ಹಕ್ಕಿನ ಮೂಲಕ ಸೌಲಭ್ಯ ಪಡೆಯಿರಿ
Team Udayavani, Sep 11, 2017, 11:53 AM IST
ಬೆಂಗಳೂರು: ಹೈದರಾಬಾದ್-ಕರ್ನಾಟಕ ಪ್ರದೇಶದ ಜನರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಹಕ್ಕಿನ ಮೂಲಕ ಪಡೆಯಬೇಕೇ ಹೊರತು, ಸಚಿವರು ಅಧಿಕಾರಿಗಳ ಮನೆಗಳಿಗೆ ಅಲೆಯುವ ಮೂಲಕವಲ್ಲ ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ತಿಳಿಸಿದ್ದಾರೆ.
ಭಾನುವಾರ ನಗರದ ಗಾಂಧಿಭವನದಲ್ಲಿ ಹೈದರಾಬಾದ್-ಕರ್ನಾಟಕ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಹೈ-ಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೈ-ಕ ಭಾಗವರು ಹಿಂದಿನಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ದೊರೆಯಬೇಕಾದ ಹಕ್ಕುಗಳ ಬಗ್ಗೆ ದನಿ ಎತ್ತದಿರುವುದೇ ಇದಕ್ಕೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿದರೆ 30 ಲಕ್ಷ ಹೆಕ್ಟೇರ್ ಪ್ರದೇಶವನ್ನು ನೀರಾವರಿಗೆ ಒಳಪಡಿಸಬಹುದು. ಆದರೆ, ಸರ್ಕಾರದ ನಿರ್ಲಕ್ಷ್ಯದಿಂದ ಅದು ಸಾಧ್ಯವಾಗಿಲ್ಲ. ಹೈ-ಕ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕಿದ್ದ ಕೃಷ್ಣ ಮೇಲ್ದಂಡೆ ಯೋಜನೆಯ ಶೇ.10ರಷ್ಟು ಹಣವನ್ನು ಬೆಂಗಳೂರು ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. ಹೀಗಾಗಿ ಈ ಭಾಗದ ಅಭಿವೃದ್ಧಿಗಾಗಿ ಒಗ್ಗಟ್ಟಿನ ಹೋರಾಟ ಮುಖ್ಯ ಎಂದರು. ಸಂಘದ ಅಧ್ಯಕ್ಷ ಸಂಗಮೇಶ ಬಾದವಾಡಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.