ಆದರ್ಶ ಗ್ರಾಮ ಅಂದ್ರೆ ಸೌಲಭ್ಯ ನೀಡಿಕೆಯಲ್ಲ: ಸಿದ್ದೇಶ್ವರ್
Team Udayavani, Sep 7, 2017, 2:47 PM IST
ದಾವಣಗೆರೆ: ಸಂಸದರ ಆದರ್ಶ ಗ್ರಾಮ ಯೋಜನೆ ಗ್ರಾಮಕ್ಕೆ ಬರೀ ಚರಂಡಿ, ರಸ್ತೆ ಮುಂತಾದ ಮೂಲ ಸೌಲಭ್ಯ ಒದಗಿಸುವುದಷ್ಟೇ ಅಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.
ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿರುವ ಚನ್ನಗಿರಿ ತಾಲೂಕು ಮಲ್ಲಾಪುರ ಗ್ರಾಮ ಪಂಚಾಯತ್ನಲ್ಲಿ ಬುಧವಾರ 52 ಲಕ್ಷ ರೂ. ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸಂಸದ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಮುಂತಾದ ಮೂಲ ಸೌಲಭ್ಯಗಳನ್ನು ಒದಗಿಸುವುದಷ್ಟೆ ಯೋಜನೆಯ ಉದ್ದೇಶವಲ್ಲ ಇದರ ಜೊತೆಗೆ ಗ್ರಾಮಗಳಲ್ಲಿ ಸಾಮಾಜಿಕ, ಆರ್ಥಿಕ, ಮತ್ತು ಸಾಂಸ್ಕೃತಿಕ ಬದಲಾವಣೆಯಾಗಬೇಕು. ಈ ರೀತಿ ಗ್ರಾಮಗಳ ಸಮಗ್ರ ಅಭಿವೃದ್ದಿಯಾದರೇ ಮಾತ್ರ ಸಂಸದ ಆದರ್ಶ ಗ್ರಾಮ ಯೋಜನೆಯ ಮೂಲ ಉದ್ದೇಶ ಸಾಕಾರಗೊಳ್ಳಲಿದೆ ಎಂದರು. ಕೇಂದ್ರ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಪಕ್ಷವೂ ಕೂಡ ಕೈ ಜೋಡಿಸಬೇಕು. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆ ಕಾರಣದಿಂದ ಆದರ್ಶಗ್ರಾಮ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ, ರಾಜ್ಯ ಸರ್ಕಾರ ಪ್ರಥಮ ಆದ್ಯತೆಯ ಮೇಲೆ ಸಂಸದ ಆದರ್ಶಗ್ರಾಮಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಆದರೆ ಈ ನಿಯಮವನ್ನು ರಾಜ್ಯ ಸರ್ಕಾರ ಪಾಲಿಸುತ್ತಿಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಬಯಸುತ್ತಿಲ್ಲ. ಬದಲಾಗಿ ಹೇಗಾದರೂ ಮಾಡಿ ಐದು ವರ್ಷ ಪೂರೈಸಿದರೆ ಸಾಕು ಎಂದು ಕಾಲಹರಣ ಮಾಡುತ್ತಿದೆ ಎಂದು ದೂರಿದರು.
ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಕರಿಯಪ್ಪ,ತಾಲೂಕು ಪಂಚಾಯತಿ ಸದಸ್ಯ ಕೆಂಚಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವನಗೌಡ್ರು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೇಖರಪ್ಪ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.