ಬರ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಿ: ಲಕ್ಷ್ಮೀನಾರಾಯಣ್‌ 


Team Udayavani, Sep 9, 2017, 12:02 PM IST

mys5.jpg

ಮೈಸೂರು: ಜಿಲ್ಲೆಯಲ್ಲಿ ಎದುರಾಗಿರುವ ಬರಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಜತೆಗೆ ಮಳೆಯಿಂದಾಗಿ ಸಂಭವಿಸುತ್ತಿರುವ ಕೆರೆಗಳ ಸೋರಿಕೆ ತಡೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಲಕ್ಷ್ಮೀನಾರಾಯಣ್‌ ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬರ ಮತ್ತು ದಸರಾ ಸಂಬಂಧ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಮುಂಗಾರು ವೈಫ‌ಲ್ಯದಿಂದಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ.

ಹೀಗಾಗಿ ಭತ್ತ, ಕಬ್ಬು ಇನ್ನಿತರ ಬೆಳೆಗಳ ಬದಲು ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೇರೇಪಿಸಲು ಕೃಷಿ ಇಲಾಖೆ ಕ್ರಮವಹಿಸಬೇಕಿದೆ. ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವುದರ ಪರಿಣಾಮ ಜಿಲ್ಲೆಯ ಕೆಲವು ಕಡೆಗಳಲ್ಲಿ ಕೆರೆಗಳ ಕಟ್ಟೆ ಒಡೆದು ನೀರು ಪೋಲಾಗುತ್ತಿದೆ. ಹೀಗಾಗಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು.

ಹಣಬಿಡುಗಡೆ ಮಾಡಿಸಿ: ಜಂಟಿ ಕೃಷಿ ನಿರ್ದೇಶಕ ಸೋಮಸುಂದ್ರು ಮಾತನಾಡಿ, 2016ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 12,149 ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಇದುವರೆಗೆ 2,675 ರೈತರಿಗೆ 316.33 ಲಕ್ಷ ರೂ.ಬೆಳೆ ವಿಮೆ ದೊರೆತಿದೆ. ಆದರೆ, ಇನ್ನೂ 9474 ರೈತರಿಗೆ 558.10 ಲಕ್ಷ ರೂ. ಪರಿಹಾರ ದೊರೆಯಬೇಕಿದೆ.

ಇದರಿಂದಾಗಿ ಅನೇಕ ರೈತರು ಬೆಳೆ ವಿಮೆ ಮಾಡಿಸಲು ಹಿಂದೇಟು ಹಾಕುತ್ತಿದ್ದು, ಪರಿಣಾಮ ಈ ಬಾರಿ 3376 ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದಾರೆ. ಹೀಗಾಗಿ ಬಾಕಿಯಿರುವ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್‌ ಮತ್ತಿತರರಿದ್ದರು.

ರೈತರಿಗೆ ಮುಂಗಾರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ 45,83,64,886 ರೂ., ಹಿಂಗಾರು ಬೆಳೆ ಹಾನಿಗೆ 5,40,71,579 ರೂ. ಇನ್‌ಪುಟ್‌ ಸಬ್ಸಿಡಿಯನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ.
-ಡಿ.ರಂದೀಪ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.