ಆರ್ಯ ಮರಾಠ ಸಮಾಜ ಸಂಘ: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ

Team Udayavani, Sep 11, 2017, 7:40 AM IST

10ksde2.jpg

ಕಾಸರಗೋಡು: ಆರ್ಯ ಮರಾಠ ಸಮಾಜ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ ಹಾಗು ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ಮಂಗಳೂರು ಜಪ್ಪಿನಮೊಗರಿನಲ್ಲಿರುವ ಆರ್ಯ ಮರಾಠ ಭವನದಲ್ಲಿ ಜರಗಿತು.

ಮುಖ್ಯ ಅತಿಥಿಗಳಾದ ವಿಧಾನಸಭಾ ಕ್ಷೇತ್ರದ ಶಾಸಕ ಹಾಗು ಕರ್ನಾಟಕ ವಿಧಾನಮಂಡಲ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ.ಆರ್‌.ಲೋಬೊ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಆರ್ಯ ಮರಾಠ ಸಮುದಾಯದ ಸಮಾಜಮುಖೀ ಕಾರ್ಯಕ್ರಮಗಳನ್ನು ಶ್ಲಾಘಿಸುತ್ತಾ ತಮ್ಮ ಸಂಸ್ಕೃತಿ ಪರಂಪರೆಯನ್ನು ಕಾಯ್ದುಕೊಂಡು ಇನ್ನೂ ಅನೇಕ ರೀತಿಯ ಉತ್ತಮ ಕಾರ್ಯಕ್ರಮಗಳನ್ನು ನೆರವೇರಿಸಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವಂತೆ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಶಾಲು ಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ಹಾಗು ಪ್ರಶಸ್ತಿ ಪತ್ರ ನೀಡಿ ಸಮ್ಮಾನಿಸಿದರು.

ಸಮಾರಂಭಕ್ಕೆ ಆಗಮಿಸಿದ ಇನ್ನೋರ್ವ ಮುಖ್ಯ ಅತಿಥಿ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರು ಕರ್ನಾಟಕ ಹಾಗು ವಿಧಾನ ಪರಿಷತ್ತು ಶಾಸಕ ಕ್ಯಾ|ಗಣೇಶ್‌ ಕಾರ್ಣಿಕ್‌ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸ್ಮರಣಿಕೆಗಳನ್ನು ನೀಡಿ ಆರ್ಯ ಮರಾಠ ಸಮುದಾಯಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹಿನ್ನೆಲೆ ಇದೆ. ಅವರ ಆದರ್ಶ ಸಂಸ್ಕೃತಿ ಪರಂಪರೆ ಆಚಾರ ವಿಚಾರಗಳು ಸಮುದಾಯದ ಯುವ ಪೀಳಿಗೆಗೆ ಮಾರ್ಗದರ್ಶನವಾಗಲಿ ಎಂದು ದೇಶ ಕಾಯುವಂತ ಕೆಲಸಕ್ಕೂ ಯುವ ಪೀಳಿಗೆ ಮುಂದಾಗಲಿ ಎಂದು ಶುಭಹಾರೈಸಿದರು.

ಇನ್ನೋರ್ವ ಅತಿಥಿ ಕಾರ್ಪೊರೇ ಟರ್‌ ಸುರೇಂದ್ರ ಅವರು ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಶುಭಹಾರೈಸಿದರು. ಮತ್ತೋರ್ವ ಅತಿಥಿ ಕೆ.ಕೆ. ಎಂ.ಪಿ. ಉಪಾಧ್ಯಕ್ಷ ಕೆ.ಸುರೇಶ್‌ ರಾವ್‌ ಲಾಡ್‌ ಬಡ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ನೀಡಿದರು. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಸಂಘದ ಸಹಾಯವನ್ನು ಮರೆಯದೆ ಸಂಘಕ್ಕೆ ನೀಡಲು ಮರೆಯದಿರಿ ಎಂದು ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಂ.ದೇವೋಜಿ ರಾವ್‌ ಜಾದವ್‌ ವಹಿಸಿದ್ದರು. ವೇದಿಕೆಯಲ್ಲಿ ನ್ಯಾಯವಾದಿ ಎಲ್ಲೋಜಿ ರಾವ್‌ ಮೆಮೋರಿಯಲ್‌ ಟ್ರಸ್ಟ್‌ನ ಅಧ್ಯಕ್ಷೆ ಪ್ರೇಮಲತಾ ವೈ.ರಾವ್‌, ಬಾಲಕೃಷ್ಣ ರಾವ್‌ ಲಾಡ್‌, ನಿವೃತ್ತ ಅಧ್ಯಾಪಕಿ ಬಿ.ವಾರಿಜಾ ಬಾಯಿ, ಟಿ.ಸಂಜೀವ ರಾವ್‌ ಸಿಂಧ್ಯಾ ಮರೈನ್‌, ರಾಜಾನಂದ ಚಂದ್ರಮಾನ್‌, ಕಾರ್ಯದರ್ಶಿ ಗಿರೀಶ್‌ ರಾವ್‌ ಬೋಂಸ್ಲೆ, ಉಪಾಧ್ಯಕ್ಷರುಗಳಾದ ನಾಗೇಶ್ವರ ರಾವ್‌ ಪವಾರ್‌, ಬಿ.ಜೆ.ಚಂದ್ರಶೇಖರ ಪಾಟೀಲ್‌, ಕೋಶಾಧಿಕಾರಿ ಕೆ.ಶ್ರೀಧರ ರಾವ್‌ ಬಹುಮಾನ್‌, ಜತೆ ಕಾರ್ಯದರ್ಶಿಗಳಾದ ತ್ರಿವೇಣಿ ಜಾದವ್‌, ಶ್ರೀಧರ ರಾವ್‌ ಪಾಟೀಲ್‌. ಮಹಿಳಾ ಘಟಕದ ಸಂಚಾಲಕಿ ಆಶಾ ಸಪ್ಟೆàಕರ್‌, ಯುವ ವೇದಿಕೆ ಸಂಚಾಲಕ ಲೋಕೇಶ್‌  ಉಪಸ್ಥಿತರಿದ್ದರು.

ಕಾರ್ಯದರ್ಶಿ ಗಿರೀಶ್‌ ಬೋಂಸ್ಲೆ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಶ್ರೀಧರ ರಾವ್‌ ಪಾಟೀಲ್‌ ವಂದಿಸಿದರು. ದಿವ್ಯಾ ಮಧುಸೂದನ್‌ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.