ಸಂಘಟನಾ ಸಾಮರ್ಥ್ಯದ ಅನಾವರಣ : ಮಹೇಶ್ ಠಾಕೂರ್
Team Udayavani, Sep 12, 2017, 7:40 AM IST
ಉಡುಪಿ: ಪರ್ಕಳದಂತಹ ಸಣ್ಣ ಊರಿನಲ್ಲಿ ಅನೇಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು 9 ದಿನಗಳ ವೈಭವಯುತ ಮತ್ತು ಸ್ಮರಣೀಯ ಸುವರ್ಣ ಮಹೋತ್ಸವವನ್ನು ಯಶಸ್ವಿಯಾಗಿ ಸಂಪನ್ನಗೊಳಿಸಿದ್ದು, ನಮ್ಮ ಸಂಘಟನಾ ಸಾಮರ್ಥ್ಯದ ಅರಿವಾಗಿದೆ ಎಂದು ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಠಾಕೂರ್ ಹೇಳಿದರು.
ಅವರು ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ಸುವರ್ಣ ಸಮಿತಿಯು ಆಯೋಜಿಸಿದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಮಾತನಾಡಿ, ಸುವರ್ಣ ಸಂಭ್ರಮಾಚರಣೆಯ ಸಂದರ್ಭದಲ್ಲಿ ಊರಿನ ಹೆಚ್ಚಿನ ಎಲ್ಲ ಮಹಿಳೆಯರು ನಮ್ಮೊಂದಿಗೆ ಸಹಕರಿಸಿ, ದುಡಿದು ಕಾರ್ಯಕ್ರಮಗಳ ಯಶಸ್ಸಿನ ಕಾರಣೀಕರ್ತರಾಗಿದ್ದಾರೆ. ಹಾಗೆಯೇ ಸುವರ್ಣ ಮಹೋತ್ಸವ ಆಚರಣೆಯ ಆರಂಭದಲ್ಲಿ ಹಾಕಿಕೊಂಡ ಶೌಚಾಲಯ, ಬಸ್ ನಿಲ್ದಾಣ ನಿರ್ಮಾಣ ಮುಂತಾದ ಸಮಾಜಮುಖೀ ಕಾರ್ಯಕ್ರಮಗಳನ್ನು ಪೂರ್ಣ ಗೊಳಿಸಲು ತಾವು ಬದ್ಧ ಎಂದರು. ಕಾರ್ಯಕರ್ತರ ಪರವಾಗಿ ಮಾತನಾಡಿದ ಅಲ್ವಿನ್ ಡಿಸೋಜ, ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ತಮ್ಮ ತಮ್ಮ ಧಾರ್ಮಿಕತೆಯನ್ನು ಬದಿಗೊತ್ತಿ ಕೇವಲ ಭಾರತೀಯರಂತೆ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಲು ಅವಕಾಶ ದೊರಕಿದ್ದು ನನ್ನ ಜೀವನದ ಅಪೂರ್ವ ಕ್ಷಣ ಎಂದರು. ಮಣಿಪಾಲ ಠಾಣಾಧಿಕಾರಿ ಗೋಪಾಲಕೃಷ್ಣ, ಶಿವರಾಂ ಶೆಟ್ಟಿ, ಸುಮಾ ನಾಯಕ್, ಸರಳ ಶೆಟ್ಟಿ, ಸುಂದರ್ ಶೆಟ್ಟಿ ಮಾತನಾಡಿದರು. ಪದಾಧಿಕಾರಿಗಳಾದ ಮನೋಜ್ ಹೆಗ್ಡೆ, ಸುರೇಶ ಶಾನುಭಾಗ್, ಭಾಸ್ಕರ್ ಆಚಾರ್ಯ, ರಘುರಾಮ ಉಪಾಧ್ಯ ಉಪಸ್ಥಿತರಿದ್ದರು. ಸಮಿತಿ ಸಂಚಾಲಕ ದಿಲೀಪ್ ರಾಜು ಹೆಗ್ಡೆ ಸ್ವಾಗತಿಸಿದರು. ಕೋಶಾಧಿಕಾರಿ ಪ್ರಮೋದ್ ಕುಮಾರ್ ವಂದಿಸಿದರು. ಉಮೇಶ್ ಶಾನಭೋಗ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.