ಸಕ್ರಿಯವಾಗದ ಕಾವೇರಿ ಕುಟುಂಬ: ವಿಷಾದ


Team Udayavani, Sep 8, 2017, 11:24 AM IST

mys1.jpg

ಮೈಸೂರು: ರಾಜಕೀಯ ಕಾರಣಗಳಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ಕಗ್ಗಂಟಾಗಿರುವಾಗ ಎರಡೂ ರಾಜ್ಯಗಳ ರೈತರ ನಡುವೆ ಬಾಂಧವ್ಯ ಹಾಗೂ ಸಂವಹನ ಹೆಚ್ಚಿಸುವ ನಿಟ್ಟಿನಲ್ಲಿ ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಅವರು ಕಾವೇರಿ ನದಿ ತೀರದ ರೈತರ ಸಭೆ ನಡೆಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

ದಶಕಗಳ ಹಿಂದೆ ರೈತಸಂಘಟನೆಗಳ ಮುಖಂಡರು ಸೇರಿ ಇಂತಹದೊಂದು ಪ್ರಯತ್ನ ನಡೆಸಿದ್ದರು. ಆದರೆ, ಕೆಲ ಕಾರಣಗಳಿಂದಾಗಿ ನ್ಯಾಯಾಲಯದ ಹೊರಗೆ ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಬೇಕು ಎಂಬ ರೈತ ಮುಖಂಡರ ಪ್ರಯತ್ನ ಸಫ‌ಲವಾಗಿರಲಿಲ್ಲ. 

ಕಾವೇರಿ ಕುಟುಂಬ: 2003ರಲ್ಲಿ ಕಾವೇರಿ ನದಿ ಪಾತ್ರದಲ್ಲಿ ಬರುವ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ರಾಜ್ಯಗಳ ರೈತ ಮುಖಂಡರನ್ನೊಳಗೊಂಡ 24 ಜನರ ಕಾವೇರಿ ಕುಟುಂಬ ರಚಿಸಿಕೊಳ್ಳಲಾಗಿತ್ತು. ಕರ್ನಾಟಕದಿಂದ ಶಾಸಕರಾದ ರೈತ ಮುಖಂಡ ಕೆ.ಎಸ್‌.ಪುಟ್ಟಣ್ಣಯ್ಯ, ಪೊ›.ಕೆ.ಸಿ.ಬಸವರಾಜು, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಜಯರಾಂ, ಪೊ›.ಎಚ್‌.ಎಲ್‌.ಕೇಶವಮೂರ್ತಿ,

ಕೊಡಗಿನ ಸುಬ್ಬಯ್ಯ, ರಂಗನಾಥ್‌, ಸಿ.ಡಿ.ಮಹದೇವಯ್ಯ, ಮಲ್ಲಯ್ಯ, ಪ್ರಕಾಶ್‌ ಕಮ್ಮರಡಿ ಸೇರಿದಂತೆ 11 ಜನ ಸದಸ್ಯರು, ನಂತರದ ದಿನಗಳಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಕುರುಬೂರು ಶಾಂತಕುಮಾರ್‌ ಅವರನ್ನೂ ಈ ಕುಟುಂಬದ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿತ್ತು. ತಮಿಳುನಾಡಿನಿಂದ 11 ಜನ, ಕೇರಳ ಮತ್ತು ಪುದುಚೇರಿ ರಾಜ್ಯಗಳಿಂದ ತಲಾ ಒಬ್ಬರು ಈ ಕುಟುಂಬದ ಸದಸ್ಯರಾಗಿದ್ದರು. ತಮಿಳುನಾಡಿನಿಂದ ರಾಮಸ್ವಾಮಿ ಅಯ್ಯಂಗಾರ್‌, ಕರ್ನಾಟಕದಿಂದ ಭವಾನಿಶಂಕರ್‌ ಕುಟುಂಬದ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.

ಕಾವೇರಿ ಕುಟುಂಬದ ಸದಸ್ಯರು ಎರಡೂ ರಾಜ್ಯಗಳ ನದಿ ಪಾತ್ರದ ಅಚ್ಚುಕಟ್ಟು ಪ್ರದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಸಮಸ್ಯೆ ಮನವರಿಕೆ ಮಾಡಿಕೊಂಡಿದ್ದರು. ಈ ಸಂಬಂಧ ಸುಮಾರು 14 ಸಭೆಗಳು ನಡೆದಿದ್ದು ವಿಶೇಷ. ಅರಣ್ಯ ನಾಶ, ಹವಾಮಾನ ವೈಪರಿತ್ಯದಿಂದ ವರ್ಷದಿಂದ ವರ್ಷಕ್ಕೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದು, ನೀರಿನ ಕೊರತೆ ಎದುರಾಗಿದೆ.

ಹೀಗಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಿರುವುದರಿಂದ ಕಾವೇರಿ ನದಿ ಪಾತ್ರದ ರೈತರು ಬೆಳೆ ಪದ್ಧತಿ ಬದಲಿಸಿಕೊಳ್ಳಬೇಕು, ಬೆಳೆ ರಜೆಯನ್ನೂ ಘೋಷಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಎರಡೂ ರಾಜ್ಯಗಳಲ್ಲಿ ಹಲವು ಸುತ್ತಿನ ಸಭೆಗಳನ್ನು ನಡೆಸಿ ಚರ್ಚಿಸಿದ ಬಳಿಕ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜೆ.ಜಯಲಲಿತಾ, ಕರ್ನಾಟಕದ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ದುಂಡುಮೇಜಿನ ಸಭೆ ನಡೆಸಿ ಕಾವೇರಿ ನೀರು ಹಂಚಿಕೆ ಸಂಬಂಧದ ಶತಮಾನಗಳ ಸಮಸ್ಯೆಗೆ ನ್ಯಾಯಾಲಯದ ಹೊರಗೆ ಪರಿಹಾರ ಕಂಡುಕೊಳ್ಳುವ ಗಂಭೀರ ಪ್ರಯತ್ನ ನಡೆದಿತ್ತು.

ಆದರೆ, ಮುಖ್ಯಮಂತ್ರಿಗಳ ಭೇಟಿ ಮಾಡುವ ವಿಚಾರದಲ್ಲಿ ತಮಿಳುನಾಡಿನ ಕೆಲವರು ಅಡ್ಡಗಾಲು ಹಾಕಿದ್ದರಿಂದ ನಮ್ಮ ಪ್ರಯತ್ನ ಕೈಗೂಡಲಿಲ್ಲ ಎನ್ನುತ್ತಾರೆ ಕಾವೇರಿ ಕುಟುಂಬದ ಸದಸ್ಯರಾಗಿರುವ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ. ಈಗಲೂ ಕಾವೇರಿ ಕುಟುಂಬ ಜೀವಂತವಾಗಿದೆ. ಆದರೆ, ನ್ಯಾಯಾಲಯದ ಆದೇಶದಿಂದ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿರುವುದರಿಂದ ಸಕ್ರಿಯವಾಗಿಲ್ಲ ಎನ್ನುತ್ತಾರೆ ಅವರು.

ಒಂದೊಮ್ಮೆ ತಮಿಳುನಾಡಿನ ಕೆಲ ರೈತ ಮುಖಂಡರು ಅಡ್ಡಗಾಲು ಹಾಕದಿದ್ದರೆ ಅಂದೇ ಸಮಸ್ಯೆ ಬಗೆಹರಿಯುತ್ತಿತ್ತು. ಇದು ಸಾಧ್ಯವಾಗಿದ್ದರೆ, ಕಾವೇರಿ ನ್ಯಾಯಾಧೀಕರಣ ಕರ್ನಾಟಕಕ್ಕೆ ಕೊಟ್ಟಿದ್ದಕ್ಕಿಂತ 15 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಗುತ್ತಿತ್ತು ಎಂದು ಬಡಗಲಪುರ ನಾಗೇಂದ್ರ “ಉದಯವಾಣಿ’ ಜತೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸದ್ಗುರು ರಾಷ್ಟ್ರಯಾತ್ರೆ ಇಂದು ಮೈಸೂರಿಗೆ: ನದಿಗಳನ್ನು ರಕ್ಷಿಸಿ ಅಭಿಯಾನ ಕೈಗೊಂಡಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ರಾಷ್ಟ್ರಯಾತ್ರೆ ಶುಕ್ರವಾರ ಮೈಸೂರು ತಲುಪಲಿದೆ. ರಾಷ್ಟ್ರಯಾತ್ರೆ ಅಂಗವಾಗಿ ಸಂಜೆ 6ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದ್ದು, ರಾಜವಂಶಸ್ಥರಾದ ಡಾ.ಪ್ರಮೋದಾದೇವಿ ಒಡೆಯರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ನಟ ಗಣೇಶ್‌, ಸಂಸದ ಪ್ರತಾಪ್‌ ಸಿಂಹ, ಶಾಸಕ ವಾಸು ಭಾಗವಹಿಸಲಿದ್ದಾರೆ. ಸುಮಾರು 10 ಸಾವಿರ ಮಂದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. 

ರೈತರ ಸಭೆ: ಇದಕ್ಕೂ ಮುನ್ನ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನ ಮೀನಾಕ್ಷಿಪುರದಲ್ಲಿ ಬೆಳಗ್ಗೆ 8.30ರಿಂದ 10ಗಂಟೆವರೆಗೆ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ನದಿ ಪಾತ್ರದ ರೈತರ ಸಭೆಯನ್ನು ಸದ್ಗುರು ನಡೆಸಲಿದ್ದಾರೆ. 

ಸದ್ಗುರು ಅಭಿಯಾನದ ಉದ್ದೇಶವಿದು: ಭಾರತದ ನದಿಗಳು ದುಃಸ್ಥಿತಿಗೆ ತಲುಪಿದ್ದು, ಒಂದೊಮ್ಮೆ ವರ್ಷಪೂರ್ತಿ ಹರಿಯುತ್ತಿದ್ದ ನದಿಗಳು ಇಂದು ಮಳೆಗಾಲದಲ್ಲಿ ಹರಿಯುವ ನದಿಗಳಾಗಿವೆ. ಅದೆಷ್ಟೋ ಚಿಕ್ಕಪುಟ್ಟ ನದಿಗಳು ಹೇಳಹೆಸರಿಲ್ಲದಂತೆ ಮಾಯವಾಗಿವೆ. ಮುಂದಿನ 15 ವರ್ಷಗಳಲ್ಲಿ ನಮಗೆ ಬದುಕಲು ಅವಶ್ಯವಿರುವಷ್ಟು ನೀರೂ ಸಿಗುವುದಿಲ್ಲ.

ಮುಖ್ಯ ನದಿಗಳಾದ ಗಂಗಾ, ಕೃಷ್ಣಾ, ನರ್ಮದಾ, ಕಾವೇರಿ ಬಹು ಬೇಗನೆ ಬತ್ತಿ ಹೋಗುತ್ತಿವೆ. ಹೀಗಾಗಿ ನದಿಗಳನ್ನು ರಕ್ಷಿಸಿಕೊಳ್ಳಬೇಕಿರುವುದರಿಂದ ದೇಶಾದ್ಯಂತ ಜನ ಜಾಗೃತಿ ಮೂಡಿಸಲು ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಅವರು ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ರಾಷ್ಟ್ರಯಾತ್ರೆ ಕೈಗೊಂಡಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.