“ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್’
Team Udayavani, Sep 10, 2017, 7:55 AM IST
ಉಡುಪಿ: ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುವುದನ್ನು ತಪ್ಪಿಸಲು ಪ್ರತ್ಯೇಕ ವೆಂಡರ್ ಝೋನ್‌ಗಳನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ತಿಳಿಸಿದರು.
ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ನಗರಾಭಿವೃವೃದ್ಧಿ ಸಂಸ್ಥೆ ಮೈಸೂರು, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯಗಳ ಅಭಿಯಾನ ಕಾರ್ಯಕ್ರಮದಡಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಅಧಿನಿಯಮ -2014 ರ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮೂಲ ಸೌಕರ್ಯ
ಉಡುಪಿ ನಗರದಲ್ಲಿ 289 ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗಿದೆ. ಇವರಿಗೆ ಮಣಿಪಾಲ, ಕಲ್ಸಂಕ, ಅಜ್ಜರಕಾಡು ಅಂಬಾಗಿಲುವಿನಲ್ಲಿ ವೆಂಡರ್ ಝೊàನ್ ಗುರುತಿಸಲಾಗಿದೆ. ಈ ವ್ಯಾಪಾರಿಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಸ್ಥಳೀಯ ಸಂಸ್ಥೆಗಳು ಒದಗಿಸಲಿವೆ ಎಂದರು.
ಸಾಲಕ್ಕೆ ಕ್ರಮ ಕೈಗೊಳ್ಳಿ
ಬೀದಿ ಬದಿ ವ್ಯಾಪಾರಿಗಳಿಗೆ ಅಭದ್ರತೆ ಇದೆ. ಇವರಿಗೆ ಅಗತ್ಯವಿರುವ ಕೌಶಲಾಭಿವೃದ್ಧಿ ನೀಡುವ ಹಾಗೂ ಸಣ್ಣ ಪ್ರಮಾಣದಲ್ಲಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ವ್ಯಾಪಾರ ನಡೆಸುವಂತಾಗಬೇಕು ಎಂದರು.
ನಗರಸಭೆಯ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಸಾರಂಗ್, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯಾ, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ರತ್ನಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಾ ಪ್ರಭ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಫ್ರಾನ್ಸಿಸ್ ಬೋರ್ಗಿಯಾ, ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್, ಜಿ. ವಿಶ್ವನಾಥ್ ಉಪಸ್ಥಿತರಿದ್ದರು.
ಉಡುಪಿ ನಗರಸಭೆ ಪೌರಾಯುಕ್ತ ಮಂಜುನಾಥಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಸ್ವಾಗತಿಸಿ, ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.