“ಖಾತೆ ನಿರ್ವಹಣೆ ಬಿಟ್ಟು ಸಮಾಜ ಒಡೆಯಬೇಡ’
Team Udayavani, Sep 13, 2017, 7:05 AM IST
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸುತ್ತಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರನ್ನು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಏಕವಚನ ಮತ್ತು ಕಟು ಶಬ್ದಗಳಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಹಿಂದೆ ತಮ್ಮ ಬಗ್ಗೆ ಮಾತನಾಡಿದ್ದ ಸೋಮಣ್ಣ ಅವರನ್ನು ಎಂ.ಬಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಸೋಮಣ್ಣ, “ಕೊಟ್ಟಿರುವ ಖಾತೆಯನ್ನು ನೆಟ್ಟಗೆ ನಿರ್ವಹಣೆ ಮಾಡುವುದು ಬಿಟ್ಟು ಸಮಾಜ ಒಡೆಯುವ ಕೆಲಸಕ್ಕೆ ಕೈಹಾಕಬೇಡ’ ಎಂದು ಎಂ.ಬಿ.ಪಾಟೀಲ್ ಹೇಳಿದರು. ಅವರ ವಿರುದ್ಧ ಏಕವಚನ ಮತ್ತು ಕಟುಮಾತುಗಳನ್ನೂ ಬಳಸಿದರು.
“ನಾಲ್ಕು ವರ್ಷ ಇಲ್ಲದ ಲಿಂಗಾಯತ ಧರ್ಮ ವಿಚಾರ ಈಗೇಕೆ ಬಂತು? ಬಿ.ಎಸ್.ಯಡಿಯೂರಪ್ಪ ಅವರನ್ನು ನಾವು (ಬಿಜೆಪಿ) ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತಿದ್ದಂತೆ ಸಮಾಜ ಒಡೆಯುವ ಕೆಲಸಕ್ಕೆ ಕೈಹಾಕಿದ್ದೀಯಾ? ನಿನ್ನ ತಂದೆ ಎಷ್ಟು ಗೌರವಸ್ಥರು, ನಿನ್ನ ಕುಟುಂಬ ಎಂತಹ ಘನತೆ ಹೊಂದಿತ್ತು ಎಂಬುದು ನಿನಗೆ ಗೊತ್ತಿಲ್ಲವೇ? ಇನ್ನು ನಾಲ್ಕೈದು ತಿಂಗಳ ನಂತರ ನಿನ್ನ ಗತಿ ಏನಾಗುತ್ತದೆ ಎಂದು ತಿಳಿದುಕೋ…’ ಎಂದು ಸೋಮಣ್ಣ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.