ಶೌಚಾಲಯ ತೆರವು ಖಂಡಿಸಿ ಪ್ರತಿಭಟನೆ
Team Udayavani, Sep 9, 2017, 12:27 PM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕಲ್ಮೇಶ್ವರ ನಗರ ಹಾಗೂ ಕುರುಬರ ಓಣಿಯಲ್ಲಿ ಸಾರ್ವಜನಿಕ ಶೌಚಾಲಯ ತೆರವುಗೊಳಿಸಿದ ಪಾಲಿಕೆ ಕ್ರಮ ಖಂಡಿಸಿ ಸ್ಥಳೀಯರು ವಲಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಯಾವುದೇ ಮುನ್ಸೂಚನೆ ನೀಡದೇ 60 ಹಾಗೂ 64ನೇ ವಾರ್ಡ್ ವ್ಯಾಪ್ತಿಯ ಕಲ್ಮೇಶ್ವರ ನಗರ ಹಾಗೂ ಕುರುಬರ ಓಣಿ ಜನರ ಬಳಕೆಗೆ ನಿರ್ಮಿಸಿದ್ದ ಸಾರ್ವಜನಿಕ ಶೌಚಾಲಯವನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಇದರಿಂದ ಈ ಭಾಗದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಕೂಡಲೇ ಮರು ನಿರ್ಮಾಣ ಮಾಡಿಕೊಡಬೇಕು. ನಿರ್ಮಾಣ ಆಗುವವರೆಗೂ ಮೊಬೈಲ್ ಶೌಚಾಲಯದ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿ, ನಗರದಲ್ಲಿ ಸಾಕಷ್ಟು ಸರಕಾರಿ ಜಾಗ ಒತ್ತುವರಿಯಾಗಿದೆ.
ಅತಿಕ್ರಮಣ ತೆರವಿಗೆ ನ್ಯಾಯಾಲಯ ಆದೇಶ ನೀಡಿದ್ದರೂ ಪಾಲಿಕೆ ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ. ಅತಿಕ್ರಮಣದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈ ಭಾಗದ ಜನರ ಬಳಕೆಗೆ ನಿರ್ಮಿಸಿದ್ದ ಸಾರ್ವಜನಿಕ ಶೌಚಾಲಯವನ್ನು ಬೆಳಗಿನ ಜಾವ ಏಕಾಏಕಿ ತೆರವುಗೊಳಿಸಿದ್ದು ಸರಿಯಲ್ಲ.
ಸ್ಥಳೀಯರಿಗೆ ಯಾವುದೇ ತೊಂದರೆಯಾಗದಂತೆ ಕೂಡಲೇ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೂ ಮುನ್ನ ತೆರವುಗೊಳಿಸಿದ ಶೌಚಾಲಯದ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ತೆರವು ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು.
ಸ್ಥಳಕ್ಕೆ ಬಿಜೆಪಿ ನಾಯಕರು ಆಗಮಿಸಿದ ನಂತರ ಪ್ರತಿಭಟನೆ 11 ನೇ ವಲಯ ಕಚೇರಿಗೆ ಸ್ಥಳಾಂತರಗೊಂಡಿತು. ರಂಗಾ ಬದ್ದಿ, ಸಂತೋಷ ಅರಕೇರಿ, ಹನುಮಂತಪ್ಪ ದೊಡ್ಡಮನಿ, ಗೋಪಾಲ ಬದ್ದಿ, ಸುರೇಶ ಮಟ್ಟೆಣ್ಣನವರ, ಮಂಜು ಮುನವಳ್ಳಿ, ಶಿವು ಕೊತಬಾಳ, ಶಿವು ಕಡ್ಡಿ, ರಾಜು ಗೌಳಿ, ಮೈಲಾರಿ ಕೋಪನೂರ, ಗುರು ಕುರಿಯವರ, ಸಿದ್ದಪ್ಪ ಮಿಶಾಳ, ನವೀನ ಮುನವಳ್ಳಿ, ರವಿ ರಾಯಪ್ಪನವರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.