ಗೌರಿ ಹಂತಕರ ಸುಳಿವು ಕೊಟ್ಟರೆ 10 ಲಕ್ಷ ಬಹುಮಾನ


Team Udayavani, Sep 9, 2017, 6:10 AM IST

10-lak.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಎಸ್‌ಐಟಿ ಅಧಿಕಾರಿಗಳು ಹಾಗೂ ಗೃಹ ಸಚಿವರ ಜೊತೆ ಸುದೀರ್ಘ‌ ಸಮಾಲೋಚನೆ ನಡೆಸಿದರು. ಮೂರು ದಿನಗಳಿಂದ ನಡೆಯುತ್ತಿರುವ ಹತ್ಯೆಯ ತನಿಖೆಯ ಪ್ರಗತಿಯ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿವರಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್ಲ ಆಯಾಮದಿಂದಲೂ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಹಂತಕರ ಪತ್ತೆಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ತಂತ್ರಜ್ಞಾನ ಬಳಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ತನಿಖೆಯ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸದೇ ಪ್ರತಿ ದಿನ ತನಿಖೆಯ ಬೆಳವಣಿಗೆಯ ಬಗ್ಗೆ ಮಾಹಿತಿ ಒದಗಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಭೆಯ ನಂತರ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ತನಿಖೆಯ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲು ತೀರ್ಮಾನಿಸಲಾಗಿದೆ. ಆದಷ್ಟು ಬೇಗ ಹಂತಕರ ಪತ್ತೆಗೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಎಸ್‌ಐಟಿ ತಂಡಕ್ಕೆ ಕೇಳಿದಷ್ಟು ಅಧಿಕಾರಿಗಳನ್ನು ಈಗಾಗಲೇ ನೀಡಿದ್ದೇವೆ. ಇನ್ನೂ ಹೆಚ್ಚಿನ ಪೊಲಿಸರ ಅಗತ್ಯವಿದೆ ಎಂದರೆ, ಇಲಾಖೆಯಿಂದ ಪೊಲಿಸರನ್ನು ಒದಗಿಸಲಾಗುತ್ತದೆ. ಗೌರಿ ಲಂಕೇಶ್‌ ಹತ್ಯೆಗೆ ಮೂಲ ಕಾರಣ ಏನು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಗೌರಿ ಲಂಕೇಶ್‌ ಹತ್ಯೆಯ ಬಗ್ಗೆ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿರುವುದರಿಂದ ಎಡ, ಬಲ, ನಕ್ಸಲ್‌ ಎಲ್ಲಾ ಆಯಾಮದ ಬಗ್ಗೆಯೂ ತನಿಖೆ ನಡೆಯುತ್ತಿದ್ದು,  ತನಿಖೆ ಪೂರ್ಣಗೊಂಡ ಮೇಲೆ ಎಲ್ಲ ಸತ್ಯ ಹೊರಬರಲಿದೆ ಎಂದು ಹೇಳಿದರು.

ಸಚಿವ ಕುಲಕರ್ಣಿಗೆ ಝಡ್‌ ಭದ್ರತೆ:  ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿಗೆ ಸುಫಾರಿ ಹಂತಕರಿಂದ ಕೊಲೆ ಬೆದರಿಕೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರಿಗೆ ಝಡ್‌ ಮಾದರಿಯ ಭದ್ರತೆ ಕೇಳಿಕೊಂಡಿದ್ದರು. ಇಲಾಖೆಯಿಂದ ಅವರಿಗೆ ಭದ್ರತೆ ಒದಗಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪ್ರಧಾನ ಕಾರ್ಯದರ್ಶಿಯಾಗಿರುವ ಎಸ್‌.ಎಂ. ಜಾಮದಾರ್‌  ಅವರಿಗೂ ಭದ್ರತೆ ಒದಗಿಸಲಾಗುವುದು ಎಂದರು.ಸರ್ಕಾರ ಈಗಾಗಲೇ ಬೆದರಿಕೆ ಇರುವ ವಿಚಾರವಾದಿಗಳಿಗೆ ಭದ್ರತೆ ನೀಡಲು ತೀರ್ಮಾನಿಸಿದೆ. ಯಾರಿಗೆ ಬೆದರಿಕೆ ಇದೆಯೋ ಅವರೆಲ್ಲರಿಗೂ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.

ಜೀವರಾಜ್‌ ವಿಚಾರಣೆಗೆ ಸೂಚನೆ
ಗೌರಿ ಲಂಕೇಶ್‌ ಹತ್ಯೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶೃಂಗೇರಿಯ ಬಿಜೆಪಿ ಶಾಸಕ ಜೀವರಾಜ್‌ ಅವರನ್ನೂ ವಿಚಾರಣೆ ನಡೆಸುವಂತೆ ಎಸ್‌ಐಟಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಜೀವರಾಜ್‌ ಹೇಳಿಕೆಯ ಹಿಂದಿನ ಮರ್ಮ ಏನು ? ಯಾಕೆ ಆ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲು ಎಸ್‌ಐಟಿಗೆ ಸೂಚಿಸಿದ್ದೇವೆ ಎಂದರು.

ಜೀವರಾಜ್‌ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಬಹಿರಂಗವಾಗಿ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಅವರ ಹೇಳಿಕೆಯ ಬಗ್ಗೆ ಎಸ್‌ಐಟಿ ತನಿಖೆಯ ಬಳಿಕ ಮತ್ತಷ್ಟು ಸ್ಪಷ್ಟತೆ ದೊರೆಯಲಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಇಂದು ಹಿರಿಯ ಅಧಿಕಾರಿಗಳ ಸಭೆ
ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಬೆಳವಣಿಗೆಗಳ ಕುರಿತು ಚರ್ಚಿಸಲು ಗೃಹ ಸಚಿವ ರಾಮಲಿಂಗಾ ರೆಡ್ಡಿ ಇಂದು ಹಿರಿಯ ಪೊಲಿಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ. ವಿಕಾಸ ಸೌಧದ ನಾಲ್ಕನೆ ಮಹಡಿಯ ರೂಮ್‌ ನಂಬರ್‌ 419 ರಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಕರೆದಿದ್ದು, ಗೌರಿ ಹತ್ಯೆಯ ತನಿಖೆಯ ಬೆಳವಣಿಗೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಚಾರ ಕುರಿತಂತೆ ಚರ್ಚಿಸಲು ಸಭೆ ಕರೆದಿದ್ದಾರೆ. ಸಭೆಯಲ್ಲಿ ಡಿಜಿ ರೂಪ್‌ ಕುಮಾರ್‌ ದತ್ತಾ, ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್‌, ಬೆಂಗಳೂರು ನಗರ ಪೊಲಿಸ್‌ ಆಯುಕ್ತ ಸುನಿಲ್‌ ಕುಮಾರ್‌ ಸೇರಿದಂತೆ ಎಲ್ಲ ಹಿರಿಯ ಪೊಲಿಸ್‌ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾಮರಸ್ಯ ನಡಿಗೆ ಕೈ ಬಿಡಲು ಮನವಿ
ಬಿಜೆಪಿ ಮಂಗಳೂರು ಚಲೋ ನಡೆಸಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈತ ನೇತೃತ್ವದಲ್ಲಿ ಸಾಮರಸ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ ಕಾರ್ಯಕ್ರಮವನ್ನು ಕೈ ಬಿಡುವಂತೆ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಶಾಂತಿ ಕದಡುವ ಯಾವುದೇ ಹೋರಾಟಕ್ಕೂ ಸರ್ಕಾರ ಅನುಮತಿ ಕೊಡುವುದಿಲ್ಲ. ಒಂದು ವೇಳೆ ಸಾಮರಸ್ಯ ನಡಿಗೆ ನಡೆಸುವುದಾದರೆ, ಸಮಾಜದ ಎಲ್ಲ ವರ್ಗದ ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಬಿಜೆಪಿ ಮಂಗಳೂರು ಚಲೋ ಬೈಕ್‌ ರ್ಯಾಲಿ ವಿಫ‌ಲವಾಗಿದ್ದು, ಕೇವಲ 3 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಮಾಹಿತಿ ಲಭ್ಯವಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.