ತಗ್ಗದ ಮಳೆ ಆರ್ಭಟಕ್ಕೆ ತಬ್ಬಿಬ್ಟಾದ ನಗರ
Team Udayavani, Sep 11, 2017, 11:53 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ತಗ್ಗಿಲ್ಲ. ಶನಿವಾರ ಇಡೀ ರಾತ್ರಿ ಭಾರಿ ಪ್ರಮಾಣದ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಹಲವು ಕೆರೆಗಳು ತುಂಬಿ ಕೋಡಿ ಬಿದ್ದವೆ. ಕೆಲವೆಡೆ ಹತ್ತಾರು ವಾಹನಗಳು ಮುಳುಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ.
ನಗರದ ಹಲವು ರಸ್ತೆಗಳು ಕೆರೆಗಳಂತಾಗಿದ್ದವು. ಇನ್ನು ಶನಿವಾರ ಒಂದೇದಿನ 40ಕ್ಕೂ ಹೆಚ್ಚು ಮರಗಳು ಧರೆಗುರುಳಿದವು. ಬಿದ್ದ ಮರಗಳನ್ನು ತೆರವುಗೊಳಿಸುವುದು ವಿಳಂಬವಾದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆರೆಗಳು ಹಾಗೂ ಕಾಲುವೆಗಳು ತುಂಬಿ ಹರಿದು ಮಳೆ ನೀರು ರಸ್ತೆಯಲ್ಲೇ ಹರಿಯಿತು.
ವೃಷಭಾವತಿ, ಕೋರಮಂಗಲ ರಾಜಕಾಲುವೆಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳು ಸಮಸ್ಯೆಗೆ ಒಳಗಾವು. ಕೆಂಗೇರಿಯ ಸಮೀಪದ ದುಬಾಸಿಪಾಳ್ಯ ಹಾಗೂ ಕೊಮ್ಮಘಟ್ಟ ಕೆರೆಗಳ ಕೋಡಿ ಒಡೆದ ಹಿನ್ನೆಲೆಯಲ್ಲಿ ಆ ಭಾಗದ ರಸ್ತೆಗಳೆಲ್ಲ ಕೆರೆಗಳಂತಾಗಿದ್ದವು.
ಮೈಸೂರು ಕಡೆಯಿಂದ ನಗರಕ್ಕೆ ಬರುತ್ತಿದ್ದ ಬಸ್ ಅರ್ಧ ಮುಳುಗಿದ್ದರಿಂದ 36ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ಸಾವು-ಬದುಕಿನ ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುವ ಮೂಲಕ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ರಕ್ಷಿಸಿ, ಬೋಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಆರು ಅಡಿಯಷ್ಟು ನೀರು
ಇದರೊಂದಿಗೆ ಮೈಸೂರು ರಸ್ತೆಯ ಬಿಡಿಎ ಎನ್‌ಕ್ಲೇವ್ ಮುಂಭಾಗದ ರಾಜಕಾಲುವೆಗೆ ಟಾಟಾ ಏಸ್ ವಾಹನವೊಂದು ಕೊಚ್ಚಿ ಹೋಗಿದೆ ಎನ್ನಲಾಗಿದೆ. ಇಲ್ಲಿ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿರುವುದರಿಂದ ವೃಷಭಾವತಿ ಕಾಲುವೆಯಲ್ಲಿ ತಡೆ ಉಂಟಾಗಿದ್ದು, ರಸ್ತೆಯಲ್ಲಿ ಸುಮಾರು 6 ಅಡಿಯಷ್ಟು ನೀರು ನಿಂತಿತ್ತು.
ಗೋಡೆ ಹತ್ತಿದ ನಿವಾಸಿಗಳು
ಎಚ್‌ಎಸ್‌ಆರ್ ಬಡಾವಣೆಯಲ್ಲಿ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದರಿಂದಾಗಿ ನಿವಾಸಿಗಳು ತಮ್ಮದೇ ಮನೆಗಳಿಗೆ ಗೋಡೆ ಹಾಗೂ ಗೇಟುಗಳನ್ನು ಹಾರಬೇಕಾಯಿತು. ಇದರೊಂದಿಗೆ ಮನೆಯಲ್ಲಿ ಸೇರಿದ್ದ ಕೊಳಚೆ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದರು.
ಮನೆ -ಗೋಡೆ ಕುಸಿತ
ನಗರದ ಎಂಟು ವಲಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಭಾಗಗಳಲ್ಲಿ ಮನೆ ಹಾಗೂ ಮನೆಯ ಗೋಡೆಗಳು ಮಳೆಗೆ ಕುಸಿದು ಬಿದ್ದಿವೆ. ಆದರೆ, ಅದೃಷ್ಟವಶಾತ್ ಎಲ್ಲಿಯೂ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.