ಇಂದು ನೆಹರೂ ಮೈದಾನದಲ್ಲಿ ಸಮಾವೇಶಕ್ಕೆ ಅನುಮತಿ


Team Udayavani, Sep 7, 2017, 8:30 AM IST

samavesha.jpg

ಮಹಾನಗರ : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಬಿಜೆಪಿ ಯುವಮೋರ್ಚಾದ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೆ. 7ರಂದು ಬೆಳಗ್ಗೆ 11ರಿಂದ 2 ಗಂಟೆಯೊಳಗೆ ನೆಹರೂ ಮೈದಾನದಲ್ಲಿ ಸಮಾವೇಶ ನಡೆಸಲು ಅವಕಾಶ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರವೂ ಸಹಿತ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ನೆಹರೂ ಮೈದಾನದಲ್ಲಿ ಬುಧವಾರವೇ ಪೊಲೀಸರು ಬೀಡುಬಿಟ್ಟಿದ್ದಾರೆ. 

ಬಿಜೆಪಿ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನರಲ್ಲಿ ಭಯದ ವಾತಾವರಣ ನಿವಾರಿಸಲು ಬುಧವಾರ ಬೆಳಗ್ಗೆ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ಪಥ ಸಂಚಲನ ನಡೆಸಿದರು. ನೆಹರೂ ಮೈದಾನದಲ್ಲಿ ಆರಂಭಗೊಂಡ ಜಾಥಾವು ಹಂಪನಕಟ್ಟ ವೃತ್ತ, ಲೈಟ್‌ಹೌಸ್‌ ಹಿಲ್‌ ರಸ್ತೆ, ಜ್ಯೋತಿ, ಬಲ್ಮಠ, ಕರಾವಳಿ ಸರ್ಕಲ್‌, ಕಂಕನಾಡಿ, ಫ‌ಳ್ನೀರ್‌ ಮೂಲಕ ಸಾಗಿ ಮತ್ತೆ ನೆಹರೂ ಮೈದಾನದಲ್ಲಿ ಸಮಾಪನಗೊಂಡಿತು. 

ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌ ಹಾಗೂ ಡಿಸಿಪಿ(ಕಾನೂನು ಹಾಗೂ ಸುವ್ಯವಸ್ಥೆ) ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಪಥ ಸಂಚಲನದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ಕೆಎಸ್‌ಆರ್‌ಪಿ ಹಾಗೂ ಇತರ ಪೊಲೀಸ್‌ ಸಿಬಂದಿ ಪಾಲ್ಗೊಂಡಿದ್ದರು. 

ಸಮಾವೇಶದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆ ಸಹಿತ ವಿವಿಧ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವುದರಿಂದ ನಗರದಲ್ಲಿ ಸಂಚಾರ ವ್ಯತ್ಯಯದ ಜತೆಗೆ ದೂರದೂರಿನಿಂದ ಆಗಮಿಸಿದ ವಾಹನಗಳ ಪಾರ್ಕಿಂಗ್‌ ಸಮಸ್ಯೆಯೂ ತಲೆದೋರುವ ಸಾಧ್ಯತೆ ಇದೆ. 

ಈ ತನಕ ಸಂಚಾರ ಬದಲಾವಣೆಯ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಮಾವೇಶದ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಸಂಚಾರ ಬದಲಾವಣೆ ಮಾಡಲಾಗುವುದು. ಈ ಕುರಿತು ಪೊಲೀಸ್‌ ಇಲಾಖೆ ಸನ್ನದ್ಧವಾಗಿದೆ ಎಂದು ಸಂಚಾರ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಈ ಮಧ್ಯೆ ಪುತ್ತೂ¤ರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳಲ್ಲಿ ಈಗಾಗಲೇ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ರ್ಯಾಲಿ ನಡೆಸಿಯೇ ಸಿದ್ಧ
ರ್ಯಾಲಿಗೆ ಅವಕಾಶ ನೀಡದಿದ್ದರೂ ನಾವು ಬೆಳಗ್ಗೆ 11ಕ್ಕೆ ಜ್ಯೋತಿ ವೃತ್ತದಿಂದ ರ್ಯಾಲಿ ನಡೆಸುತ್ತೇವೆ. ಸುಮಾರು 10 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸುವರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಕಾರ್ಯಕರ್ತರು ಆಗಮಿಸುತ್ತಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜಾ ಉದಯವಾಣಿಗೆ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Sunil-kumar

Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್‌

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

9

Mangaluru: ಬೊಂದೇಲ್‌-ಕಾವೂರು ರಸ್ತೆಯಲ್ಲಿಲ್ಲ ಫುಟ್‌ಪಾತ್‌

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Sunil-kumar

Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್‌

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ

Protect Manipur: Mallikarjun Kharge’s letter to the President

ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ

Madras High Court stays awarding of M.S. Subbulakshmi Award to Krishna

Chennai: ಕೃಷ್ಣಗೆ ಎಂ.ಎಸ್‌.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್‌ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.