ಬೈಕ್‌ ರ್ಯಾಲಿಗೆ ಅನುಮತಿ ನಿರಾಕರಣೆಗೆ ಖಂಡನೆ

Team Udayavani, Sep 6, 2017, 3:00 PM IST

06-YAD-5.jpg

ವಿಜಯಪುರ: ಪಿಎಫ್‌ಐ ಸೇರಿದಂತೆ ವಿವಿಧ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಅನುಮತಿ ನಿರಕಾರಿಸಿ ಬಿಜೆಪಿ ನಾಯಕರನ್ನು ಬಂಧಿ ಸಲಾಗಿದೆ ಎಂದು ಆರೋಪಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ
ಕಾರ್ಯಕರ್ತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬೈಕ್‌ರ್ಯಾಲಿ ನಡೆಸಲು ಮುಂದಾಗಿದ್ದ ಬಿಜೆಪಿ ನಾಯಕರನ್ನು ಪೊಲೀಸರನ್ನು ಬಳಸಿಕೊಂಡು ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಕಿಡಿ ಕಾರಿದ ಕಾರ್ಯಕರ್ತರು, ನಗರದಲ್ಲಿರುವ ಸೊಲ್ಲಾಪುರ ಬೈಪಾಸ್‌ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಮೋರ್ಚಾ ಜಿಲ್ಲಾಧ್ಯಕ್ಷ ರವಿ ಖಾನಾಪುರ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಪ್ರತಿಭನಾನಿರತ ಬಿಜೆಪಿ ನಾಯಕರು, ರಾಜ್ಯದ ಕಾಂಗ್ರೆಸ್‌ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಪ್ರತಿಭಟಿಸುವ ಹಕ್ಕುಗಳನ್ನು ಪೊಲೀಸ್‌ ಬಲ ಬಳಸಿಕೊಂಡು ದಮನ ಮಾಡುವ ಕೃತ್ಯಕ್ಕೆ ಕೈ ಹಾಕಿದೆ. ಮತ್ತೂಂದೆಡೆ ಪಿಎಫ್‌ಐ ಸೇರಿದಂತೆ ಮತೀಯವಾಗಿ ಸಮಾಜ ಬಾಹೀರ ಸಂಘಟನೆಗಳನ್ನು ನಿಷೇಧಿಸದೆ ಕುಮ್ಮಕ್ಕು ನೀಡುತ್ತಿದೆ. ಇದನ್ನು ಪ್ರಶ್ನಿಸಿ ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರನ್ನು ಬಂಧಿ ಸುವ ಮೂಲಕ ಹೋರಾಟ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ. ಆ ಮೂಲಕ ಕಾಂಗ್ರೆಸ್‌ ಸರ್ಕಾರ ತನ್ನ ದೌರ್ಬಲ್ಯ ಮುಚ್ಚಿಕೊಳ್ಳಲು ಮಂಗಳೂರು ಚಲೋ ಬೈಕ್‌ರ್ಯಾಲಿ ನಿಷೇಧಿಸಿ ಬಿಜೆಪಿ ನಾಯಕರನ್ನು ಬಂಧಿಸಿ ಹೋರಾಟ ಹತ್ತಿಕ್ಕುವ ಹುನ್ನಾರ ನಡೆಸಿದೆ ಎಂದು ಕಿಡಿ ಕಾರಿದರು.

ಬಿಜೆಪಿ ಹಿರಿಯ ಮುಖಂಡ ವಿಜುಗೌಡ ಪಾಟೀಲ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶರತ್‌ ಬಿರಾದಾರ, ಡಾ| ಪ್ರಶಾಂತ ಕಟಕೋಳ, ಸೋಮನಗೌಡ ಪಾಟೀಲ ಸಾಸನೂರ, ಭೀಮಾಶಂಕರ ಹದನೂರ, ಆನಂದ ಮುಚ್ಚಂಡಿ, ಈರಣ್ಣ ಪಟ್ಟಣಶೆಟ್ಟಿ ಸೇರಿದಂತೆ ಇತರೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.