ಹುತಾತ್ಮ ಅರಣ್ಯ ಸಿಬ್ಬಂದಿಯ ಮಕ್ಕಳಿಗೆ ವಿದ್ಯಾರ್ಥಿ ವೇತನ


Team Udayavani, Sep 12, 2017, 11:43 AM IST

Araya-Bhavana.jpg

ಬೆಂಗಳೂರು: ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ಪ್ರಾಣ ಕಳೆದುಕೊಳ್ಳುವ ಸಿಬ್ಬಂದಿ ಕುಟುಂಬಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕರ್ತವ್ಯ ನಿರತರಾಗಿದ್ದಾಗ ಮೃತಪಡುವ ಸಿಬ್ಬಂದಿ ಮಕ್ಕಳಿಗೆ ಪ್ರಸ್ತುತ ಸಾಲಿನಿಂದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ. ಅರಣ್ಯ ಭವನದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸಚಿವರು ಮಾತನಾಡಿದರು.

ಅರಣ್ಯ ರಕ್ಷಣೆ ಕಾರ್ಯಾಚರಣೆ ವೇಳೆ ಅವಘಡಗಳು ಅಥವಾ ಕಾಡು ಪ್ರಾಣಿಗಳ ದಾಳಿಗೊಳಗಾಗಿ ಪ್ರಾಣ ತ್ಯಾಗ ಮಾಡುವ ಕರ್ತವ್ಯ ನಿರತ ಸಿಬ್ಬಂದಿ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಇದಕ್ಕಾಗಿ ಅರಣ್ಯ ಇಲಾಖೆ ಹುತಾತ್ಮರ ದಿನಾಚರಣೆ ಸಮಿತಿ ಸಂಗ್ರಹಿಸಿರುವ 20 ಲಕ್ಷ ರೂ. ದೇಣಿಗೆ ಹಾಗೂ ಸರ್ಕಾರದ ಅನುದಾನವನ್ನು ಬಳಸಿಕೊಳ್ಳಲಾಗುವುದು. ಇದರಿಂದ ಹುತಾತ್ಮ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂದರು.

ಪರಿಸರ ಸಮತೋಲನಕ್ಕೆ ಅರಣ್ಯ ರಕ್ಷಣೆ ಮುಖ್ಯ. ಅರಣ್ಯ ಸಂರಕ್ಷಣೆ ವಿಚಾರದಲ್ಲಿ ಸರ್ಕಾರದೊಂದಿಗೆ ನಾಗರಿಕ ಸಮಾಜ ಸಹ ಕೈಜೋಡಿಸಬೇಕು. ಅರಣ್ಯ ಹಾಗೂ ವನ್ಯಜೀವಿಗಳ ರಕ್ಷಣೆಗೆ ತಮ್ಮ ಪ್ರಾಣವನ್ನು ತ್ಯಾಗ ಮಾಡುವವರನ್ನು ಸ್ಮರಿಸಿಕೊಳ್ಳುವುದು ನಮ್ಮ ನೈತಿಕ ಹಾಗೂ ಸಾಮಾಜಿಕ ಹೊಣೆಗಾರಿಕೆ. ಕಾಡುಗಳ್ಳ ವೀರಪ್ಪನ್‌ನಿಂದ ಹತರಾದ ಐಎಫ್ಎಸ್‌ ಅಧಿಕಾರಿ ಶ್ರೀನಿವಾಸ್‌ ಮರಣ ಹೊಂದಿದ ದಿನವನ್ನು ರಾಜ್ಯ ಸರ್ಕಾರ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ ಎಂದು ಸಚಿವರು ಸ್ಮರಿಸಿಕೊಂಡರು.

“ಕಾನನ ಸೇನಾನಿಗಳು’ ಧ್ವನಿಸುರಳಿ ಸಿದ್ಧ: ಹುತಾತ್ಮ ಐಎಫ್ಎಸ್‌ ಅಧಿಕಾರಿ ದಿವಂಗತ ಶ್ರೀನಿವಾಸ ಹಾಗೂ ಸಿಬ್ಬಂದಿಗಳ ಕುರಿತ ಕಾನನ ಸೇನಾನಿಗಳು ಚಿತ್ರದ ಧ್ವನಿ ಮುದ್ರಣ ತಯಾರಾಗಿದೆ. ಶೀಘ್ರದ್ಲಲೇ ವಿಡಿಯೋ ಸಿಡಿ ಸಹ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ 50 ಲಕ್ಷ ರೂ. ನೆರವು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಪರಿಹಾರಕ್ಕಾಗಿ ಮನವಿ: ರಾಮನಗರದ ಮಾಗಡಿ ತಾಲೂಕಿನ ಭಂಟರಕುಪ್ಪೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅರಣ್ಯ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಪಂಚಲಿಂಗಯ್ಯ, ನಾಡಿಗೆ ಬಂದ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಿ ವಾಪಸ್‌ ಬರುವಾಗ ಅದೇ ಆನೆಗಳ ಹಿಂಡು ದಾಳಿ ನಡೆಸಿದ್ದರಿಂದ 2016 ಸೆ.9ರಂದು ಮೃತಪಟ್ಟಿದ್ದರು.

25 ಲಕ್ಷ ರೂ. ಪರಿಹಾರ ಹಾಗೂ ಪತ್ನಿಗೆ ಉದ್ಯೋಗ ಕೊಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿತ್ತು. ಆದರೆ, ಆಂತ್ಯಕ್ರಿಯೆ ವೇಳೆ ಕೊಟ್ಟ 5 ಲಕ್ಷ ರೂ. ಬಿಟ್ಟರೆ ಇನ್ಯಾವ ಪರಿಹಾರವೂ ನೀಡಿಲ್ಲವೆಂದು ಪಂಚಲಿಂಗಯ್ಯ ಅವರ ಪತ್ನಿ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ಅವರಿಗೆ ಮನವಿ ಸಲ್ಲಿಸಿದರು. ಮನವಿ ಆಲಿಸಿದ ಸಚಿವರು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.