ಜ| ರಾವತ್ “ಯುದ್ಧ’ ಹೇಳಿಕೆಗೆ ಚೀನ ಕಳವಳ
Team Udayavani, Sep 8, 2017, 8:45 AM IST
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಹಕಾರ ಮಾತುಕತೆ ಬೆನ್ನಲ್ಲೇ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿಕೆ ಬಗ್ಗೆ ಚೀನ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದೆ. ರಾವತ್ ಹೇಳಿಕೆಯು ಕ್ಸಿ ಹಾಗೂ ಮೋದಿ ಅವರ ಮಾತುಕತೆಗೆ ವ್ಯತಿರಿಕ್ತವಾಗಿದೆ ಎಂದಿದೆ.
ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಹಾಗೂ ಜಿನ್‌ಪಿಂಗ್ ಮಾತುಕತೆ ನಡೆಸಿ ಉಭಯ ರಾಷ್ಟ್ರಗಳು ಸಹಕಾರದೊಂದಿಗೆ ಇರುವ ನಿರ್ಧಾರಕ್ಕೆ ಬಂದಿದ್ದವು. ಆದರೆ, ಬುಧವಾರ ಮಾತನಾಡಿದ್ದ ರಾವತ್, “ಯಾವುದೇ ಕ್ಷಣದಲ್ಲಿ ಚೀನ-ಪಾಕಿಸ್ತಾನ ಯುದ್ಧಕ್ಕೆ ನಿಲ್ಲಬಹುದು. ಭಾರತ ಏಕಕಾಲದಲ್ಲಿ ಭಾರತ ಹಾಗೂ ಚೀನ ದೇಶಗಳನ್ನು ಎದುರಿಸಬೇಕಾಗಿಯೂ ಬರಬಹುದು. ಚೀನ ಈಗಾಗಲೇ ಕಾಲ್ಕೆರೆದು ಯುದ್ಧಕ್ಕೆ ಮೈಕೊಡವಿ ನಿಂತಿದೆ. ಭಾರತವೂ ಸಮರ್ಥವಾಗಿಯೇ ಎದುರಿಸುವ ಶಕ್ತಿ ಹೊಂದಿದೆ’ ಎಂದಿದ್ದರು.
ಇದಕ್ಕೆ ಗುರುವಾರ ಪ್ರತಿಕ್ರಿಯಿಸಿದ ಚೀನ ವಿದೇಶಾಂಗ ಇಲಾಖೆ, “ಇತ್ತ ಕ್ಸಿ ಜಿನ್‌ಪಿಂಗ್ ಹಾಗೂ ನರೇಂದ್ರ ಮೋದಿ ಸಹಕಾರ ಮಾತುಕತೆ ನಡೆಸಿದರೆ, ಇದಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಭಾರತದ ಆರ್ಮಿ ಮುಖ್ಯಸ್ಥರು ನೀಡುತ್ತಿದ್ದಾರೆ. ಇದು ಭಾರತ ಸರಕಾರದ ಹೇಳಿಕೆಯೋ ಅಥವಾ ಆರ್ಮಿ ಮುಖ್ಯಸ್ಥರ ವೈಯಕ್ತಿಕ ಹೇಳಿಕೆಯೋ ಎನ್ನುವುದನ್ನು ಭಾರತ ಸ್ಪಷ್ಟಪಡಿಸಲಿ. ಅವರ ಹೇಳಿಕೆ ನಿಜಕ್ಕೂ ಕಳವಳ ಮೂಡಿಸುವಂತಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.