ಪತ್ರಕರ್ತೆ ಗೌರಿ ಹತ್ಯೆಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ


Team Udayavani, Sep 7, 2017, 4:00 PM IST

07-Z-2.jpg

ಮೊಳಕಾಲ್ಮೂರು: ಪತ್ರಕರ್ತೆ, ಚಿಂತಕಿ ಗೌರಿಲಂಕೇಶ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷದ ತಾಲೂಕು ಸಮಿತಿ ಬುಧವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ಸಿ.ಪಿ.ಐ.(ಎಂ.) ನ ಜಿಲ್ಲಾ ಕಾರ್ಯದರ್ಶಿ ಡಿ.ಎಂ. ಮಲಿಯಪ್ಪ ಮಾತನಾಡಿ, ಪತ್ರಕರ್ತೆ ಗೌರಿಲಂಕೇಶ್‌ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದು ಪ್ರಜಾಸತ್ತಾತ್ಮಕ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕೋಮು ಮತ್ತು ಜಾತಿವಾದಿಗಳು ಎಡಪಂಥೀಯ ಚಿಂತನೆಗಳನ್ನು ಮತ್ತು ಏಳಿಗೆಗಳನ್ನು ಸಹಿಸದೆ ಇಂತಹ ದುಷ್ಕೃತ್ಯಗಳನ್ನು ಎಸಗಲಾಗುತ್ತಿದೆ. ಇದೇ ಮಾದರಿಯಲ್ಲಿ ಸಾಹಿತಿ ಕಲಬುರಗಿ ಅವರನ್ನು ಹತ್ಯೆ ಮಾಡಿ ಎರಡು ವರ್ಷಗಳು ಕಳೆದರೂ ದುಷ್ಕರ್ಮಿಗಳನ್ನು ಬಂಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು.

ಈ ಬೆನ್ನಲ್ಲೆ ಪತ್ರಕರ್ತೆ ಗೌರಿಲಂಕೇಶ್‌ ಅವರನ್ನು ಹತ್ಯೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂತಹ ಭಯಾನಕ ಘಟನೆಗಳು ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವುದು ರಾಜ್ಯಾಡಳಿತದ ಭದ್ರತೆಯ ಕೊರತೆ ಕಾಡುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ಹತ್ಯೆ ಮಾಡಿದ ಕೊಲೆ ಗಡುಕರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸಿ.ಐ.ಟಿ.ಯು.ನ ದಾನಸೂರನಾಯಕ ಮಾತನಾಡಿ, ರಾಜ್ಯದಲ್ಲಿ ಎಡಪಂಥೀಯ ಚಿಂತಕರು ಮತ್ತು ಬುದ್ಧಿಜೀವಿಗಳ ಕಗ್ಗೊಲೆ ನಡೆಯುವುದನ್ನು ಕೂಡಲೇ ನಿಲ್ಲಿಸಿ ಅವರನ್ನು ರಕ್ಷಿಸಬೇಕು. ರಾಜ್ಯದಲ್ಲಿ ಹೋರಾಟಗಾರರು ಬುದ್ಧಿಜೀವಿಗಳ ಕಗ್ಗೊಲೆ ನಡೆಯುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯ ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಗೂಂಡರಾಜ್ಯವಾಗುವುದನ್ನು ತಡೆದು ಪ್ರಜಾಸತ್ತಾತ್ಮಕತೆ ಉಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎಚ್‌.ಎ. ಮಾರಣ್ಣ ಮಾತನಾಡಿ, ರಾಜ್ಯದ ಏಳ್ಗೆಗಾಗಿ ಹೋರಾಟ ಮಾಡುವ ಹೋರಾಟಗಾರರನ್ನು ಮತ್ತು ಶೋಷಿತರ ಧ್ವನಿಯಾಗಿರುವ ಬುದ್ಧಿಜೀವಿ ಪತ್ರಕರ್ತರನ್ನು ಹತ್ಯೆ ಮಾಡಿರುವ ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು. ಶಿರಸ್ತೇದಾರ ಶಿವಣ್ಣ ಅವರಿಗೆ ಗೌರಿ ಲಂಕೇಶ್‌ ಹಂತಕರನ್ನು ಬಂಧಿಸುವಂತೆ ಆಗ್ರಹಿಸ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಸಿ.ಪಿ.ಐ.( ಎಂ) ನ ಪದಾಧಿಕಾರಿಗಳಾದ ಅಂಜಿನಿ, ಗುರ್ರಪ್ಪ, ಮುರಳಿಕೃಷ್ಣ, ಲಕ್ಷ್ಮಣ, ಜಯಣ್ಣ, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಸರಸ್ವತಿ, ಕಾರ್ಯಕರ್ತೆಯರಾದ ಸರೋಜಮ್ಮ, ಪರಿಮಳ, ಶಾರದಾ, ಹಸೀನಾಬಿ, ಸರಸ್ವತಿ, ಅನುರಾಧಾ, ರತ್ನಮ್ಮ, ಶಾರದಮ್ಮ, ಲಕ್ಷ್ಮೀ, ಶಾಂತಮ್ಮ, ಸಾರಂಬೀ, ನಾಗಮ್ಮ ಹಾಗೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.