ದಸರಾ ವೈಭವಯುತವಾಗಿ ಆಚರಿಸಿ: ಸಿಎಂ
Team Udayavani, Sep 11, 2017, 12:22 PM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ಮೈಸೂರಿಗೆ ಆಗಮಿಸಿದ ಅವರು, ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಸರಾ ಮಹೋತ್ಸವವನ್ನು ವೈಭವಯುತವಾಗಿ ನಡೆಸಲು ಮಾರ್ಗದರ್ಶನ ನೀಡಿದರು. ಹಾಗೆಯೇ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿ ರಂದೀಪ್‌ರಿಂದ ಪಡೆದುಕೊಂಡರು.
ಮುಖ್ಯವಾಗಿ ವಿಜಯದಶಮಿ ಮೆರವಣಿಗೆ ಸಾಗುವ ಅರಮನೆ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ತಿಳಿಸಿದರು.
ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಷ್ಟೇ ಅಲ್ಲದೆ, ನಗರದ ವಿವಿಧೆಡೆಯೂ ದೀಪಾಲಂಕಾರ ಮಾಡುವಂತೆ ಸೂಚಿಸಿದ ಅವರು, ದಸರಾ ಆಮಂತ್ರಣ ಪತ್ರಿಕೆಗಳಲ್ಲಿ ಶಿಷ್ಟಾಚಾರ ಪಾಲಿಸುವುದು, ಸ್ತಬ್ಧಚಿತ್ರ ಹಾಗೂ ವಸ್ತುಪ್ರದರ್ಶನದ ಮಳಿಗೆಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಮುಗಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಜಂಬೂಸವಾರಿ ಸಾಗುವ ಮಾರ್ಗದ ರಸ್ತೆಯನ್ನು ಕಾಂಕ್ರಿಟ್ ರಸ್ತೆಯನ್ನಾಗಿ ಮಾಡಲಾಗಿದೆ. ಕೆಲವು ಕಡೆ ಮಳೆಗಾಲ ಮುಗಿದ ಬಳಿಕ ಕಾಮಗಾರಿ ಮಾಡಲು ಸೂಚಿಸಲಾಗಿದೆ ಎಂದರು.
ಮಳೆ ಬರುತ್ತಿರುವುದರಿಂದ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಗುಂಡಿ ಮುಚ್ಚಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ರಂದೀಪ್ ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ನಗರ ಪೊಲೀಸ್ ಆಯುಕ್ತರಾದ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್, ಐಜಿಪಿ ವಿಫುಲ್‌ಕುಮಾರ್, ಜಿಪಂ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೀಶ್ ಸೇರಿದಂತೆ ಜಿಲ್ಲಾಮಟ್ಟದ ಹಲವು ಅಧಿಕಾರಿಗಳು ಇದ್ದರು.
“ಬೆಂಗಳೂರಲ್ಲಿ ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಕ್ರಮ’
ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜಕಾಲುವೆಗಳ ಒತ್ತುವರಿ, ರಾಜಕಾಲುವೆಗಳ ಮೇಲೆ ಕಟ್ಟಡಗಳನ್ನು ಕಟ್ಟಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಆಡಳಿತಕ್ಕೆ ಕ್ರಮಕ್ಕೆ ಸೂಚಿಸಿದ್ದೇನೆ. ಸಚಿವ ಜಾರ್ಜ್ ಬೆಳಗಿನ ಜಾವ 3ಗಂಟೆವರೆಗೂ ಕೆಲಸ ಮಾಡುತ್ತಿದ್ದಾರೆ. ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ತೆರವುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ತಿರುಗೇಟು: ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆ ಬಿದ್ದು ಉಂಟಾಗಿರುವ ಅನಾಹುತ ತಡೆಯಲು ರಾಜ್ಯಸರ್ಕಾರ ವಿಫಲವಾಗಿದೆ ಎನ್ನುವಂತೆ ಕೇಂದ್ರ ಸಚಿವ ಅನಂತಕುಮಾರ್ ಆರೋಪ ಮಾಡುತ್ತಾರೆ. 5 ವರ್ಷ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ರಲ್ಲಾ ಏನು ಮಾಡಿದ್ರು?
ಅವರು ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದರೆ ಇಂತಹ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು. ಅಲ್ಲದೆ, 2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಅವರು, ನಿಗದಿಯಂತೆ 2018ರ ಏಪ್ರಿಲ್-ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮಂಡಳಿ ಅಧ್ಯಕ್ಷರಾದ ಎಚ್.ಎ.ವೆಂಕಟೇಶ್, ಮಲ್ಲಿಗೆ ವೀರೇಶ್, ಬಿ.ಸಿದ್ದರಾಜು, ಜಿ.ವಿ.ಸೀತಾರಾಂ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಂದಿನಿ ಚಂದ್ರಶೇಖರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.