ಅತಿರಥನ ರಾಗ, ಸುರಾಗ

Team Udayavani, Sep 8, 2017, 11:23 AM IST

08-SUCHI-1.jpg

“ಆ ದಿನಗಳು’ ಚೇತನ್‌ “ಅತಿರಥ’ ಎಂಬ ಸಿನಿಮಾ ಮಾಡುತ್ತಿರೋದು, ಆ ಸಿನಿಮಾವನ್ನು ಮಹೇಶ್‌ ಬಾಬು ನಿರ್ದೇಶಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಈಗ ಆ ಚಿತ್ರದ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆದಿದೆ. ಪುನೀತ್‌ರಾಜಕುಮಾರ್‌ ಹಾಗೂ ಅಶ್ವಿ‌ನಿ ಪುನೀತ್‌ರಾಜಕುಮಾರ್‌ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದ ಹಾಡು ಹಾಗೂ ಛಾಯಾಗ್ರಹಣವನ್ನು ಮೆಚ್ಚಿಕೊಂಡು ಚಿತ್ರತಂಡದ ಬೆನ್ನು ತಟ್ಟಿದರು. ಪುನೀತ್‌ ರಾಜಕುಮಾರ್‌ ಆಡಿಯೋ ಬಿಡುಗಡೆಗೆ ಬಂದಿದ್ದರಿಂದ ಸಹಜವಾಗಿಯೇ ನಾಯಕ ಚೇತನ್‌ ಖುಷಿಯಾಗಿದ್ದರು. “ನಾನು ಅಮೆರಿಕಾದಲ್ಲಿದ್ದಾಗ “ಭಕ್ತ ಪ್ರಹ್ಲಾದ’ ಪಾತ್ರವನ್ನು ಏಕಪಾತ್ರಾಭಿನಯ ಮಾಡುತ್ತಿದ್ದೆ. ಭಾರತಕ್ಕೆ ಬಂದ ನಂತರ ನಿಜವಾದ ಪ್ರಹ್ಲಾದ ಯಾರು ಎಂದು ಗೊತ್ತಾಗಿ ಪುನೀತ್‌ ಅವರನ್ನು ಭೇಟಿಯಾದೆ.  ಈಗ ಅವರ ಜೊತೆ ಒಳ್ಳೆಯ ಸ್ನೇಹವಿದೆ’ ಎಂದರು. ಇನ್ನು, ಚಿತ್ರದ ಬಗ್ಗೆ ಮಾತನಾಡಿದ ಚೇತನ್‌, ಚಿತ್ರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಹೇಳಿದ್ದೇವೆ. ಮುಖ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಮೋಸ ಸೇರಿದಂತೆ ಸಾಕಷ್ಟು ವಿಷಯಗಳನ್ನು ಹೇಳಿದ್ದೇವೆ. ನಾನಿಲ್ಲಿ ವಾಹಿನಿ ಪತ್ರಕರ್ತನಾಗಿ ಕಾಣಿಸಿಕೊಂಡಿದ್ದು,
ಮಾಧ್ಯಮದ ಶಕ್ತಿ ಏನೆಂಬುದನ್ನು ಕೂಡಾ ಇಲ್ಲಿ ತೋರಿಸಿದ್ದೇವೆ’ ಎಂದರು.

ನಾಯಕಿ ಲತಾ ಹೆಗಡೆಗೆ ಮೊದಲ ಸಿನಿಮಾದಲ್ಲೇ ಒಳ್ಳೆಯ ತಂಡದ ಜೊತೆ ಸಿನಿಮಾ ಮಾಡಿದ ಖುಷಿ ಇದೆಯಂತೆ. ಮಹೇಶ್‌ ಬಾಬು ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದಾಗಲೇ ಇವರ ಜೊತೆ ಕೆಲಸ ಮಾಡಬೇಕೆಂಬ ಆಸೆ ಇತ್ತಂತೆ. ಅದು ಈಗ ಈಡೇರಿದೆ ಎಂಬುದು ಅವರ ಮಾತು. ನಿರ್ದೇಶಕ ಮಹೇಶ್‌ ಬಾಬು ತಮಗೆ ಮೊದಲು ಅವಕಾಶ ನೀಡಿದ ರಾಜ್‌ ಸಂಸ್ಥೆಯನ್ನು ನೆನಪಿಸಿಕೊಳ್ಳುತ್ತಲೇ ಮಾತಿಗಿಳಿದ ಮಹೇಶ್‌ ಬಾಬು, “ಚಿತ್ರದಲ್ಲಿ ಸಾಮಾಜಿಕ ಸಂದೇಶವಿರುವ ವಿಷಯವನ್ನು ಕಮರ್ಷಿಯಲ್‌ ಆಗಿ ಹೇಳಿದ್ದೇವೆ. ಈ ಚಿತ್ರಕ್ಕಾಗಿ ಮೂರು ವರ್ಷ ಕಾದ ನಿರ್ಮಾಪಕರಿಗೆ ನಾನು ಥ್ಯಾಂಕ್ಸ್‌ ಹೇಳಬೇಕು. ಅವರ ಸಿನಿಮಾ ಪ್ರೀತಿಯಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂಬುದು ಮಹೇಶ್‌ ಬಾಬು ಮಾತು. “ಅತಿರಥ’ ಚಿತ್ರದ ಮೂಲಕ ಸಾಧು ಕೋಕಿಲ ಅವರ ಪುತ್ರ ಸುರಾಗ್‌ ಸಂಗೀತ ನಿರ್ದೇಶಕರಾಗಿ ಲಾಂಚ್‌ ಆಗುತ್ತಿದ್ದಾರೆ. “ಸಂಗೀತ ಎಂಬುದು ನನಗೆ ತಾತ, ತಂದೆಯಿಂದಲೇ ಬಂದಿದೆ. ಈಗ “ಅತಿರಥ’ದ ಮೂಲಕ ಸಂಗೀತ ನಿರ್ದೇಶಕನಾಗುವ ಅವಕಾಶ ಸಿಕ್ಕಿದೆ’ ಎನ್ನುತ್ತಾ ಕಾರ್ಯಕ್ರಮಕ್ಕೆ ಪುನೀತ್‌ ಬಂದ ಸಂತಸ ಹಂಚಿಕೊಂಡರು. ಸಾಧುಕೋಕಿಲ ಕೂಡಾ ತಮ್ಮ ಮಗನಿಗೆ ಎಲ್ಲರ ಪ್ರೋತ್ಸಾಹವಿರಲಿ ಎಂದರು. ಈ ಚಿತ್ರವನ್ನು ಪ್ರೇಮ್‌ ಮೈಸೂರು, ಡಾ.ವೇಣುಗೋಪಾಲ್‌ ಹಾಗೂ ಗಂಡಸಿ ಮಂಜುನಾಥ್‌ ಸೇರಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.