ್ಕಾರ ಗುರುಚೇತನ ಎಂಬ ಯೋಜನೆ ಜಾರಿಗೊಳಿಸಿರುವುದು ಸಂತೋಷದ ಸಂಗತಿ ಎಂದು ಮೇಲ್ಮನೆ ಸದಸ್ಯ ಅರುಣ ಶಹಾಪುರ ಹೇಳಿದರು. ಯೋಗ ಚಿಕಿತ್ಸಾ ಕೇಂದ್ರದ ಪ್ರಭುದೇವ ಧರ್ಮಪೀಠದ ಡಾ| ವಿಜಯಕುಮಾರ ಮಹಾನುಭಾವಿಗಳು ಸಾನ್ನಿಧ್ಯ ವಹಿಸಿದ್ದರು. ಸಂಸದೀಯ ಕಾರ್ಯದರ್ಶಿ ಡಾ| ಎಂ.ಎಸ್. ಬಾಗವಾನ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಕೃಷ್ಣಾ ಕಾಡಾ ಅಧ್ಯಕ್ಷ ಜಕ್ಕಪ್ಪ ಯಡವೆ, ಉಪ ಮೇಯರ್ ರಾಜೇಶ ದೇವಗಿರಿ, ವಿಡಿಎ ಅಧ್ಯಕ್ಷ ಆಜಾದ್ ಪಟೇಲ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ.ಸುಂದರೇಶಬಾಬು, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ. ಗೌಡರ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಜುಬೇರ ಕೆರೂರ, ಅರ್ಜುನ ಲಮಾಣಿ ಇದ್ದರು. ಡಿಡಿಪಿಐ ಪಿ.ಟಿ. ಬೊಂಗಾಳೆ ಸ್ವಾಗತಿಸಿದರು. ಡಯಟ್ ಪ್ರಾಂಶುಪಾಲ ಎಂ.ಎಂ. ಸಿಂಧೂರ “ಗುರು ಚೇತನ’ ಯೋಜನೆ ಕುರಿತು ಮಾಹಿತಿ ನೀಡಿದರು. ಅರಳಿಮಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.