ಗೌರಿ ಆಯ್ತು, ನಿಮ್ಮ ಐವರಿಗೂ ಉಳಿಗಾಲವಿಲ್ಲ; Facebook ನಲ್ಲಿ ಬೆದರಿಕೆ
Team Udayavani, Sep 8, 2017, 11:50 AM IST
ನವದೆಹಲಿ: ಪತ್ರಕರ್ತೆ, ವಿಚಾರವಾದಿ ಚಿಂತಕಿ ಗೌರಿ ಲಂಕೇಶ್ ಹತ್ಯೆಯ ಬೆನ್ನಲ್ಲೇ ಖ್ಯಾತ ಪತ್ರಕರ್ತೆ ಸಾಗರಿಕಾ ಘೋಷ್ ಸೇರಿದಂತೆ ಐವರೂ ಹತ್ಯೆಗೆ ಗುರಿಯಾಗಲಿದ್ದಾರೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬಗ್ಗೆ ಗುರುವಾರ ದೆಹಲಿ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದೇಶದ್ರೋಹಿಗಳಾಗಿರುವ ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಶೋಭಾ ಡೇ, ಅರುಂಧತಿ ರಾಯ್, ಸಾಗರಿಕಾ ಘೋಷ್, ಕವಿತಾ ಕೃಷ್ಣನ್ ಹಾಗೂ ಶೀಲಾ ರಶೀದ್ ಅವರನ್ನು ಹತ್ಯೆಗೈಯುವುದಾಗಿ ಬೆದರಿಕೆಯೊಡ್ಡಿ ವ್ಯಕ್ತಿಯೊಬ್ಬ ಫೇಸ್ ಬುಕ್ ಫೋಸ್ಟ್ ಹಾಕಿದ್ದು, ಈ ಬಗ್ಗೆ ಸಾಗರಿಕಾ ಘೋಷ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
ಪತ್ರಕರ್ತೆ ಸಾಗರಿಕಾ ಘೋಷ್ ಅವರ ದೂರಿನ ಆಧಾರದ ಮೇಲೆ ಐಟಿ ಕಾಯ್ದೆಯಡಿ ನಾವು ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯೊಬ್ಬ ವಿಕ್ರಮ್ ಆದಿತ್ಯ ರಾಣಾ ಮತ್ತು ವಿಕ್ರಮ್ ಜಿಬ್ ರಾಣಾ ಎಂಬ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ಬೆದರಿಕೆ ಹಾಕಿ ಪೋಸ್ಟ್ ಮಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.