ಗೌರಿಲಂಕೇಶ್‌ಗೆ ಕಾಂಗ್ರೆಸ್ ಶ್ರದ್ಧಾಂಜಲಿ
Team Udayavani, Sep 7, 2017, 12:14 PM IST
ಮೈಸೂರು: ಸೈದ್ಧಾಂತಿಕ ವಿಚಾರಗಳನ್ನು ಹೊಂದಿರುವವರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಶೋಚನೀಯವಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಿಷಾದಿಸಿದರು. ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್‌ರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ 2 ವರ್ಷದ ಹಿಂದೆ ನಡೆದ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೆ ಕಾರಣವಾಗಿರುವ ಆರೋಪಿಗಳ ಬಂಧನವಾಗಿಲ್ಲ. ಇದರ ನಡುವೆಯೇ ಗೌರಿ ಲಂಕೇಶ್ ಅವರ ಹತ್ಯೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಸಮಾಜದಲ್ಲಿ ಸಮಾನತೆ, ಅಲ್ಪಸಂಖ್ಯಾಂತರ ಹಕ್ಕುಗಳಿಗಾಗಿ ಹೋರಾಡುವವರನ್ನು ಕೊಲೆ ಮಾಡಿಸಲಾಗುತ್ತಿದೆ.
ಜಾತಿ ರಾಜಕಾರಣ ವಿರೋಧಿಸುತ್ತಿದ್ದ ಗೌರಿ ಲಂಕೇಶ್‌ರಿಗೆ ಇಂತಹ ಅಂತ್ಯ ಎದುರಾಗಿರುವುದು ಪ್ರಜಾಪ್ರಭುತ್ವದ ವಾಸ್ತವ ಚಿತ್ರಣವನ್ನು ಬಿಂಬಿಸುತ್ತಿದೆ ಎಂದರು. ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಪತ್ರಕರ್ತೆ ಗೌರಿ ಲಂಕೇಶ್ ತಂದೆ ಲಂಕೇಶ್ ಅವರ ಹಾದಿಯಲ್ಲಿ ಸಾಗುತ್ತಿದ್ದರು.
ಸಮಾಜದಲ್ಲಿನ ಬಡವರು, ಅಲ್ಪಸಂಖ್ಯಾತರ ಪರ ಹೆಚ್ಚಿನ ಕಾಳಜಿ ಹೊಂದಿ ಎಡಪಂಥೀಯ ವಿಚಾರಗಳಲ್ಲಿ ಹೆಚ್ಚು ನಂಬಿಕೆ ಹೊಂದಿದ್ದರು ಎಂದರು. ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ದರಾಜು, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮುಖಂಡರಾದ ಶಿವಣ್ಣ, ಲೋಕೇಶ್‌ರಾವ್, ಮುಡಾ ಸದಸ್ಯ ಶಿವಮಲ್ಲು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.