ಸತ್ಯಾರ್ಥಿ ಭಾರತ ಯಾತ್ರೆ ಆರಂಭ
Team Udayavani, Sep 12, 2017, 8:30 AM IST
ಹೊಸದಿಲ್ಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಕಳ್ಳ ಸಾಗಣೆ ಸೇರಿ ಮಾನವ ಸಾಗಣೆ ವಿರುದ್ಧ ಹೋರಾಟಕ್ಕಿಳಿದ ನೊಬೆಲ್ ಪುರಸ್ಕೃತ ಕೈಲಾಶ್ಸತ್ಯಾರ್ಥಿ ತಮ್ಮ ಮಹತ್ವಾಕಾಂಕ್ಷೆಯ “ಭಾರತ ಯಾತ್ರೆ’ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಪ್ರವಾಸ ಬೆಳೆಸಿ ಜಾಗೃತಿ ಮೂಡಿಸುವ ಅವರ “ಭಾರತ ಯಾತ್ರೆ’ ಅಭಿಯಾನ ಅಕ್ಟೋಬರ್ 16ರಂದು ನವದೆಹಲಿಯಲ್ಲಿ ಕೊನೆಗೊಳ್ಳಲಿದೆ. ಒಟ್ಟು 35 ದಿನಗಳ ಕಾಲ ಈ ಯಾತ್ರೆ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೈಲಾಶ್ ಸತ್ಯಾರ್ಥಿ, “”ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳಂಥ ಕೃತ್ಯಗಳಿಂದ ಮಕ್ಕಳು ಮುಗ್ಧತೆ, ನಗು ಸೇರಿ ತಮ್ಮ ಹಕ್ಕುಗಳನ್ನೇ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣ ವಾಗುತ್ತಿದೆ. ಅವರ ಸ್ವಾತಂತ್ರ್ಯವೇ ಹರಣವಾ ಗುತ್ತಿದೆ. ಇದನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯ ವಿಲ್ಲ. ನಮ್ಮ ಮೌನವೇ ಇಂಥ ಕುಕೃತ್ಯ ಗಳಿಗೆ ಕಾರಣವಾಗುತ್ತಿದೆ. ಇದರ ವಿರುದ್ಧವೇ ನಮ್ಮ ಹೋರಾಟ. ಭಾರತ ಯಾತ್ರೆಯ ಉದ್ದೇಶವೇ ಇದು” ಎಂದು ಹೇಳಿದ್ದಾರೆ.
ಅಲ್ಲದೆ, “”ನವ ಭಾರತ ನಿರ್ಮಾಣವಾಗ ಬೇಕಾದರೆ ದೇಶದ ಮಕ್ಕಳು ಮೊದಲು ಸುರಕ್ಷತೆಯಿಂದ ಇರುವಂತೆ ನೋಡಿಕೊಳ್ಳ ಬೇಕು” ಎಂದಿದ್ದಾರೆ. ಯಾತ್ರೆಗೆ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರೂ ಬೆಂಬಲಿಸಿ ಬರೆದ ಪತ್ರವನ್ನು ಸತ್ಯಾರ್ಥಿ ಓದಿ ಹೇಳಿದರು. 2014ರಲ್ಲಿ ಮಕ್ಕಳ ಹಕ್ಕುಗಳ ಪರ ಹೋರಾಟ ನಡೆಸುತ್ತಿರುವ ಸತ್ಯಾರ್ಥಿ ಅವರು ವಿಶ್ವದ ಶ್ರೇಷ್ಠ ಪುರಸ್ಕಾರಗಳಲ್ಲಿ ಒಂದಾದ ನೊಬೆಲ್ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.