ಗೌರಿ ಹತ್ಯೆ ತನಿಖೆ ಚುರುಕು; ಟೋಲ್ ಗೇಟ್ ಸಿಸಿಟಿವಿ ಡಿವಿಆರ್ ವಶಕ್ಕೆ
Team Udayavani, Sep 11, 2017, 3:21 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಸೋಮವಾರ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಟೋಲ್ ಗೇಟ್ ಗಳಲ್ಲಿರುವ ಸಿಸಿಟಿವಿ ಡಿವಿಆರ್ ಅನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಅಲ್ಲದೇ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡಕ್ಕೆ ಮತ್ತೆ 40 ಅಧಿಕಾರಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಗೌರಿ ಹತ್ಯೆಗೈದ ಹಂತಕರ ಬಂಧನಕ್ಕಾಗಿ ಸಿಸಿಟಿವಿ ಫೂಟೇಜ್ ಬೆನ್ನು ಹತ್ತಿರುವ ಎಸ್ ಐಟಿ ಅಧಿಕಾರಿಗಳು, ಕಳೆದ 3-4 ದಿನಗಳಿಂದ ಪಾರ್ಕ್, ಪೇ ಪಾರ್ಕಿಂಗ್ ಗಳಲ್ಲಿ ನಿಲ್ಲಿಸಿರುವ ಕಾರುಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಎಲ್ಲಾ ಆಯಾಮಗಳಿಂದಲೂ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಒಟ್ಟು 1600 ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡಿರುವ ಅಧಿಕಾರಿಗಳು ಹಂತಕರನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.