ಬ್ಲೂವೇಲ್: ನ್ಯಾಯಾಂಗ ಹೋರಾಟ ಆರಂಭ
Team Udayavani, Sep 12, 2017, 8:55 AM IST
ಹೊಸದಿಲ್ಲಿ: ದೇಶದಲ್ಲಿ ಐವರನ್ನು ಆಪೋಷನ ತೆಗೆದು ಕೊಂಡ ಬ್ಲೂವೇಲ್ ಚಾಲೆಂಜ್ ಗೇಮ್ ಮೇಲೆ ನಿಷೇಧ ಹೇರಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮತ್ತು ಪಂಜಾಬ್ ಹೈಕೋರ್ಟ್ನಲ್ಲಿ ನ್ಯಾಯಾಂಗ ಹೋರಾಟ ಶುರುವಾಗಿದೆ. ತಮಿಳುನಾಡಿನ ಮಧುರೆಯ 73 ವರ್ಷದ ಸಿ.ಆರ್.ಜಯ ಸುಕಿನ್ ಎಂಬವರು ಮಾರಕ ಗೇಮ್ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಇಳಿದಿದ್ದಾರೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಅರ್ಜಿಯನ್ನು ಸ್ವೀಕರಿಸಿದ್ದು, 15ರಂದು ಆದ್ಯತೆಯಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಫೇಸ್ಬುಕ್, ಗೂಗಲ್ ಮತ್ತು ಯಾಹೂಗಳಿಂದ ಗೇಮ್ನ ಲಿಂಕ್ ತೆಗೆದು ಹಾಕುವ ಬಗ್ಗೆ ಆ.22ರಂದು ದೆಹಲಿ ಹೈಕೋರ್ಟ್ ನಿರ್ದೇಶಿಸಿತ್ತು.
ಕೇಂದ್ರಕ್ಕೆ ನೋಟಿಸ್: ಇದೇ ವೇಳೆ ಗೇಮ್ ಬಗ್ಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಕೇಂದ್ರ, ಪಂಜಾಬ್, ಹರ್ಯಾಣ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢಕ್ಕೆ ನೋಟಿಸ್ ನೀಡಿದೆ. ಬ್ಲೂವೇಲ್ ನಿಷೇಧಿಸು ವಂತೆ ಸಲ್ಲಿಕೆಯಾಗಿದ್ದ ಅರ್ಜಿ ಪರಿಶೀಲಿಸಿ ಕ್ರಮ ಕೈಗೊಂಡಿದೆ. 20ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.