ಪೇಪರ್‌ನಲ್ಲಿ  ಆಹಾರ ಪದಾರ್ಥ ಕಟ್ಟಿದರೆ ದಂಡ

Team Udayavani, Sep 11, 2017, 8:20 AM IST

paper.jpg

ಮಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ ಪೇಪರ್‌ನಲ್ಲಿ ತಿನ್ನುವ ಆಹಾರ ಪದಾರ್ಥಗಳನ್ನು ಕಟ್ಟಿಕೊಡುವುದನ್ನು ಈಗಾಗಲೇ ನಿಷೇಧಿಸಿದ್ದು, ಈಗ ಈ ನಿಯಮವನ್ನು ಕಟ್ಟು-ನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಸಾಮಾನ್ಯವಾಗಿ ಪೇಪರ್‌ನಲ್ಲಿ ಮುದ್ರಿಸುವಾಗ ಇಂಕ್‌ ಅಥವಾ ಮಸಿಗೆ ರಾಸಾಯನಿಕವನ್ನು ಬಳಸಲಾಗುತ್ತದೆ. ಮುದ್ರಿತ ಪತ್ರಿಕೆಗಳಲ್ಲಿ ಆಹಾರ ಪದಾರ್ಥ ಕಟ್ಟಿಕೊಟ್ಟಾಗ, ರಾಸಾಯನಿಕಯುಕ್ತ ಮಸಿಯು ವಿಷಕಾರಿಯಾಗಿ ಆರೋಗ್ಯಕ್ಕೆ ಹಾನಿ
ಕಾರಕವಾಗಿ ಬಿಡುತ್ತದೆ. ಅದರಂತೆ “ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006’ರ ಪ್ರಕಾರ ಜನರಿಗೆ ಆಹಾರ ಪದಾರ್ಥಗಳನ್ನು ದಿನಪತ್ರಿಕೆ/ವಾರ್ತಾ ಪತ್ರಿಕೆಯಲ್ಲಿ ಕಟ್ಟಿಕೊಡುವುದನ್ನು ನಿಷೇಧಿಸಿ ಮೂರು ತಿಂಗಳ ಹಿಂದೆಯಷ್ಟೇ ಕಟ್ಟುನಿಟ್ಟಿನ ಕ್ರಮ ಜಾರಿ ಗೊಳಿಸಲಾಗಿದೆ. 

ಆದರೆ ಈ ರೀತಿಯ ನಿಯಮ ಜಾರಿಗೆ ಬಂದು ಮೂರು ತಿಂಗಳು ಕಳೆದಿದ್ದರೂ  ಆ ಬಗ್ಗೆ ಅಂಗಡಿ ಮಾಲಕರಿಗೆ ಅಥವಾ ಜನಸಾಮಾನ್ಯರಿಗೆ ಸರಿಯಾದ ಅರಿವು ಇಲ್ಲ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಆಹಾರ ಪದಾರ್ಥಗಳನ್ನು ಕಟ್ಟಿ ಕೊಡುವುದಕ್ಕೆ ಹಳೇ ರದ್ದಿ ಪತ್ರಿಕೆಗಳನ್ನೇ ಬಳಸ ಲಾಗುತ್ತಿದೆ. ಇದರಿಂದ ಆರೋಗ್ಯದ ಮೇಲಾಗುವ ದುಷ್ಪರಿ ಣಾಮಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.

ಅಂಗಡಿ, ಮಾಲ್‌ಗ‌ಳಿಗೆ ಎಚ್ಚರಿಕೆ
ರಾಜ್ಯದಲ್ಲಿಯೂ ಪೇಪರ್‌ನಲ್ಲಿ ಆಹಾರ ಪದಾರ್ಥ ಕಟ್ಟಿಕೊಡುವ ನಿಯಮ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಕಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಧಿಕಾರಿ ಗಳು ಹಾಗೂ ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಆಯಾ ಅಂಗಡಿ, ಮಾಲ್‌, ಆಹಾರ ತಯಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದಾರೆ. ಜತೆಗೆ ಇಲಾಖೆ ಜಾರಿಗೊಳಿಸಿರುವ ಮಾರ್ಗಸೂಚಿ ಅಳವಡಿಸುವಂತೆ ಸೂಚನೆಗಳನ್ನು ನೀಡುತ್ತಿದ್ದಾರೆೆ. ಸೂಚನೆ ಬಳಿಕವೂ ಆಹಾರ ಪದಾರ್ಥ ಕಟ್ಟಿ ಕೊಡಲು ಪೇಪರ್‌ ಬಳಕೆ ಮುಂದುವರಿದಲ್ಲಿ ಅಂಥವರ ವಿರುದ್ಧ ಕಾಯ್ದೆಯ ಪ್ರಕಾರ ದಂಡ ಸೇರಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.

ಕಾಯ್ದೆ ಜಾರಿಗೆ ಇತರ ಇಲಾಖೆಗಳ ಬಳಕೆ
ರಾಜ್ಯದಲ್ಲಿ ಆಹಾರ ಸುರಕ್ಷತೆ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಿಬಂದಿ ಕೊರತೆ ಇರುವುದರಿಂದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳನ್ನು (ನೋಂದಣಿ ಹೊರತು ಪಡಿಸಿ) ಆಹಾರ ಸುರಕ್ಷತೆ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಲು ರಾಜ್ಯ ಸರಕಾರ ಈಗಾಗಲೇ ಅಧಿಸೂಚಿಸಿದೆ. ಇದರಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಬಕಾರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಕೈಗಾರಿಕಾಭಿವೃದ್ದಿ ಮತ್ತು ಕೈಗಾರಿಕೆಗಳು ಹಾಗೂ ವಾಣಿಜ್ಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ನಿರ್ದೇಶನಾಲಯ, ಔಷಧ ನಿಯಂತ್ರಣ ಇಲಾಖೆಯ ಅರ್ಹ ಸಿಬಂದಿಯನ್ನು ಇದಕ್ಕಾಗಿ ನಿರ್ವಹಿಸಲು ಸೂಚಿಸಲಾಗಿದೆ.

ಆಹಾರ ಪದಾರ್ಥ ಕಲಬೆರಕೆ; ಮಾದರಿ ಪರೀಕ್ಷೆ
ಇನ್ನು ಕಡಿಮೆ ಬೆಲೆಯ ಅಥವಾ ಕೀಳು ದರ್ಜೆಯ ಆಹಾರ ಪದಾರ್ಥಗಳನ್ನು ಬೆರೆಸುವುದು, ತಿನ್ನಲು ಯೋಗ್ಯವಲ್ಲದ ಹಾಗೂ ಹಾನಿಕಾರಕ ಪದಾರ್ಥ ಬೆರೆಸುವುದು, ನಕಲಿ ಪದಾರ್ಥಗಳನ್ನು ಬೆರೆಸುವುದು ಕೂಡ ಕಾಯ್ದೆ ಪ್ರಕಾರ ಅಪರಾಧ. ಹೀಗಾಗಿ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಜನಸಾಮಾನ್ಯರು ತಾವು ಬಳಸುವ ಆಹಾರ ಪದಾರ್ಥಗಳ ಮಾದರಿಯನ್ನು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆಯಡಿ ಅಂಕಿತ ಅಧಿಕಾರಿಗಳು ಪಡೆದುಕೊಂಡು ಪರೀಕ್ಷೆ ನಡೆಸುತ್ತಾರೆ. ಬೆಣ್ಣೆ, ತುಪ್ಪ, ಹಾಲು, ಖಾದ್ಯ ತೈಲಗಳು, ಸಿಹಿತಿಂಡಿ, ಐಸ್‌ಕ್ರೀಂ, ಸಕ್ಕರೆ, ಮೆಣಸಿನ ಪುಡಿ, ಜೇನು ತುಪ್ಪ, ತಂಪು ಪಾನೀಯ ಸೇರಿದಂತೆ ಹಲವು ಬಗೆಯ ಆಹಾರ ಪದಾರ್ಥಗಳನ್ನು  ಪರಿಶೀಲನೆಗೆ ಒಳಪಡಿಸಲಾಗುತ್ತ¤ದೆ. 

ಆಹಾರ ಗುಣಮಟ್ಟ ಪರಿಶೀಲನೆಗೆ ಅಧಿಕಾರಿಗಳ ತಂಡ
ದಿನಪತ್ರಿಕೆಯಲ್ಲಿ ಆಹಾರ ಪದಾರ್ಥ ಕಟ್ಟಿಕೊಡುವುದನ್ನು ಈಗಾಗಲೇ ನಿಷೇಧಿಸ ಲಾಗಿದೆ. ಜತೆಗೆ ಆಹಾರ ತಯಾರಿಕೆ, ದಾಸ್ತಾನು, ಪ್ಯಾಕಿಂಗ್‌, ಸಾಗಾಣಿಕೆ ಹಂಚಿಕೆ, ಮಾರಾಟ ಮತ್ತು ಆಮದು ಮಾಡುವ ಸ್ಥಳ ಗಳಿಗೆ ಆಹಾರ ಸುರಕ್ಷತೆಗೆ ಸಂಬಂಧಿಸಿದ ಅಧಿಕಾರಿ ಪರಿವೀಕ್ಷಣೆ ನಡೆಸಿ ಆಹಾರ ಗುಣಮಟ್ಟ ಪರೀಕ್ಷೆಗೆ ಆಹಾರ ಮಾದರಿಯನ್ನು ಪಡೆದು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸದ್ಯಕ್ಕೆ ಈ ಬಗ್ಗೆ ಅಂಗಡಿ ಮಾಲಕರು ಹಾಗೂ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡ  ಲಾಗು ತ್ತದೆ. ಬಳಿಕ ಅಸುರಕ್ಷಿತ ಆಹಾರ ಪತ್ತೆಯಾದರೆ ಕನಿಷ್ಠ 25,000 ರೂ.ಗಳಿಂದ 10 ಲಕ್ಷ ರೂ. ವರೆಗೆ ದಂಡ ಹಾಗೂ ಕನಿಷ್ಠ 6 ತಿಂಗಳಿನಿಂದ ಜೀವಾವಧಿವರೆಗೆ ಶಿಕ್ಷೆ ವಿಧಿಸಬಹುದು.    – ಡಾ| ರಾಜೇಶ್‌ ಬಿ.ವಿ.
– ಅಂಕಿತ ಅಧಿಕಾರಿಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾರ್ಯಾಲಯ, ದ.ಕ.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.