ನಗರಕ್ಕಿಂದು ನದಿ ರಕ್ಷಿಸಿ ಅಭಿಯಾನ


Team Udayavani, Sep 9, 2017, 11:28 AM IST

nadi-ulisi.jpg

ಬೆಂಗಳೂರು: ಸದ್ಗುರು ಜಗ್ಗಿ ವಾಸುದೇವ್‌ ಪರಿಕಲ್ಪನೆಯ “ನದಿಗಳನ್ನು ರಕ್ಷಿಸಿ’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಯಾತ್ರೆಯು ಶನಿವಾರ (ಸೆ.9) ಬೆಂಗಳೂರು ತಲುಪಲಿದ್ದು, ಸಂಜೆ 5 ಗಂಟೆಗೆ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಭೆ ಆಯೋಜಿಸಲಾಗಿದೆ. ಮೈಸೂರಿನಿಂದ ಯಾತ್ರೆಯು ಬೆಂಗಳೂರಿಗೆ ಆಗಮಿಸಲಿದ್ದು, ಸಭೆ ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ಸದ್ಗುರುಗಳು ಉಪಸ್ಥಿತರಿರಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಚಿತ್ರನಟ ಪುನೀತ್‌ ರಾಜಕುಮಾರ್‌, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ. ಸದಾನಂದಗೌಡ, ಸಂಸದ ಪಿ.ಸಿ. ಮೋಹನ್‌ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.  

ಸಭೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಖ್ಯಾತ ಗಾಯಕರಾದ ಉಷಾ ಉತುಪ್‌ ಮತ್ತು ವಾಸು ದೀಕ್ಷಿತ್‌ ಅವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.  ಕೇಂದ್ರ ಪರಿಸರ ಸಚಿವ ಡಾ. ಹರ್ಷವರ್ಧನ್‌ ಅವರು ಸೆ. 3ರಂದು ಕೊಯಮತ್ತೂರಿನಲ್ಲಿ ನದಿಗಳನ್ನು ರಕ್ಷಿಸಿ ಅಭಿಯಾನಕ್ಕೆ  ಚಾಲನೆ ನೀಡಿದರು. ಸೆ.3ರಿಂದ ಅ.2ರವರೆಗೆ ಕನ್ಯಾಕುಮಾರಿಯಿಂದ ಹಿಮಾಲಯದವವರೆಗೆ ದೇಶದ 16 ರಾಜ್ಯಗಳಲ್ಲಿ 7 ಸಾವಿರ ಕಿ.ಮೀ. ಸಂಚರಿಸಲಿದೆ.

ಈ ಅವಧಿಯಲ್ಲಿ 23ಕ್ಕೂ ಹೆಚ್ಚು ಬೃಹತ್‌ ಕಾರ್ಯಕ್ರಮಗಳು ನಡೆಯಲಿವೆ. ಸೆ.9ರಂದು ಬೆಂಗಳೂರಿಗೆ ಆಗಮಿಸಲಿರುವ ಯಾತ್ರೆಯು ಇಲ್ಲಿಂದ ಚೆನ್ನೈಗೆ ಸಾಗಲಿದೆ. ಮುಂದೆ ಅದು ವಿಜಯವಾಡ, ಹೈದರಾಬಾದ, ಮುಂಬೈ, ಅಹಮದಾಬಾದ್‌, ಇಂದೋರ್‌, ಭೋಪಾಲ್‌, ಲಖನೌ, ಜೈಪುರ, ಚಂಡೀಘಡ, ಹರಿದ್ವಾರ ಮೂಲಕ ಅ.2ರಂದು ದೆಹಲಿಗೆ ತಲುಪಲಿದೆ.  

ಅಭಿಯಾನದ ಉದ್ದೇಶ: ಭಾರತದ ನದಿಗಳು ದುಸ್ಥಿತಿಗೆ ಇಳಿದಿದ್ದು, ಒಂದೊಮ್ಮೆ ವರ್ಷಪೂರ್ತಿ ಹರಿಯುತ್ತಿದ್ದ ನದಿಗಳು ಇಂದು ಮಳೆಗಾಲದಲ್ಲಿ ಮಾತ್ರ ಹರಿಯುತ್ತಿವೆ. ಅದೆಷ್ಟೋ ಸಣ್ಣ ನದಿಗಳು ಮಾಯವಾಗಿವೆ. ದೇಶದ ಶೇ.25ರಷ್ಟು ಬೆಂಗಾಡಾಗಲಿದೆ. ಮುಂದಿನ 15 ವರ್ಷಗಳಲ್ಲಿ ನಮಗೆ ಬದುಕಲು ಅಗತ್ಯವಿರುವ ನೀರಿನ ಕೇವಲ ಶೇ.50ರಷ್ಟು ಮಾತ್ರ ಲಭ್ಯವಾಗಲಿದೆ.

ಪ್ರಮುಖ ನದಿಗಳಾದ ಗಂಗಾ, ಕೃಷ್ಣಾ, ನರ್ಮದಾ, ಕಾವೇರಿ ಬೇಗನೆ ಬತ್ತಿ ಹೋಗುತ್ತಿವೆ. ಈಗಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ಪೀಳಿಗೆ ಕಷ್ಟ ಅನುಭವಿಸಬೇಕಾಗುತ್ತದೆ. ಹಾಗಾಗಿ ನದಿಗಳನ್ನು ರಕ್ಷಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ದೇಶವ್ಯಾಪಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.  

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.