ಆಧಾರ್ ಲಿಂಕ್ ಮಾಡದಿದ್ರೆ ಸಿಮ್ ಕಾರ್ಡ್ ನಿಷ್ಕ್ರಿಯ
Team Udayavani, Sep 11, 2017, 7:30 AM IST
ಹೊಸದಿಲ್ಲಿ: ಮೊಬೈಲ್ ನಂಬರ್ಗೆ ಆಧಾರ್ ಲಿಂಕ್ ಮಾಡಿಕೊಂಡಿದ್ದೀರಾ? ಇಲ್ಲ ಎಂದಾದರೆ, ತತ್ಕ್ಷಣ ಮಾಡಿಸಿಕೊಳ್ಳಿ. ಒಂದೊಮ್ಮೆ 2018-ಫೆಬ್ರವರಿಯ ಒಳಗೂ ಮಾಡಿಸಿಕೊಳ್ಳದೆ ನಿರ್ಲಕ್ಷಿಸಿದರೆ ಸಿಮ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಸುಪ್ರೀಂಕೋರ್ಟ್ ಫೆಬ್ರವರಿಯಲ್ಲಿ ನೀಡಿರುವ ಆದೇಶದನ್ವಯ ಕೇಂದ್ರ ಸರಕಾರವು ಸಾರ್ವಜನಿಕರಿಗೆ ಈ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆಧಾರ್ ಹಾಗೂ ಮೊಬೈಲ್ ನಂಬರ್ ಸಂಯೋಜನೆ ಮಾಡಿಕೊಳ್ಳುವ (ಲಿಂಕ್) ಪ್ರಕ್ರಿಯೆಗೆ 2018ರ ಫೆಬ್ರವರಿಯ ಗಡುವು ವಿಧಿಸಲಾಗಿದೆ. ಲಿಂಕ್ ಆಗದೇ ಇದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡತುಂಡವಾಗಿ ಹೇಳಿದೆ. ಕ್ರಿಮಿನಲ್, ವಂಚನೆ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಆರೋಪಿಗಳನ್ನು ಪತ್ತೆ ಹಚ್ಚಲು ಸುಲಭವಾಗುವಂತೆ ಈ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಸುಪ್ರೀಂನ ಈ ಆದೇಶವನ್ನಾಧರಿಸಿ ಗ್ರಾಹಕರಿಗೆ ಈ ಕುರಿತು ಸೂಚನೆ ನೀಡುವಂತೆ ಕೇಂದ್ರ ಸರಕಾರ ಈಗಾಗಲೇ ಟೆಲಿಕಾಂ ಕಂಪೆನಿಗಳಿಗೆ ನಿರ್ದೇಶಿಸಿದೆ. ಇ-ಮೇಲ್, ಮೆಸೇಜ್ ಅಥವಾ ಜಾಹೀರಾತುಗಳನ್ನು ನೀಡುವ ಮೂಲಕ ಗ್ರಾಹಕರಿಗೆ ಮಾಹಿತಿ ನೀಡಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.