ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಲೆಕ್ಕಪತ್ರಗಳ ಸಮಿತಿ ಭೇಟಿ


Team Udayavani, Sep 9, 2017, 11:28 AM IST

tippagondanalli-lake.jpg

ಬೆಂಗಳೂರು/ಮಾಗಡಿ: ನಗರಕ್ಕೆ ನೀರು ಪೂರೈಸುವ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕಾರ್ಖಾನೆಗಳಿಂದ ಹರಿದುಬರುತ್ತಿರುವ ಮಲಿನ ನೀರು ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮರಳು ಮತ್ತು ಕಲ್ಲು ಗಣಿಗಾರಿಕೆ ಕುರಿತಂತೆ ವಿಧಾನಮಂಡಲದ ಲೆಕ್ಕಪತ್ರಗಳ ಸಮಿತಿ ಶುಕ್ರವಾರ ಪರಿಶೀಲನೆ ನಡೆಸಿದೆ.

ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ನೇತೃತ್ವದ ತಂಡ, ತಿಪ್ಪಗೊಂಡನಹಳ್ಳಿ ಜಲಾನಯನ ಪ್ರದೇಶದಲ್ಲಿ ಮರಳು ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿಗಳನ್ನು ಕಲೆಹಾಕಿತಲ್ಲದೆ, ಜಲಾನಯನ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಮಾಲಿನ್ಯದ ಬಗ್ಗೆಯೂ ಪರಿಶೀಲಿಸಿತು.

ಬಯಲುಸೀಮೆ ಜಿಲ್ಲೆಗಳಿಗೆ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯಿಂದ 2019ರ ವೇಳೆ  ತಿಪ್ಪಗೊಂಡನಹಳ್ಳಿ ಪ್ರದೇಶಕ್ಕೆ ನೀರು ಬರುವ ಸಾಧ್ಯತೆ ಇದ್ದು, ಅದಕ್ಕೆ ಮುನ್ನ ಜಲಾಶಯವನ್ನು ಸಂಪೂರ್ಣ ಶುದ್ಧೀಕರಿಸಬೇಕು ಎಂಬುದನ್ನು ಮನಗಂಡ ಸಮಿತಿ, ಈ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದೆ.

ಪ್ರಸ್ತುತ ಜಲಾಶಯದಲ್ಲಿ ಕೇವಲ 2 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಇತ್ತೀಚೆಗೆ ಬೆಂಗಳೂರು ಸುತ್ತಮುತ್ತ ಹೆಚ್ಚು ಮಳೆಯಾಗುತ್ತಿದ್ದರೂ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ಹೆಚ್ಚುವರಿ ನೀರು ಸಂಗ್ರಹ ಅಸಾಧ್ಯ ಎನ್ನುವಂತಾಗಿದೆ.

ಅಲ್ಲದೆ, ಪ್ರಸ್ತುತ ಸಂಗ್ರಹವಾಗಿರುವ 2 ಟಿಎಂಸಿ ನೀರನ್ನು ಜನರಿಗೆ ಪೂರೈಕೆ ಮಾಡುವುದಿದ್ದರೂ ಅದಕ್ಕೆ ಮುನ್ನ ಶುದ್ಧೀಕರಣ ಮಾಡಬೇಕಾಗುತ್ತದೆ ಎಂಬ ವಿಚಾರವನ್ನು ಆಲಿಸಿದ ಸಮಿತಿ, ತನ್ನ ಶಿಫಾರಲಿಸನಲ್ಲಿ ಈ ಕುರಿತ ಅಂಶವನ್ನು ಸೇರಿಸುವ ಬಗ್ಗೆಯೂ ಚಿಂತನೆ ನಡೆಸಿದೆ. ಈ ವೇಳೆ ಸಮಿತಿ ಸದಸ್ಯರಾದ ವಿನಯಕುಮಾರ್‌ ಸೊರಕೆ, ವಿಶ್ವೇಶ್ವರಯ್ಯ ಕಾಗೇರಿ, ಬಿ.ಜೆ.ಪುಟ್ಟಸ್ವಾಮಿ, ವಿ.ಸೋಮಣ್ಣ, ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.