ಇಂದಿನಿಂದ ಮತ್ತೊಂದು ವಿಮಾನ ನಭಕ್ಕೆ
Team Udayavani, Sep 8, 2017, 11:55 AM IST
ಹುಬ್ಬಳ್ಳಿ: ಮೋಡಗಳ ಲಭ್ಯತೆ ಆಧಾರದ ಮೇಲೆ ಐದನೇ ದಿನ ಎರಡು ಹಂತದಲ್ಲಿ ಮೋಡ ಬಿತ್ತನೆ ಕಾರ್ಯ ಗುರುವಾರ ನಡೆದಿದ್ದು, ಸೆ.8 ರಿಂದ ಎರಡು ವಿಶೇಷ ವಿಮಾನಗಳ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.
ಗದಗ ರಡಾರ ಮಾಹಿತಿ ಮೇರೆಗೆ ಮಧ್ಯಾಹ್ನ 1:05 ಗಂಟೆಯಿಂದ 3:25 ರವರೆಗೆ ಮೋಡಬಿತ್ತನೆ ನಡೆಯಿತು. ಮೊದಲ ಹಂತದಲ್ಲಿ ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ವಿಜಯಪುರ, ನವಲಗುಂದ, ನರಗುಂದ, ಗದಗ, ಹಳಿಯಾಳ, ದಾಂಡೇಲಿ ಭಾಗದಲ್ಲಿ ಬಿತ್ತನೆ ನಡೆಯಿತು. ಸುಮಾರು ಒಂಬತ್ತು ಪ್ರದೇಶದಲ್ಲಿ ನಡೆದ ಮೋಡ ಬಿತ್ತನೆಗೆ ಸಂಪೂರ್ಣ 24 ಫೇರ್‌ಗಳನ್ನು ಬಳಕೆ ಮಾಡಿದ್ದಾರೆ.
ಸಂಜೆ 4:40ಗಂಟೆಯಿಂದ 6:40ರವರೆಗೆ ಎರಡನೇ ಹಂತದ ಮೋಡ ಬಿತ್ತನೆ ನಡೆಯಿತು. ಈ ಸಂದರ್ಭದಲ್ಲಿ ಹಳಿಯಾಳ, ಸವದತ್ತಿ, ರಾಮದುರ್ಗ, ಮುಧೋಳ ಭಾಗದಲ್ಲಿ ಬಿತ್ತನೆ ನಡೆದಿದ್ದು, ಒಟ್ಟು 10 ಫ್ಲೇರ್‌ಗಳನ್ನು ಸಿಡಿಸಿದ್ದಾರೆ. ಮೋಡ ಬಿತ್ತನೆ ನಂತರ ಕೆಲವೆಡೆ ಮಳೆಯಾಗಿದೆ ಎಂದು ತಿಳಿದು ಬಂದಿದೆ.
ಎರಡನೇ ವಿಮಾನ: ಉತ್ತರ ಕರ್ನಾಟಕ ಭಾಗದಲ್ಲಿ ಮೋಡಗಳ ಲಭ್ಯತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ವಿಶೇಷ ವಿಮಾನಗಳ ಮೂಲಕ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಗುರುವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೂಂದು ವಿಶೇಷ ವಿಮಾನ ಆಗಮಿಸಿದ್ದು, ಸೆ.8 ರಿಂದ ಕ್ಯಾಪ್ಟನ್ ಆ್ಯಂಡ್ರಿವ್ ಹಾಗೂ ತರುಣ್, ಇಂಜಿನೀಯರ್ ರಿಚರ್ಡ್ ನೇತೃತ್ವದ ಕಿಂಗ್ ಏರ್ ಸಿ 90 ವಿಮಾನ ಕಾರ್ಯಾಚರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.