ಗೌರಿ ಲಂಕೇಶ ಹಂತಕರ ಬಂಧನಕ್ಕೆ ಆಗ್ರಹ
Team Udayavani, Sep 8, 2017, 4:45 PM IST
ರಾಯಚೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವುದನ್ನು ಖಂಡಿಸಿ ಮತ್ತು ಹಂತಕರ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ನಗರ ಸೇರಿದಂತೆ ಗುರುವಾರ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಕರ್ನಾಟಕ ರಣಧೀರ ಪಡೆ: ಸಂಘಟನೆ ಸದಸ್ಯರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಗೃಹ ಖಾತೆ ಸಚಿವರಿಗೆ ಮನವಿ ಸಲ್ಲಿಸಿದರು. ಕಳೆದ ಎರಡು ವರ್ಷಗಳ ಹಿಂದೆ ವಿಚಾರವಾದಿ ಡಾ| ಎಂ.ಎಂ. ಕಲಬುರ್ಗಿ ಅವರನ್ನು ಕೂಡ ಇದೇ ರೀತಿ ಹತ್ಯೆ ಮಾಡಲಾಗಿತ್ತು. ಗೌರಿ ಲಂಕೇಶರನ್ನು ಕೂಡ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದು ವಿಚಾರವಾದಿಗಳನ್ನು ಚಿಂತೆಗೀಡು ಮಾಡಿದೆ. ಇಂತಹ ಕೃತ್ಯ ತಡೆಯುವಲ್ಲಿ ರಾಜ್ಯ
ಸರ್ಕಾರದ ವೈಫಲ್ಯಕ್ಕೆ ಎದ್ದು ಕಾಣುತ್ತಿದೆ ಎಂದು ದೂರಿದರು.
ಚಿಂತಕರು, ಪ್ರಗತಿಪರ ಹೋರಾಟಗಾರರನ್ನು ಈ ರೀತಿ ಹತ್ಯೆ ಮಾಡುವುದರಿಂದ ಹೋರಾಟಗಳು ನಿಲ್ಲುವುದಿಲ್ಲ. ಇಂಥ
ಘಟನೆಗಳನ್ನು ಖಂಡಿಸಿ ನಿರಂತರ ಹೋರಾಟ ಮಾಡಲಾಗುವುದು. ಕೂಡಲೇ ಗೌರಿ ಲಂಕೇಶರನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ರಾಜಶೇಖರ, ಯುವ ಘಟಕದ ಅಧ್ಯಕ್ಷ ಸೈಯ್ಯದ್ ಜಾವೀದ್ ಖಾದ್ರಿ, ಸದಸ್ಯರಾದ ಶಿವು ಅಸ್ಕಿಹಾಳ, ಶೇಖರ ಕುಮಾರ, ನರಸಪ್ಪ ಗೋನವಾರ ಇತರರಿದ್ದರು.
ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ: ವೆಲ್ಫೆಧೀರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕೋಮುವಾದಿ ಸಂಘಟನೆಗಳ ಹಾವಳಿ ತಡೆಗೆ ಸರ್ಕಾರಗಳು ವಿಫಲವಾಗುತ್ತಿರುವುದು ಕಳವಳಕಾರಿ ಸಂಗತಿ. ಮಹಾರಾಷ್ಟ್ರದ ಡಾ| ನರೇಂದ್ರ ದಾಬೋಲ್ಕರ್ ಮತ್ತು ಕಾರ್ಮಿಕ ಮುಖಂಡ ಗೊವಿಂದ್ ಪನ್ಸಾರೆ ಹಾಗೂ ಹಿರಿಯ ಸಾಹಿತಿ ಡಾ| ಎಂ.ಎಂ. ಕಲಬುರ್ಗಿಯವರ ಹತ್ಯೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಈವರೆಗೂ, ಸರ್ಕಾರಗಳಿಗೆ ಸಾಧ್ಯವಾಗಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಹಿಂಸೆಯ ಮೂಲಕ ನಾಗರಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ. ಕೂಡಲೇ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಸಂಘಟನೆ ಸದಸ್ಯರಾದ ಅಬ್ದುಲ್ ಘನಿ, ಅಬ್ದುಲ್ ಲತೀಫ್, ಅನ್ವಾರುಲ್ ಹಸನ್, ಮೆಹಬೂಬ್ ಉಮ್ರಿ, ಇಮಾಮವೆಲ್ ಇತರರು ಇದ್ದರು.
ಎಸ್‌ಡಿಪಿಐ ಖಂಡನೆ: ಗೌರಿ ಲಂಕೇಶರ ಹತ್ಯೆಯನ್ನು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ತೀವ್ರವಾಗಿ ಖಂಡಿಸಿ, ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಕೋಮು ಸೌಹಾರ್ದತೆಗಾಗಿ ಶ್ರಮಿಸಿದ ಗೌರಿ ಲಂಕೇಶರ ಕೊಲೆ ಖಂಡನೀಯ. ಇದು ನಾಗರಿಕ ಸಮಾಜ ತಲೆತಗ್ಗಿಸುವಂಥ ಘಟನೆಯಾಗಿದ್ದು, ಚಿಂತನೆಗೀಡು ಮಾಡುವಂತಾಗಿದೆ. ಹಂತಕರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್ ಶಹಾಪುರಿ, ಸದಸ್ಯರಾದ ಎಂ.ಎ.ಮತಿನ ಅನ್ಸಾರಿ, ಎಂ.ಎ.ಅಜೀಮ್, ಎಂ.ಡಿ.ಇಸ್ಮಾಯಿಲ್, ಎಂ.ಡಿ. ಗೌಸ್, ಅಶ್ರಫ್ ಹುಸೇನ್, ಮಾಸೂರ್ ಅಹ್ಮದ್, ಜಾವೀದ್ ಅಲಿ, ಫಾರೂಕ್, ನೂರ್, ಶಫಿ, ಸೈಯ್ಯದ್ ಇರ್ಫಾನ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.