ದೇಯಿ ಬೈದ್ಯೆತಿಗೆ ಅವಮಾನ: ಸೆರೆ

Team Udayavani, Sep 11, 2017, 8:25 AM IST

sere.jpg

ಪುತ್ತೂರು: ಪಡುಮಲೆಯ ಮುಡಿಪಿನಡ್ಕದಲ್ಲಿರುವ ಕರಾವಳಿಯ ಶಕ್ತಿ ದೇವತೆ ದೇಯಿ ಬೈದ್ಯೆತಿ ಮೂರ್ತಿಯ ಜತೆ ಅಶ್ಲೀಲವಾಗಿ ಫೂಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈಶ್ವರಮಂಗಲ ನಿವಾಸಿ ಸ್ಥಳೀಯ ರಿಕ್ಷಾ ಚಾಲಕ ಹನೀಫ್‌ ಬಂಧಿತ ಆರೋಪಿ. ಕೋಟಿ-ಚೆನ್ನಯರ ಹುಟ್ಟೂರು ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಸಿಗು ತ್ತಿದ್ದಂತೆ, ಅರಣ್ಯ ಇಲಾಖೆಯೂ ಯೋಜನೆಯೊಂದನ್ನು ರೂಪಿಸಿತು. ರಮಾನಾಥ ರೈ ಮುತುವರ್ಜಿಯಲ್ಲಿ ಇಲಾಖೆಯ ಜಾಗದಲ್ಲೇ ಔಷಧವನವೊಂದನ್ನು ನಿರ್ಮಿಸಿ, ಅದಕ್ಕೆ ನಾಟಿ ವೈದ್ಯೆ, ಕೋಟಿ-ಚೆನ್ನಯರ ತಾಯಿ ದೇಯಿ ಬೈದ್ಯೆತಿಯ ಹೆಸರಿಡಲಾಯಿತು. ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ನಿರ್ಮಿಸಿದ ಕಲಾಕೃತಿಗಳು ಇದೀಗ ದುರ್ಬಳಕೆಯಾಗುತ್ತಿದ್ದು, ಸಮಾಜದ ಕೆಂಗಣ್ಣಿಗೆ ಗುರಿಯಾಗಿದೆ.

ಹನೀಫ್ನ ಕೃತ್ಯದ ಬಗ್ಗೆ  ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಾರ್ಯದರ್ಶಿ ಕೇಶವ ಪೂಜಾರಿ ಬೆದ್ರಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಸಂಘದ ಕೋಶಾಧಿಕಾರಿ ನಾಗೇಶ್‌ ಬಲಾ°ಡ್‌, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯ ನಿರ್ವಹಣಾ ಅ ಧಿಕಾರಿ ಆರ್‌.ಸಿ. ನಾರಾಯಣ್‌ ರೆಂಜ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಶಶಿಧರ ಕಿನ್ನಿಮಜಲು, ಯುವವಾಹಿನಿ ಪುತ್ತೂರು ಘಟಕದ ನಿಕಟಪೂರ್ವ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು ಮೊದಲಾದವರ ನಿಯೋಗ ಗ್ರಾಮಾಂತರ ಠಾಣಾಧಿಕಾರಿಯನ್ನು ಭೇಟಿಯಾಗಿ, ಆರೋಪಿಯ ಬಂಧಿಸಿ ಕಠಿನ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದ್ದರು. 

ಗ್ರಾಮಾಂತರ ಪೊಲೀಸರು, ಆರೋಪಿಯನ್ನು ರವಿವಾರವೇ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 295 (ಎ) ಕಲಂ ಮತ್ತು ಐಟಿ ಕಾಯಿದೆ- 2000 ಇದರ 67 ಐಟಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಔಷಧ ವನ
6 ಎಕರೆ ಜಾಗದಲ್ಲಿ ದೇಯಿ ಬೈದ್ಯೆತಿ ಔಷಧವನವನ್ನು ಮುಡಿಪಿನಡ್ಕದಲ್ಲಿ ನಿರ್ಮಿಸಿ ಕಳೆದ ವರ್ಷ ಇದು ಉದ್ಘಾಟಿಸಲಾಗಿತ್ತು. ಇದರ ನಡುವೆ ಪ್ರಾಚೀನ ತುಳುನಾಡಿನ ಶೈಲಿಯನ್ನು ಹೋಲುವ ಪುಟ್ಟ ಕುಟೀರವನ್ನು ನಿರ್ಮಿಸಲಾಗಿದೆ. ಕುಟೀರದ ಮುಂಭಾಗ ದೇಯಿ ಬೈದ್ಯೆತಿ ಔಷಧ ಅರೆಯುವ ರೀತಿಯ ಮೂರ್ತಿಯನ್ನು ನಿರ್ಮಿಸಲಾಗಿದೆ. ಬದಿಯಲ್ಲಿ ಕೋಟಿ- ಚೆನ್ನಯರ ಮೂರ್ತಿಯೂ ಇದೆ. ಕುಟೀರದ ಆವರಣಕ್ಕೆ ಬರಲು ಸಾರ್ವ ಜನಿಕರಿಗೆ ಅವಕಾಶ ಕಲ್ಪಿಸ ಲಾಗಿದ್ದು,  ಅದನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಮೂರ್ತಿಯ ಸುರಕ್ಷತೆ ದೃಷ್ಟಿಯಿಂದ ಆವರಣದ ಒಳಗಡೆ ಪ್ರವೇಶವನ್ನು ನಿರ್ಬಂಧಿಸಬೇಕು. ಮಾತ್ರವಲ್ಲ ಸಿಬಂದಿ ನೇಮಿಸಿ, ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲ್‌, ಉಪಾಧ್ಯಕ್ಷ ಪ್ರವೀಣ್‌ ಕುಮಾರ್‌ ಕೆಡೆಂಜಿಗುತ್ತು, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಕಾರ್ಯ ನಿರ್ವಹಣಾಧಿಕಾರಿ ಆರ್‌.ಸಿ. ನಾರಾಯಣ್‌ ಆಗ್ರಹಿಸಿದ್ದಾರೆ.

ಸಾರ್ವತ್ರಿಕ ಖಂಡನೆ
ದೇಯಿ ಬೈದ್ಯೆàತಿ ಮೂರ್ತಿಯ ಪಕ್ಕದಲ್ಲಿ  ಹನೀಫ್‌ ಅಶ್ಲೀಲ ಭಂಗಿಯಲ್ಲಿ ಕುಳಿತುಕೊಂಡು ಫೂಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ. ಶನಿವಾರ ರಾತ್ರಿ ವೇಳೆ ಫೇಸ್‌ಬುಕ್‌ ಹಾಗೂ ವಾಟ್ಸ್‌ ಆ್ಯಪ್‌ನಲ್ಲಿ ಈ ಫೂಟೋ ಕಾಣಿಸಿಕೊಂಡಿದೆ. ಸಾಮಾಜಿಕ ಅಶಾಂತಿಗೆ ಕಾರಣ ವಾಗ  ಬಹುದಾದ ಈ ಕೃತ್ಯದ ಬಗ್ಗೆ ಸಮಾಜದ ಎಲ್ಲ ವರ್ಗದವರಿಂದ ಸಾರ್ವತ್ರಿಕ ವಾಗಿ ಖಂಡನೆ ವ್ಯಕ್ತವಾಗಿತ್ತು. ಆರೋಪಿ ಬಂಧನಕ್ಕೆ ಆಗ್ರಹಿಸಲಾಗಿತ್ತು. 

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.