2ನೇ ತರಗತಿ ವಿದ್ಯಾರ್ಥಿಯ ಕತ್ತು ಸೀಳಿ ಭೀಕರ ಹತ್ಯೆ
Team Udayavani, Sep 9, 2017, 12:45 PM IST
ಗುರುಗ್ರಾಮ: ಇಡೀ ದೇಶವೇ ಬೆಚ್ಚಿ ಬೀಳಿಸುವಂಥ ಘಟನೆಯೊಂದು ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಕತ್ತುಸೀಳಿರುವ ಸ್ಥಿತಿಯಲ್ಲಿ 2ನೇ ತರಗತಿಯ ವಿದ್ಯಾರ್ಥಿಯ ಮೃತದೇಹವು ಶಾಲೆಯ ಟಾಯ್ಲೆಟ್‌ನಲ್ಲಿ ಪತ್ತೆಯಾಗಿದೆ. Ryan ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆ ಖಂಡಿಸಿ ವಿದ್ಯಾರ್ಥಿಗಳ ಪೋಷಕರು, ಸ್ಥಳೀಯರು ತೀವ್ರ ಪ್ರತಿಭಟನೆ ಆರಂಭಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 8.30ರ ವೇಳೆಗೆ 7 ವರ್ಷದ ಪ್ರಧುಮನ್ ಠಾಕೂರ್ ಮೃತದೇಹವು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ವಿದ್ಯಾರ್ಥಿಗಳೇ ಶಾಲೆಯ ಇತರರಿಗೆ ಮಾಹಿತಿ ನೀಡಿದ್ದಾರೆ. ಜತೆಗೆ, ಪ್ರಧುಮನ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕೃತ್ಯದ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಶಾಲೆಯ ಬಸ್ ಕಂಡಕ್ಟರ್‌ನನ್ನು ಬಂಧಿಸಲಾಗಿದ್ದು, 40ರ ಹರೆಯದ ಬಸ್ ನಿರ್ವಾಹಕನೇ ಮಗುವಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಅಪ್ಪ ವರುಣ್ ಹೇಳೋದೇನು?
ನಾನು ಬೆಳಗ್ಗೆ 7.30ಕ್ಕೆ ಮಗನನ್ನು ಶಾಲೆಗೆ ಬಿಟ್ಟಿದ್ದೆ. ಅವನು ಎಂದಿನಂತೆ ಖುಷಿಯಾಗಿಯೇ ಒಳಗೆ ಹೋಗಿದ್ದ. ಇದಾದ ಸ್ವಲ್ಪ ಹೊತ್ತಲ್ಲೇ ಘಟನೆ ನಡೆದಿದೆ. ಆದರೆ, ಶಾಲೆಯವರು ನನಗೆ ವಿಳಂಬವಾಗಿ ಮಾಹಿತಿ ನೀಡಿದರು. ಆತನ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಕರೆಸಿಕೊಂಡರು. ನನ್ನ ಮಗುವಿನ ಸಾವಿನಲ್ಲಿ ಶಾಲೆಯ ನಿರ್ಲಕ್ಷ್ಯವೂ ಅಡಗಿದೆ. ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರದ್ಯುಮ್ನನ ತಂದೆ ವರುಣ್ ಠಾಕೂರ್ ಆಗ್ರಹಿಸಿದ್ದಾರೆ.
ಪೋಷಕರ ಪ್ರತಿಭಟನೆ, ಆಕ್ರೋಶ
ಇದೇ ವೇಳೆ, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೂ ಬಾಲಕನ ಮೃತದೇಹವನ್ನು ಪಡೆಯಲು ಹೆತ್ತವರು ನಿರಾಕರಿಸಿದ್ದು, ನಮ್ಮ ಮಗುವಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿದ್ದಾರೆ. ಇವರೊಂದಿಗೆ, ರ್ಯಾನ್ ಇಂಟರ್‌ನ್ಯಾಷನಲ್ ಶಾಲೆಯ ಇತರೆ ಮಕ್ಕಳ ಹೆತ್ತವರು ಹಾಗೂ ಪೋಷಕರೂ ಪ್ರತಿಭಟನೆ ಆರಂಭಿಸಿದ್ದಾರೆ. ಪೊಲೀಸ್ ಪ್ರಧಾನ ಕಚೇರಿ ಮುಂದೆ ಜಮಾಯಿಸಿದ್ದ ಜನರು, ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ, ಶಾಲೆಯ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು, ಶಾಲೆಯ ಕಿಟಕಿ ಗಾಜುಗಳನ್ನು ಒಡೆದು, ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದರು. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ, ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.