ಪ್ರಧಾನಿ ಹುಟ್ಟುಹಬ್ಬ: ಮಳೆ ಸಂತ್ರಸ್ತರಿಗೆ ಅಕ್ಕಿ ವಿತರಣೆ


Team Udayavani, Sep 12, 2017, 11:42 AM IST

yadiyurappa.jpg

ಬೆಂಗಳೂರು: ನಗರದಲ್ಲಿ ಮಳೆಹಾನಿಯಿಂದ ಸಂತ್ರಸ್ತರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆ.17ರಂದು ಅಕ್ಕಿ ವಿತರಿಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಸೆ. 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಅದರ ಅಂಗವಾಗಿ ಪ್ರವಾಹ ಸಂತ್ರಸ್ತರಿಗೆ ಅಕ್ಕಿ ವಿತರಿಸಲಾಗುವುದು. ಅದಕ್ಕಾಗಿ ಸುಮಾರು 2000 ಕುಟುಂಬಗಳನ್ನು ಪಟ್ಟಿ ಮಾಡಲಾಗಿದೆ. ಅಂದು ಸಾಂಕೇತಿಕವಾಗಿ ಅಕ್ಕಿ ವಿತರಿಸಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ಮಳೆಯಿಂದ ತೊಂದರೆಗೊಳಗಾದವರಿಗೆ ಪಕ್ಷ ತನ್ನದೇ ಆದ ರೀತಿಯಲ್ಲಿ ಸಹಾಯ ಮಾಡಲು ಮುಂದಾಗಿದೆ. ಈಗಾಗಲೇ ನಗರದ ಶಾಸಕರು, ಸಂಸದರಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ಹೆಚ್ಚು ಅನಾಹುತ ಸಂಭವಿಸಿದೆಯೋ ಅಲ್ಲೆಲ್ಲಾ ವಿಶೇಷ ಗಮನ ನೀಡಿ ಜನರಿಗೆ ಸ್ಪಂದಿಸುವಂತೆ ತಿಳಿಸಲಾಗಿದೆ ಎಂದರು.

ಇದೇ ವೇಳೆ ಪ್ರವಾಹಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು, ನಗರದ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಅವರ ಅಸಮರ್ಥತೆ ಮತ್ತು ಕೆಟ್ಟ ನಿರ್ವಹಣೆಗೆ ಬೆಂಗಳೂರಿನ ನಾಗರಿಕರು ಬೆಲೆ ತೆತ್ತಿದ್ದು ಸಾಕು. ಇನ್ನಾದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜನ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಸಾವಿರಾರು ಜನರ ಬದುಕು ಬೀದಿಗೆ ಬಂದಿದ್ದು, ಅನೇಕ ಪ್ರಾಣಹಾನಿಯಾಗಿದೆ. ಪ್ರಕೃತಿ ವಿಕೋಪದಿಂದ ಸಮಸ್ಯೆ ಎದುರಾಗಿದ್ದರೂ ಹೆಚ್ಚಿನ ಅನಾಹುತಕ್ಕೆ ಸರ್ಕಾರ ಮತ್ತು ಉಸ್ತುವಾರಿ ಸಚಿವ ಜಾರ್ಜ್‌ ಹೊಣೆಯಾಗಿದ್ದಾರೆ ಎಂದರು.

ಬೆಂಗಳೂರು ನಗರದಲ್ಲಿ ಹೂಳು ತೆಗೆಯಲು, ರಾಜಕಾಲುವೆ ನಿರ್ಮಾಣಕ್ಕೆ 702 ಕೋಟಿ ರೂ., ರಸ್ತೆ ಹೊಂಡ ಮುಚ್ಚಲು ಮತ್ತು ಹೊಸ ರಸ್ತೆ ನಿರ್ಮಾಣಕ್ಕೆ 900 ಕೋಟಿ ರೂ. ಖರ್ಚು ಮಾಡಲಾಗಿದೆ. ದುರಸ್ತಿಗೆ ಇನ್ನೂ 300 ಕೋಟಿ ರೂ. ಬೇಕು ಎಂದು ಸಚಿವರು ಹೇಳುತ್ತಿದ್ದಾರೆ.  

ಹಾಗಿದ್ದರೆ ಈ ಹಿಂದೆ ಏಕೆ ಗುಣಮಟ್ಟದ ಕಾಮಗಾರಿ ನಡೆಸಿಲ್ಲ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಬೆಂಗಳೂರಿನಲ್ಲಿ ನ್ಯೂಯಾರ್ಕ್‌ಗಿಂತಲೂ ಉತ್ತಮವಾಗಿ ಪ್ರವಾಹ ನಿರ್ವಹಣೆಗೆ ಸಜ್ಜಾಗಿದ್ದೇವೆ ಎಂಬ ಸಚಿವರ ಹೇಳಿಕೆಯೇ ಹಾಸ್ಯಾಸ್ಪದ ಎಂದು ಹೇಳಿದರು. ಮಳೆಯಿಂದ ನಗರದಲ್ಲಿ ಸಾಕಷ್ಟು ಅನಾಹುತ ಸಂಭವಿಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಕಡೆ ಕೂಡ ಹೋಗಿ ಸಮಸ್ಯೆಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.